Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಕ್ಷಮದಾನ ರದ್ಧತಿ ವೇಳಿನ ವಿಮರ್ಶಾತ್ಮಕ ಟೀಕೆಯನ್ನು ಮರು ಪರಿಶೀಲಿಸುವಂತೆ ಸುಪ್ರೀಂ...

ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಕ್ಷಮದಾನ ರದ್ಧತಿ ವೇಳಿನ ವಿಮರ್ಶಾತ್ಮಕ ಟೀಕೆಯನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಮೊರೆ ಹೋದ ಗುಜರಾತ್‌ ಸರಕಾರ

- Advertisement -
- Advertisement -

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಗುಜರಾತ್‌  ಸರ್ಕಾರದ ನಡವಳಿಕೆಗೆ ಬಗ್ಗೆ ಸುಪ್ರೀಂಕೋರ್ಟ್‌ ಇತ್ತೀಚೆಗೆ ಮಾಡಿದ್ದ ವಿಮರ್ಶಾತ್ಮಕ ಟೀಕೆಗಳನ್ನು ಮರು ಪರಿಶೀಲಿಸುವಂತೆ ಗುಜರಾತ್ ಸರ್ಕಾರವು ಮಂಗಳವಾರ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.

ಲೈವ್ ಲಾ ವರದಿಯ ಪ್ರಕಾರ, ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ನ ಮೇ 2022ರ ತೀರ್ಪಿನ ಪ್ರಕಾರ ಕಾರ್ಯನಿರ್ವಯಿಸಿದೆ ಎಂದು ಹೇಳಿದೆ. ತೀರ್ಪಿನಲ್ಲಿ ಅಪರಾಧಿಗಳಲ್ಲಿ ಓರ್ವನ ಕ್ಷಮಾಧಾನ ಅರ್ಜಿಯನ್ನು ಪರಿಗಣಿಸಲು ನಿರ್ದೇಶಿಸಲಾಗಿತ್ತು. ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿರುವಾಗ ಮಹಾರಾಷ್ಟ್ರ ರಾಜ್ಯದ ಅಧಿಕಾರ ವ್ಯಾಪ್ತಿಯನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಗುಜರಾತ್‌ ಸರಕಾರ ಹೇಳಿದೆ.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಮತ್ತು ಆಕೆಯ ಕುಟುಂಬ ಸದಸ್ಯರ ಹತ್ಯೆಯ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮೆ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಜನವರಿ 8, 2024ರಂದು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.

ಅಪರಾಧಿಯನ್ನು ವಿಚಾರಣೆಗೊಳಪಡಿಸಿ ಶಿಕ್ಷೆಗೆ ಗುರಿಪಡಿಸಿದ ರಾಜ್ಯ ಮಾತ್ರ  ಅಪರಾಧಿಗಳ ಕ್ಷಮಾಧಾನ ಅರ್ಜಿಯನ್ನು ನಿರ್ಧರಿಸಲು ಅವಕಾಶವನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಬಾಂಬೆ ಹೈಕೋರ್ಟಿನಲ್ಲಿ ವಿಚಾರಣೆ ಮತ್ತು ಶಿಕ್ಷೆ ನಡೆದ ಕಾರಣ ಮಹಾರಾಷ್ಟ್ರ ಸರಕಾರವು ಈ ಪ್ರಕರಣದಲ್ಲಿ ವಿನಾಯಿತಿ ನೀಡಲು ಸಮರ್ಥ ಸರ್ಕಾರವಾಗಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಗುಜರಾತ್ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿತ್ತು.

ಗುಜರಾತ್ ಸರ್ಕಾರವು ಆಗಸ್ಟ್ 15, 2022ರಂದು ಬಿಲ್ಕಿಸ್‌ನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಹತ್ಯೆಗೆ ಶಿಕ್ಷೆಗೊಳಗಾದ 11 ಅಪರಾಧಿಗಳನ್ನು ಉತ್ತಮ ನಡವಳಿಕೆಯನ್ನು ಉಲ್ಲೇಖಿಸಿ ಬಿಡುಗಡೆ ಮಾಡಿತ್ತು. ಈ ನಡೆ ಸಾರ್ವಜನಿಕ ಮತ್ತು ರಾಜಕೀಯ ವಲಯಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8 ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

ಇದನ್ನು ಓದಿ: ನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ ಸಾವು

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...