Homeಮುಖಪುಟಗುಜರಾತ್‌: ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 18 ಸೋಂಕಿತರು ಮೃತ

ಗುಜರಾತ್‌: ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 18 ಸೋಂಕಿತರು ಮೃತ

- Advertisement -
- Advertisement -

ಗುಜರಾತ್‌ನ ಭರೂಚ್‌ನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 18 ಕೊರೊನಾ ರೋಗಿಗಳು ಸಾವನ್ನಪ್ಪಿದ ಅಘಾತಕಾರಿ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಾಲ್ಕು ಅಂತಸ್ತಿನ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಮುಂಜಾನೆ 1 ಗಂಟೆಗೆ ಬೆಂಕಿ ಕಾಣಿಸಿದೆ. ವಾರ್ಡ್‌ನಲ್ಲಿ ಸುಮಾರು 50 ರೋಗಿಗಳು ಇದ್ದರು ಎನ್ನಲಾಗಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬೆಳಿಗ್ಗೆ 6.30 ರ ಮಾಹಿತಿಯಂತೆ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 12 ಜನರು ಸಾವಿಗೀಡಾಗಿರುವುದನ್ನು ನಾವು ದೃಡಪಡಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೊರೊನಾ ವಾರ್ಡ್‌ನ 12 ರೋಗಿಗಳು ಬೆಂಕಿ ಮತ್ತು ಹೊಗೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಭರೂಚ್ ಎಸ್‌ಪಿ ರಾಜೇಂದ್ರಸಿಂಹ ಚುಡಾಸಮಾ ತಿಳಿಸಿದ್ದಾರೆ. ಉಳಿದ ಆರು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಯೇ ಅಥವಾ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಗೊಳ್ಳುವಾಗ ಮೃತಪಟ್ಟಿದ್ದಾರೆಯೆ ಎಂಬುದು ಸ್ಪಷ್ಟವಾಗಿಲ್ಲ.

ಕೊರೊನಾ ಚಿಕಿತ್ಸೆಗೆ ಗೊತ್ತುಪಡಿಸಿದ ಆಸ್ಪತ್ರೆಯು ಗುಜರಾತ್‌ ರಾಜಧಾನಿ ಅಹಮದಾಬಾದ್‌ನಿಂದ 190 ಕಿ.ಮೀ ದೂರದಲ್ಲಿರುವ ಭರೂಚ್-ಜಂಬುಸರ್ ಹೆದ್ದಾರಿಯಲ್ಲಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂದು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಬೆಂಕಿ ಭುಗಿಲೆದ್ದ ಒಂದು ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಸುಮಾರು 50 ರೋಗಿಗಳನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ದುರ್ಘಟನೆಗೆ ಪ್ರಧಾನಿ ಮೋದಿ ಸೇರಿದಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಂತಾಪ ಸೂಚಿಸಿದ್ದಾರೆ. ಪ್ರತಿಯೊಬ್ಬ ಮೃತರ ಕುಟುಂಬಗಳಿಗೆ 4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

ಇದನ್ನೂ ಓದಿ: ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...