Homeಮುಖಪುಟ₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

₹16 ಲಕ್ಷ ಪಾವತಿಸಿದ ಒಂದೇ ತಿಂಗಳಿಗೆ ಹೋಮಿಯೋಪತಿ ವೈದ್ಯನ ಕೈ ಸೇರಿದ ಎಂಬಿಬಿಎಸ್ ಪದವಿ!

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ಉತ್ತರ ಗುಜರಾತ್‌ನ ಮೆಹ್ಸಾನ ಜಿಲ್ಲೆಯಿಂದ ವೈದ್ಯಕೀಯ ಶಿಕ್ಷಣದ ವಂಚನೆಯ ಕುರಿತ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಹೋಮಿಯೋಪತಿ ವೈದ್ಯರೊಬ್ಬರು ಎಂಬಿಬಿಎಸ್‌ ಪದವಿ ಪ್ರವೇಶಕ್ಕೆ 16.32 ಲಕ್ಷ ರೂಪಾಯಿ ಪಾವತಿಸಿದ್ದು, ಯಾವುದೇ ತರಗತಿಗಳಿಗೆ ಹಾಜರಾಗದೆ, ಪರೀಕ್ಷೆ ಎದುರಿಸದೆ ಒಂದು ತಿಂಗಳಲ್ಲಿ ಪದವಿ ಹಾಗೂ ಪ್ರಮಾಣ ಪತ್ರ ಪಡೆದಿದ್ದಾರೆ.

ವರದಿಗಳ ಪ್ರಕಾರ, ಜುಲೈ 2018ರಲ್ಲಿ ಸುರೇಶ್ ಪಟೇಲ್ (41) ಎಂಬ ಹೋಮಿಯೋಪತಿ ವೈದ್ಯ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಪದವಿ ಪಡೆಯಲು ಅಂತರ್ಜಾಲದಲ್ಲಿ ಶೋಧ ನಡೆಸುವಾಗ, ಆಲ್ ಇಂಡಿಯಾ ಆಲ್ಟರ್ನೇಟಿವ್ ಮೆಡಿಕಲ್ ಕೌನ್ಸಿಲ್ ಎಂಬ ಸಂಸ್ಥೆ ಎಂಬಿಬಿಎಸ್‌ ಪದವಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುವುದು ಕಂಡು ಬಂದಿದೆ. ಸುರೇಶ್ ಅವರು ಇಂಟರ್‌ನೆಟ್‌ನಲ್ಲಿ ನೀಡಲಾಗಿದ್ದ ಡಾ. ಪ್ರೇಮ್‌ ಕುಮಾರ್ ರಜಪೂತ್‌ ಎಂಬವರಿಗೆ ಕರೆ ಮಾಡಿದ್ದಾರೆ. ಎಂಬಿಬಿಎಸ್‌ ಪದವಿ ಪ್ರವೇಶದ ಬಗ್ಗೆ ವಿಚಾರಿಸಿದ್ದಾರೆ. ಆಗ ಆ ಕಡೆಯಿಂದ ಮಾತನಾಡಿದ ವ್ಯಕ್ತಿ 12ನೇ ತರಗತಿಯ ಅಂಕ ಪಟ್ಟಿಯ ಆಧಾರದಲ್ಲಿ ಎಂಬಿಬಿಎಸ್‌ ಪದವಿಗೆ ಪ್ರವೇಶ ದೊರೆಯಲಿದೆ ಎಂಬ ಭರವಸೆ ನೀಡಿದ್ದರು ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಆರಂಭದಲ್ಲಿ ಪ್ರೇಮ್‌ ಕುಮಾರ್ ರಜಪೂತ್‌ ಎನ್ನಲಾದ ವ್ಯಕ್ತಿಯ ಮಾತುಗಳ ಮೇಲೆ ಶಂಕೆ ವ್ಯಕ್ತಪಡಿಸಿ, ಹಿಂಜರಿಕೆ ತೋರಿದ್ದ ಸುರೇಶ್ ಪಟೇಲ್‌, ಬಳಿಕ ಆತ ನೀಡಿದ ಭರವಸೆಗಳನ್ನು ನಂಬಿ, ಮುಂಗಡವಾಗಿ 50,000 ರೂ. ಪಾವತಿಸಿ ಜಾನ್ಸಿಯ ಭುಂದೇಲ್‌ಖಂಡ್‌ ವಿವಿಯ ಹೆಸರಿನಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿದ್ದಾರೆ. ಬಳಿಕ ಜುಲೈ 10, 2018ರಿಂದ ಫೆಬ್ರವರಿ 23, 2019ರ ನಡುವೆ ಹಂತ ಹಂತವಾಗಿ ಬರೋಬ್ಬರಿ 16.32 ಲಕ್ಷ ರೂಪಾಯಿ ಪಾವತಿಸಿದ್ದಾರೆ. ತರಗತಿ ಪ್ರಾರಂಭಕ್ಕಾಗಿ ಕಾದಿದ್ದಾರೆ.

ಆದರೆ, ರಜಪೂತ್‌ ನೀಡಿದ ಭರವಸೆಯಂತೆ ತರಗತಿಗಳು ಆರಂಭಗೊಳ್ಳಲೇ ಇಲ್ಲ. ಮಾರ್ಚ್ 2019ರಲ್ಲಿ ಸುರೇಶ್ ಪಟೇಲ್ ಅವರಿಗೆ ಕೊರಿಯರ್ ಮೂಲಕ ಒಂದು ಪಾರ್ಸೆಲ್ ಬರುತ್ತದೆ. ಅದನ್ನು ತೆರೆದು ನೋಡಿದಾಗ ಎಂಬಿಬಿಎಸ್ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ ಹಾಗೂ ನೋಂದಣಿ ಪ್ರಮಾಣ ಪತ್ರ ಇತ್ತು. ಎಲ್ಲವೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ)ದ ಸ್ಟ್ಯಾಂಪ್ ಹೊಂದಿತ್ತು.

ಪ್ರಮಾಣ ಪತ್ರಗಳ ಕುರಿತು ಸುರೇಶ್ ಪಟೇಲ್ ಎಂಸಿಐ ಅನ್ನು ವಿಚಾರಿಸಿದಾಗ ಅವುಗಳೆಲ್ಲ ನಕಲಿ ಎಂಬುವುದು ಗೊತ್ತಾಗಿದೆ. ಹಾಗಾಗಿ ಸುರೇಶ್ ಪಟೇಲ್ ದೂರು ದಾಖಲಿಸಿದ್ದರು. 2019ರಲ್ಲಿ ಈ ಪ್ರಕರಣವನ್ನು ಅಹಮದಾಬಾದ್‌ ಕ್ರೈ ಬ್ರ್ಯಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರಿಗೆ ನೀಡಿದ ದೂರಿನಲ್ಲಿ ಸುರೇಶ್ ಪಟೇಲ್ ಅವರು, “ನಾನು ರಜಪೂತ್‌ ಜೊತೆ ಸುಮಾರು 25 ಬಾರಿ ಮಾತನಾಡಿದ್ದೇನೆ. ಆತ, ಡಾ. ಶೌಖತ್ ಖಾನ್, ಡಾ. ಆನಂದ್ ಮತ್ತು ಅರುಣ್ ಕುಮಾರ್ ಎಂಬವರು ಎಂಬಿಬಿಎಸ್‌ ಪೂರ್ತಿಗೊಳಿಸಲು ನನಗೆ ಸಹಾಯ ಮಾಡಲಿದ್ದಾರೆ” ಎಂದಿದ್ದ ಎಂದು ವಿವರಿಸಿದ್ದಾರೆ.

“2019ರಲ್ಲಿ ನಾನು ಮತ್ತು ಮೆಹ್ಸಾನಾ ಪೊಲೀಸ್ ತಂಡ ದೆಹಲಿಗೆ ತೆರಳಿ ಡಾ. ಆನಂದ್‌ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ವಿಳಾಸ ಹುಡುಕಿಕೊಂಡು ಹೋದಾಗ ಅಂತವರು ಯಾರೂ ಅಲ್ಲಿ ಇರಲಿಲ್ಲ. ಬಳಿಕ ನಾವು ದೆಹಲಿಯ ಖಾಸಗಿ ಬ್ಯಾಂಕ್‌ ಒಂದಕ್ಕೆ ತೆರಳಿ ಮಾಹಿತಿ ಕಲೆ ಹಾಕಿದಾಗ, ಅನೇಕ ಮಂದಿ ನನ್ನ ರೀತಿ ಮೋಸ ಹೋಗಿರುವುದು ಗೊತ್ತಾಗಿದೆ” ಎಂದು ಸುರೇಶ್ ಪಟೇಲ್ ಹೇಳಿದ್ದಾರೆ.

ಪ್ರಕರಣದ ತನಿಖೆ ಬಹಳ ನಿಧಾನಗತಿಯಲ್ಲಿ ಸಾಗುತ್ತಿದೆ. ದೂರು ದಾಖಲಾಗಿ ಐದು ವರ್ಷ ಕಳೆದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಆಗಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ಡಿಸೆಂಬರ್ 20, 2023ರಲ್ಲಿ ಸುರೇಶ್ ಪಟೇಲ್ ಅವರು ಮೆಹ್ಸಾನಾ ಎಸ್‌ಪಿ ಕಚೇರಿಗೆ ಮತ್ತೊಂದು ದೂರು ನೀಡಿದ್ದಾರೆ. ಈ ವರ್ಷದ ಜೂನ್ 14ರಂದು ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಸೆಬಿ’ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ಸಂಸದರು; ಸ್ಟಾಕ್ ಮಾರ್ಕೆಟ್ ‘ಮ್ಯಾನಿಪುಲಟ್’ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...