Homeಮುಖಪುಟತೀಸ್ತಾ ಸೆಟಲ್ವಾಡ್‌ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ; ತಕ್ಷಣವೇ ಶರಣಾಗುವಂತೆ ಸೂಚನೆ

ತೀಸ್ತಾ ಸೆಟಲ್ವಾಡ್‌ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ; ತಕ್ಷಣವೇ ಶರಣಾಗುವಂತೆ ಸೂಚನೆ

- Advertisement -
- Advertisement -

2022ರ ಗುಜರಾತ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಗುಜರಾತ್‌ ಹೈಕೋರ್ಟ್‌ ಆಘಾತ ನೀಡಿದೆ. ಕಳೆದ ವರ್ಷ ಅವರು ಸಲ್ಲಿಕೆ ಮಾಡಿದ್ದ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವಲ್ಲದೆ, ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ.

ಸೆಪ್ಟೆಂಬರ್ 2022ರಲ್ಲಿ ಸುಪ್ರೀಂ ಕೋರ್ಟ್ ಮಂಜೂರು ಮಾಡಿದ ಮಧ್ಯಂತರ ಜಾಮೀನಿನ ಮೂಲಕ ಸೆಟಲ್ವಾಡ್ ಅವರನ್ನು ಇಲ್ಲಿಯವರೆಗೆ ಬಂಧನದಿಂದ ರಕ್ಷಿಸಿಕೊಂಡಿದ್ದರು. ನಂತರ ಈ ಪ್ರಕರಣದಲ್ಲಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಯಿತು.

ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರು ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದ ನಂತರ ಹಿರಿಯ ವಕೀಲ ಮಿಹಿರ್ ಠಾಕೋರ್, ತೀರ್ಪಿನ ಕಾರ್ಯಾಚರಣೆಯನ್ನು 30 ದಿನಗಳ ಅವಧಿಗೆ ತಡೆಹಿಡಿಯುವಂತೆ ನ್ಯಾಯಾಲಯವನ್ನು ಕೋರಿದರು ಆದರೆ ನ್ಯಾಯಮೂರ್ತಿ ದೇಸಾಯಿ ಈ ಮನವಿಯನ್ನು ತಿರಸ್ಕರಿಸಿದರು.

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಈ ಕೇಸ್‌ನಲ್ಲಿ ಸಿಲುಕಿಸಲು ಸುಳ್ಳು ಸಾಕ್ಷ್ಯದ ಸಂಚು ರೂಪಿಸಿದ ಆರೋಪದ ಮೇಲೆ ಅಹಮದಾಬಾದ್  ಡಿಟೆಕ್ಷನ್ ಆಫ್ ಕ್ರೈಮ್ ಬ್ಯಾಂಗ್ (ಡಿಸಿ ದಾಖಲಿಸಿದ ಎಫ್‌ಐಆ‌ ಆಧರಿಸಿ ಗುಜರಾತ್ ಪೊಲೀಸರು ಒನ್ 21, 2022 ರಂದು ತೀಸ್ತಾ ಅವರನ್ನು ಬಂಧಿಸಿದ್ದರು.

ಸೆಟಲ್ವಾಡ್ ಅವರನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು ಹಾಗೂ ಜುಲೈ 2 ರಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು ಮತ್ತು ಜುಲೈ 2 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ವಿಶೇಷ ತನಿಖಾ ತಂಡ (ಎಸ್‌ಐಟಿ) ವಿರುದ್ಧ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಜೂನ್ 24 ರಂದು ವಜಾಗೊಳಿಸಿದ ಒಂದು ದಿನದ ನಂತರ ಆಕೆಯ ಸಹ ಆರೋಪಿ ಮಾಜಿ ಐಪಿಎಸ್ ಆರ್ ಬಿ ಶ್ರೀಕುಮಾರ್ ಅವರ ಬಂಧನವಾಗಿತ್ತು. ಗಲಭೆಯಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಎಸ್‌ಐಟಿ ಕ್ಲೀನ್‌ಚಿಟ್‌ ನೀಡಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...