Homeಮುಖಪುಟಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

ಗುಜರಾತ್ | ಸರ್ಕಾರಿ ಯೋಜನೆಯ ಹಣಕ್ಕಾಗಿ ಸಮಸ್ಯೆಗಳಿಲ್ಲದ ಜನರಿಗೆ ಹೃದಯ ಚಿಕಿತ್ಸೆ; ಇಬ್ಬರು ಸಾವು

- Advertisement -
- Advertisement -

ಗುಜರಾತಿನ ಅಹ್ಮದಾಬಾದ್‌ನ ಖ್ಯಾತಿ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವ್ಯಕ್ತಿಗಳ ಸಾವಿನ ನಂತರ ಪ್ರತಿಭಟನಾಕಾರರು ಆಸ್ಪತ್ರೆಯನ್ನು ಧ್ವಂಸಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ. ಸರ್ಕಾರಿ ಆರೋಗ್ಯ ಯೋಜನೆಯ ಹಣಕ್ಕಾಗಿ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ಆಸ್ಪತ್ರೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಗುಜರಾತ್

ಆಸ್ಪತ್ರೆಯು ವೈದ್ಯಕೀಯ ಶಿಬಿರವನ್ನು ಸರ್ಕಾರಿ ಆರೋಗ್ಯ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಮತ್ತು ಯಾವುದೇ ಪೂರ್ವ ಆರೋಗ್ಯ ಸಮಸ್ಯೆಗಳಿಲ್ಲದ ಜನರಿಗೆ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಲಾಗಿದೆ. ”ಆಸ್ಪತ್ರೆಯು ಆರೋಗ್ಯ ಶಿಬಿರವನ್ನು ಆಯೋಜಿಸಿ ಕಡಿ ತಾಲೂಕಿನ ಬೋರಿಸಾನ ಗ್ರಾಮದ ಜನರನ್ನು ದಿನನಿತ್ಯದ ತಪಾಸಣೆಗಾಗಿ ಆಕರ್ಷಿಸಿತ್ತು” ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಖ್ಯಾತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಎರಡು ದಿನಗಳ ಹಿಂದೆ ಆರೋಗ್ಯ ಶಿಬಿರಕ್ಕಾಗಿ ನಮ್ಮ ಗ್ರಾಮಕ್ಕೆ ಆಗಮಿಸಿದ್ದರು. ಶಿಬಿರದಲ್ಲಿ ಭಾಗವಹಿಸಿದ ಜನರ ವಿವರಗಳನ್ನು ದಾಖಲಿಸಿದ ನಂತರ, ಆಸ್ಪತ್ರೆಯು ಹೆಚ್ಚಿನ ಪರೀಕ್ಷೆಯ ನೆಪದಲ್ಲಿ 17 18 ಜನರನ್ನು ಐಷಾರಾಮಿ ಬಸ್‌ನಲ್ಲಿ ಸಾಗಿಸಿತ್ತು” ಎಂದು ಕಡಿಯ ಬೋರಿಸಾನ ಗ್ರಾಮದ ಸರಪಂಚ್ ಹೇಳಿದ್ದಾರೆ. ಗುಜರಾತ್

ಇಬ್ಬರು ರೋಗಿಗಳು ಸಾವನ್ನಪ್ಪಿದ್ದು, ಐವರು ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಪ್ರತಿಯಾಗಿ, ಆಕ್ರೋಶಗೊಂಡ ಗ್ರಾಮಸ್ಥರು ಇಂದು ಮುಂಜಾನೆ ಆಸ್ಪತ್ರೆಗೆ ಮುತ್ತಿಗೆ ಹಾಕಿ, ಆಸ್ಪತ್ರೆಯನ್ನು ಧ್ವಂಸಗೊಳಿಸಿ ಪ್ರತಿಭಟಿಸಿದ್ದಾರೆ.

“ವೈದ್ಯಕೀಯ ಶಿಬಿರಕ್ಕೆ ನನ್ನ ಮಾವ ಹಾಜರಾಗಿದ್ದರು. ಅವರಿಗೆ ಯಾವುದೆ ಕಾಯಿಲೆ ಇಲ್ಲದಿದ್ದರೂ, ಅಹಮದಾಬಾದ್‌ಗೆ ಬಂದು ಅವರಿಗೆ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಮತ್ತು ಅದಕ್ಕಾಗಿ ಕಾರನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ನನ್ನ ಮಾವನನ್ನು ಕೊಂದರು” ಎಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ನಾಗರ್‌ಭಾಯ್ ಸೆಂಮಾ ಅವರ ಸೊಸೆ ಅಮರತ್ ಬೆನ್ ಅವರು ದುಃಖಿತರಾಗಿ ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯ ಸಿಇಒ ಚಿರಾಗ್ ರಜಪೂತ್ ಮಾತನಾಡಿ,”ನಮ್ಮ ಆಸ್ಪತ್ರೆಯು ನವೆಂಬರ್ 10 ರಂದು ಬೊರಿಸಾನಾ ಗ್ರಾಮದಲ್ಲಿ ಶಿಬಿರವನ್ನು ನಡೆಸಿತು. ಅದರಲ್ಲಿ ಅನೇಕ ಜನರು ಭಾಗವಹಿಸಿದ್ದರು. ಸುಮಾರು 20 ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿತ್ತು. ಹಾಗಾಗಿ ನವೆಂಬರ್ 11 ರಂದು ಸ್ವಯಂಪ್ರೇರಣೆಯಿಂದ ನಮ್ಮ ಅಹಮದಾಬಾದ್ ಆಸ್ಪತ್ರೆಗೆ ಅವರು ಬಂದಿದ್ದರು. ಅದರಲ್ಲಿ ಎಲ್ಲರೂ ಆಂಜಿಯೋಗ್ರಫಿಗೆ ಒಳಗಾದರು ಮತ್ತು ಏಳು ಮಂದಿ ಆಂಜಿಯೋಪ್ಲಾಸ್ಟಿ ಮಾಡಿದ್ದರು. ದುರಂತವೆಂದರೆ ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಪೊಲೀಸರ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ’’ ಎಂದು ಹೇಳಿದ್ದಾರೆ.

20 ಗ್ರಾಮಸ್ಥರಿಗೆ ಚಿಕಿತ್ಸೆ ನೀಡಲು ಅವರ ಕುಟುಂಬದ ಒಪ್ಪಿಗೆಯನ್ನು ಆಸ್ಪತ್ರೆ ಪಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಾರೆ” ಎಂದು ಹೇಳಿದ್ದಾರೆ.

ಖ್ಯಾತಿ ಆಸ್ಪತ್ರೆಯಲ್ಲಿ ನಡೆದ ಆಪಾದಿತ ಘಟನೆಯು “ಅತ್ಯಂತ ಗಂಭೀರವಾಗಿದೆ” ಎಂದು ಗುಜರಾತ್ ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. “PMJAY ಅಡಿಯಲ್ಲಿ ರಾಜ್ಯ ವಂಚನೆ ನಿಗ್ರಹ ಘಟಕದಿಂದ (SAFU) ತಕ್ಷಣದ ತನಿಖೆಗೆ ನಾನು ಆದೇಶಿಸಿದ್ದೇನೆ. ವೈದ್ಯಕೀಯ ನಿರ್ಲಕ್ಷ್ಯದ ಪುರಾವೆಗಳು ಅಥವಾ ಈ ಆರೋಪಗಳಿಗೆ ಯಾವುದೇ ಸಿಂಧುತ್ವ ಕಂಡುಬಂದಲ್ಲಿ, ಆಸ್ಪತ್ರೆ ಮತ್ತು ಸಂಬಂಧಿತ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...