Homeಮುಖಪುಟಗುಜರಾತ್ ಹೈಕೋರ್ಟ್ ಆದೇಶ ರದ್ದು; ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

ಗುಜರಾತ್ ಹೈಕೋರ್ಟ್ ಆದೇಶ ರದ್ದು; ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

- Advertisement -
- Advertisement -

2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಡಿಯಲ್ಲಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ತೀಸ್ತಾ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು  ರದ್ದುಗೊಳಿಸಿದೆ.

ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಮೇಲ್ಮನವಿದಾರರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯಾವುದೇ ಪ್ರಯತ್ನವನ್ನು ಮಾಡಬಾರದು ಮತ್ತು ಅವರಿಂದ ದೂರವಿರಬೇಕು” ಎಂದು ಪೀಠ ಹೇಳಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಜೂನ್ 25ರಂದು ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಗೋಧ್ರಾ ಗಲಭೆ ಪ್ರಕರಣಗಳ ಪ್ರಕರಣದಲ್ಲಿ ನಿರಪರಾಧಿಗಳನ್ನು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಅವರನ್ನು ಬಂಧಿಸಲಾಯಿತು.

ಅಹಮದಾಬಾದ್ ಸೆಷನ್ಸ್ ನ್ಯಾಯಾಲಯವು ಜುಲೈ 30, 2022 ರಂದು ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತು.

ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್ ಆಗಸ್ಟ್ 3, 2022 ರಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಸೆಪ್ಟೆಂಬರ್ 19ರಂದು ವಿಚಾರಣೆಗೆ ನಿಗದಿಪಡಿಸಿತ್ತು.

ಈ ಮಧ್ಯೆ ಹೈಕೋರ್ಟ್ ತನ್ನ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ನಂತರ ಮಧ್ಯಂತರ ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್ (SC)ಗೆ ತೆರಳಿದರು.

ಕಳೆದ ವರ್ಷ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಅವರಿಹೆ ಮಧ್ಯಂತರ ಜಾಮೀನು ನೀಡಿತು ಮತ್ತು ಗುಜರಾತ್ ಹೈಕೋರ್ಟ್ ತನ್ನ ನಿಯಮಿತ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಒಪ್ಪಿಸುವಂತೆ ಹೇಳಿದೆ.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...