Homeಮುಖಪುಟಗುಜರಾತ್‌: ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಗುಂಪು

ಗುಜರಾತ್‌: ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಗುಂಪು

- Advertisement -
- Advertisement -

ಗುಜರಾತ್‌ನ ಪೋರಬಂದರ್‌ನಲ್ಲಿ ನಡೆದ ಗರ್ಬಾ ಕಾರ್ಯಕ್ರಮವೊಂದರಲ್ಲಿ ಜನರ ಗುಂಪು ವ್ಯಕ್ತಿಯನ್ನು ಥಳಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ.

ಗರ್ಬಾ ಕಾರ್ಯಕ್ರಮದ ಬಹುಮಾನದ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಕಾರ್ಯಕ್ರಮದ ಆಯೋಜಕರು ಸೇರಿದಂತೆ ಜನರ ಗುಂಪು ವ್ಯಕ್ತಿಯನ್ನು ಹೊಡೆದು ಕೊಲೆ ಮಾಡುವ ಮೂಲಕ ಕೊನೆಗೊಂಡಿದೆ.

ಗರ್ಬಾ ನೃತ್ಯಗಾರ್ತಿ ಕೃಪಾಲಿ ಒಡೆದರಾ ವಿವಿಧ ವಿಭಾಗಗಳಲ್ಲಿ ಎರಡು ಬಹುಮಾನಗಳನ್ನು ಗೆದ್ದುಕೊಂಡಿದ್ದರು. ಆದರೆ ಸಂಘಟಕರು ಒಂದೇ ಬಹುಮಾನವನ್ನು ನೀಡಿದ್ದರು. ಈ ಬಗ್ಗೆ ಬಾಲಕಿ ತನ್ನ ತಾಯಿ ಮಾಲಿಬೆನ್ ಬಳಿ ಹೇಳಿದ್ದರು.

ಬಾಲಕಿಯ ತಾಯಿ ಮಾಲಿಬೆನ್ ಸ್ಥಳೀಯ ಗರ್ಬಾ ಸಂಘಟಕ ರಾಜುಭಾಯಿ ಕೇಸ್ವಾಲಾ ಎಂಬಾತನನ್ನು ಸಂಪರ್ಕಿಸಿದ್ದು, ತನ್ನ ಪುತ್ರಿಯ ಇನ್ನೊಂದು ಬಹುಮಾನವನ್ನು ನೀಡುವಂತೆ ಕೋರಿದ್ದರು. ಇದಕ್ಕೆ ನಿರಾಕರಿಸಿದ್ದ ಕೇಸ್ವಾಲಾ, ಬೇಕಿದ್ದರೆ ಒಂದು ಬಹುಮಾನ ಪಡೆಯಿರಿ, ಇಲ್ಲದಿದ್ದರೆ ಅದೂ ಸಿಗುವುದಿಲ್ಲ ಎಂದು ಹೇಳಿದ್ದ. ಈ ವೇಳೆ ಅವರ ನಡುವೆ ಜಗಳ ನಡೆದಿದೆ.

ಈ ವೇಳೆ ಇನ್ನೋರ್ವ ಸಂಘಟಕ ರಾಮದೇವ ಬೊಖಿರಿಯಾ ಕೂಡ ಸೇರಿಕೊಂಡಿದ್ದು ಜಗಳ ತಾರಕಕ್ಕೇರಿ ಮಾಲಿಬೆನ್‌ಗೆ ಕೊಲೆ ಬೆದರಿಕೆಯೊಡ್ಡಲಾಗಿತ್ತು. ತೀವ್ರ ವಾಗ್ವಾದದ ನಂತರ ಮಾಲಿಬೆನ್ ಮನೆಗೆ ಮರಳಿದ್ದಾರೆ.

ನಂತರ ಕೇಶ್ವಾಲಾ ಸೇರಿದಂತೆ ಒಂದು ಗುಂಪು ರಾತ್ರಿ ಮಾಲಿಬೆನ್ ಅವರ ಮನೆಗೆ ಬಂದು ಮಾಲಿಬೆನ್ ಮತ್ತು ಆಕೆಯ ಪತಿ ಸರ್ಮಾನ್ ಒಡೆಡಾರ ಮೇಲೆ ಕ್ರೂರವಾಗಿ ಥಳಿಸಿದೆ. ಥಳಿತದಿಂದ ಗಂಭೀರವಾಗಿದ್ದ ಸರ್ಮಾನ್‌ಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃಪಟ್ಟಿದ್ದಾರೆ.

ಪೋರಬಂದರ್ ಉಪ ಪೊಲೀಸ್ ವರಿಷ್ಠಾಧಿಕಾರಿ ರಿತು ರಾಬಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಎರಡು ಗುಂಪುಗಳ ನಡುವೆ ಯಾವುದೇ ಪೂರ್ವ ದ್ವೇಷ ಇರಲಿಲ್ಲ. ಗರ್ಬಾ ಸ್ಪರ್ಧೆಯಲ್ಲಿ ಉಡುಗೊರೆಗಾಗಿ ನಡೆದ ಸಣ್ಣ ಜಗಳವು ಕೊಲೆಗೆ ತಲುಪಿದೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿದ್ದ ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈವರೆಗೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನು ಓದಿ: ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...