Homeಮುಖಪುಟಶಾಲೆಗಳಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ನಿಷೇಧಿಸಿದ ಗುಜರಾತ್ ಸರಕಾರ

ಶಾಲೆಗಳಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ನಿಷೇಧಿಸಿದ ಗುಜರಾತ್ ಸರಕಾರ

- Advertisement -
- Advertisement -

ಅಹಮದಾಬಾದ್: ಗುಜರಾತ್ ಸರಕಾರವು ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳ ದುಷ್ಪರಿಣಾಮಗಳಿಂದ ಶಾಲಾ ಮಕ್ಕಳನ್ನು ದೂರವಿರಿಸಲು ಅನುವಾಗುವಂತೆ ಈ ಸಂಬಂಧ ಶಿಕ್ಷಕರು, ಪೋಷಕರು ಮತ್ತು ಮಕ್ಕಳಿಗೆ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳು ಮಕ್ಕಳ ಮೇಲೆ ಬೀರುವ ಪರಿಣಾಮದ ಬಗ್ಗೆ ಸರ್ಕಾರ ‘ಚಿಂತಿತವಾಗಿದೆ’ ಎಂದು ಅದು ತನ್ನ ಸುತ್ತೋಲೆಯಲ್ಲಿ ಹೇಳಿದೆ.

ಇಂತಹ ಮಾರ್ಗಸೂಚಿಯನ್ನು ತಂದಿರುವ ದೇಶದಲ್ಲಿ ಗುಜರಾತ್ ಮೊದಲನೆಯದು ಎಂದು ಹೇಳಿದ ರಾಜ್ಯ ಶಿಕ್ಷಣ ಸಚಿವರು, “ಸಾಮಾಜಿಕ ಮಾಧ್ಯಮದ ಅತಿಯಾದ ಬಳಕೆಯು ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಮತ್ತು ಮೊಬೈಲ್ ಫೋನ್‌ಗಳ ಬಳಕೆಯನ್ನು ಕಡಿಮೆ ಮಾಡಲು ಮತ್ತು ಕ್ರೀಡೆಗಳಿಗೆ ಹೆಚ್ಚಿನ ಗಮನ ನೀಡಲು ನಿಯಮಗಳನ್ನು ರೂಪಿಸಲಾಗುವುದು” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೊಸ ನಿಯಮಗಳ ಅಡಿಯಲ್ಲಿ, “ಶಿಕ್ಷಕರು ತರಗತಿಯಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದನ್ನು ನಿಷೇಧಿಸಲಾಗುವುದು ಮತ್ತು ಪ್ರಾಥಮಿಕ ಶಾಲಾ ಮಕ್ಕಳು ಮೊಬೈಲ್ ಫೋನ್‌ಗಳೊಂದಿಗೆ ಶಾಲೆಗೆ ಬರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಕ್ಕಳ ವಿಶ್ವವಿದ್ಯಾಲಯ, ಶಿಕ್ಷಕರ ವಿಶ್ವವಿದ್ಯಾಲಯ ಹಾಗೂ ಮನೋವೈದ್ಯರೊಂದಿಗೆ ಸಮಾಲೋಚಿಸುವಂತೆ ಮಕ್ಕಳು, ಪೋಷಕರು ಮತ್ತು ಶಿಕ್ಷಕರಿಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.

“ಸಾಮಾಜಿಕ ಮಾಧ್ಯಮಗಳಿಂದ ಮಕ್ಕಳನ್ನು ದೂರವಿಡಲು ಎಲ್ಲಾ ಪೋಷಕರಿಗೆ ಮಾರ್ಗಸೂಚಿಗಳನ್ನು ಹೊರಡಿಸುವ ದೇಶದಲ್ಲಿ ರಾಜ್ಯವು ಮೊದಲನೆಯದಾಗಿದೆ ಮತ್ತು ಮಕ್ಕಳಲ್ಲಿ ಓದುವ ಹವ್ಯಾಸ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜಿಸುವ ಅಭಿಯಾನವನ್ನು ಪ್ರಾರಂಭಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಮಸೀದಿ ನಿರ್ಮಾಣಕ್ಕೆ ಬಜರಂಗದಳ ವಿರೋಧ: ಕಾಮಗಾರಿ ನಿಲುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....