Homeರಾಜಕೀಯಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಸಮುದಾಯದ ಪ್ರತಿಭಟನೆಗೆ ಬೆದರಿದ್ದ ಬಿಜೆಪಿ ಸರ್ಕಾರ ಮಂಡನೆಯಾಗಿದ್ದ ಮಸೂದೆಯೊಂದನ್ನು 2 ತಿಂಗಳ ಹಿಂದೆಯಷ್ಟೆ ವಾಪಾಸು ಪಡೆದಿತ್ತು

- Advertisement -
- Advertisement -

ಆಡಳಿತಾರೂಢ ಬಿಜೆಪಿ ಸರ್ಕಾರವು ತಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್ (ಜಿಎಂಎಂ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಸಮುದಾಯಕ್ಕೆ ಕರೆ ನೀಡಿದೆ. ಜಿಎಂಎಂ ರಾಜ್ಯದ ಜಾನುವಾರು ಸಾಕಣೆದಾರರ ಒಕ್ಕೂಟ ಸಂಘಟನೆಯಾದ್ದು, ಗುಜರಾತ್‌‌ನಲ್ಲಿ ಮಾಲ್ಧಾರಿ ಜನಸಂಖ್ಯೆ ಸುಮಾರು 61 ಲಕ್ಷ ಇದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಮೆಹ್ಸಾನಾದಲ್ಲಿ ಸೋಮವಾರ ಸಭೆ ನಡೆಸಿದ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್‌ನ ವಕ್ತಾರ ನಾಗಜಿಭಾಯ್ ದೇಸಾಯಿ ನೀಡಿದ ಹೇಳಿಕೆಯಲ್ಲಿ, ಕಳೆದ ಒಂದೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಬಗ್ಗೆ ಸಮುದಾಯವು ತೀವ್ರ ಅಸಮಾಧಾನ ಹೊಂದಿರುವುದರಿಂದ ಅದನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್ 1 ಮತ್ತು 5 ರಂದು ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಲ್ಧಾರಿ ಸಮುದಾಯದ ಎಲ್ಲಾ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಮಾಲ್ಧಾರಿ ಮಹಾಪಂಚಾಯತ್ ಮನವಿ ಮಾಡಿದೆ. ಸಮುದಾಯಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕಾಂಗ್ರೆಸ್ ಶಾಸಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಮಾಲಧಾರಿ ಸಮುದಾಯದ ಬಾಕಿ ಉಳಿದಿರುವ ಬೇಡಿಕೆಗಳನ್ನು ಪಟ್ಟಿ ಮಾಡಿರುವ ದೇಸಾಯಿ, “ಕಳೆದ ವಾರದಿಂದ ಮಹಾಪಂಚಾಯತ್ ಸಮುದಾಯದ ಕಡಯಿಂದ ಅಭಿಪ್ರಾಯಗಳನ್ನು ಕೇಳಿದೆ. ನಿನ್ನೆ (ಸೋಮವಾರ) ನಡೆದ ಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಲು ನಿರ್ಧರಿಸಲಾಯಿತು. ಮತ ಎಂಬ ಅಸ್ತ್ರ ಬಳಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಮುದಾಯವು ಮನವಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಾಲ್ಧಾರಿ ವಸಾಹತ್ (ವಸತಿ ಪ್ರದೇಶ) ಸ್ಥಾಪಿಸುವುದು, ಸಮುದಾಯದ ಸದಸ್ಯರ ವಿರುದ್ಧ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ರೈತರಾಗಿರುವ ಹಕ್ಕು ಮತ್ತು ಗಿರ್, ಬರ್ದಾ ಮತ್ತು ಅಲೆಚ್ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಮುದಾಯ ಮುಂದಿಟ್ಟಿದೆ ಎಂದು ದೇಸಾಯಿ ಹೇಳಿದ್ದಾರೆ.

“ಗುಜರಾತ್ ನಗರ ಪ್ರದೇಶಗಳಲ್ಲಿ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ-2022” ಯನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಮುದಾಯವು ಈಗಾಗಲೇ ಭಾರಿ ವಿರೋಧವನ್ನು ಹೊಂದಿದೆ. ಈ ವರ್ಷ ಸೆಪ್ಟೆಂಬರ್ 18 ರಂದು, ಮಸೂದೆಯನ್ನು ರದ್ದುಗೊಳಿಸುವಂತೆ ಕೋರಿ, ಮಾಲ್ಧಾರಿ ಸಮುದಾಯದ ಮುಖಂಡರು ಮಹಾಪಂಚಾಯತ್ ಅನ್ನು ಆಯೋಜಿಸಿದರು. ಗಾಂಧಿನಗರ ಜಿಲ್ಲೆಯ ಶೇರ್ತಾ ಗ್ರಾಮದಲ್ಲಿ ನಡೆದ ಈ ಮಹಾಪಂಚಾಯತ್‌ನಲ್ಲಿ ಸುಮಾರು 50,000 ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಈ ಪ್ರತಿಭಟನೆ ನಡೆದು ಒಂದು ದಿನದ ನಂತರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಸೆಪ್ಟೆಂಬರ್ 21 ರಂದು ವಿಧಾನಸಭೆಯು ಅವಿರೋಧವಾಗಿ ಮಸೂದೆಯನ್ನು ಹಿಂತೆಗೆದುಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...