Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....