Homeಮುಖಪುಟಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

- Advertisement -
- Advertisement -

ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನುಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಪೊಲೀಸರ ಈ ಕ್ರಮವು ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳನ್ನು ರಕ್ಷಿಸುವ ಮತ್ತು ಯುವಕರು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವಿನ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

ಇತ್ತೀಚೆಗೆ ನಡೆದ ಡಿಜಿಪಿ-ಐಜಿಪಿ ಸಮ್ಮೇಳನ-2024 ರಲ್ಲಿ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ನಿರ್ದೇಶನಗಳನ್ನು ಅನುಸರಿಸಿ, ಗುಜರಾತ್‌ನ ರಾಜ್ಯ ಪೊಲೀಸ್ ಮುಖ್ಯಸ್ಥ ವಿಕಾಸ್ ಸಹಾಯ್ ಅವರು ನೂತನ ಕಠಿಣ ಸುರಕ್ಷತಾ ಪ್ರೋಟೋಕಾಲ್ ಅನ್ನು ಘೋಷಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ, ಎಲ್ಲಾ ಶಾಲೆಗಳು ಆಯೋಜಿಸುವ ಟ್ರಿಪ್, ಟೂರ್‌ಗಳು, ಪಿಕ್ನಿಕ್‌ಗಳು ಮತ್ತು ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಭೇಟಿಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನು ಒಳಗೊಂಡಿರಬೇಕು ಎಂದು ಪ್ರೊಟೊಕಾಲ್ ಹೇಳಿದೆ.

ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ ಈ ನಿಯಮವು ತೀವ್ರಗೊಳ್ಳುತ್ತದೆ ಮತ್ತು ಅವರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗಿರಬೇಕು ಎಂದು ಡಿಜಿಪಿ ಕಚೇರಿಯ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಅವಶ್ಯಕತೆಯನ್ನು ಪೂರೈಸಲು ಶಾಲಾ ಪ್ರಾಂಶುಪಾಲರು ಈಗ ಸ್ಥಳೀಯ ಪೊಲೀಸ್ ಠಾಣೆಗಳೊಂದಿಗೆ ನೇರವಾಗಿ ಸಮನ್ವಯ ಸಾಧಿಸುವ ಕಾರ್ಯವನ್ನು ಹೊಂದಲಿದ್ದಾರೆ.

ಈ ಆದೇಶವನ್ನು ಜಾರಿಗೊಳಿಸಲು, ರಾಜ್ಯಾದ್ಯಂತ ತ್ವರಿತ ಅನುಷ್ಠಾನಕ್ಕಾಗಿ ಸ್ಪಷ್ಟ ನಿರ್ದೇಶನಗಳನ್ನು ಹೊರಡಿಸುವಂತೆ ಡಿಜಿಪಿ ವಿಕಾಸ್ ಸಹಾಯ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತರಿಪಡಿಸುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ವಿಶ್ವಾಸವನ್ನು ಬಲಪಡಿಸುವುದು ಮತ್ತು ಸಹಕಾರಿ ಸಂಬಂಧವನ್ನು ಬೆಳೆಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 18, 2024 ರಂದು ವಡೋದರಾದಲ್ಲಿ ನಡೆದ ದುರಂತ ಹಾರ್ನಿ ದೋಣಿ ಅಪಘಾತದ ನಂತರ, 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ 14 ಜೀವಗಳು ಬಲಿಯಾದ ನಂತರ, ಗುಜರಾತ್ ಸರ್ಕಾರವು 2024–25 ರ ಶೈಕ್ಷಣಿಕ ಅವಧಿಗೆ ಶಾಲಾ ಪ್ರವಾಸ ನಿಯಮಗಳನ್ನು ಬಿಗಿಗೊಳಿಸಲು ತ್ವರಿತವಾಗಿ ಕ್ರಮ ಕೈಗೊಂಡಿತು.

ಈ ವೇಳೆ ಸರ್ಕಾರವು ಹೊಸ ಕಡ್ಡಾಯ ಮಾರ್ಗಸೂಚಿಗಳನ್ನು ಘೋಷಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳು ಯಾವುದೇ ಪ್ರವಾಸಗಳನ್ನು ಆಯೋಜಿಸುವ ಮೊದಲು ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿತ್ತು. ಇದರಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (RTO) ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಪ್ರತಿ ಪ್ರವಾಸದ ಬಗ್ಗೆ ತಿಳಿಸುವ ಕಟ್ಟುನಿಟ್ಟಿನ ನಿಯಮವೂ ಸೇರಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...