Homeಮುಖಪುಟಎಂಬಿಬಿಎಸ್‌ ವಿದ್ಯಾರ್ಥಿ ಕುಸಿದು ಬಿದ್ದು ಸಾವು : ರ‍್ಯಾಗಿಂಗ್‌ ಆರೋಪ

ಎಂಬಿಬಿಎಸ್‌ ವಿದ್ಯಾರ್ಥಿ ಕುಸಿದು ಬಿದ್ದು ಸಾವು : ರ‍್ಯಾಗಿಂಗ್‌ ಆರೋಪ

- Advertisement -
- Advertisement -

ಹಿರಿಯ ವಿದ್ಯಾರ್ಥಿಗಳ ಆಪಾದಿತ ರ‍್ಯಾಗಿಂಗ್‌ಗೆ ವೈದ್ಯಕೀಯ ವಿದ್ಯಾರ್ಥಿ ಬಲಿಯಾದ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯಲ್ಲಿ ಶನಿವಾರ (ನ.16) ನಡೆದಿದೆ. ಸುಮಾರು ಮೂರು ಗಂಟೆಗಳ ಕಾಲ ಒಂದೇ ಕಡೆ ನಿಂತಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪಟಾನ್ ಜಿಲ್ಲೆಯ ಧಾರಾಪುರದ ಜಿಎಂಇಆರ್‌ಎಸ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೊದಲ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದ ಅನಿಲ್ ಮೆಥಾನಿಯಾ ಮೃತ ವಿದ್ಯಾರ್ಥಿ. ಈತನನ್ನು ಎಂಬಿಬಿಎಸ್‌ ಮೂರನೇ ವರ್ಷದ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ಒಂದೇ ಕಡೆ ನಿಲ್ಲಿಸಿದ್ದಾರೆ. ಈ ವೇಳೆ ಅನಿಲ್ ಮೆಥಾನಿಯಾ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಪ್ರಜ್ಞಾಹೀನನಾಗಿ ಬಿದ್ದಿದ್ದ ಅನಿಲ್ ಮೆಥಾನಿಯಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಆದರೆ, ಅನಿಲ್ ಸಾಯುವ ಮುನ್ನ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದು, “ನನ್ನನ್ನು ಮೂರು ಗಂಟೆಗಳ ಕಾಲ ನಿಲ್ಲಿಸಿ, ಹಿಂಸೆ ನೀಡಿದ್ದಾರೆ” ಎಂದು ಅನಿಲ್ ಹೇಳಿದ್ದಾಗಿ ವರದಿಯಾಗಿದೆ.

ಅನಿಲ್ ಅವರನ್ನು ಹಿರಿಯ ವಿದ್ಯಾರ್ಥಿಗಳು ಮೂರು ಗಂಟೆಗಳ ಕಾಲ ನಿಲ್ಲಿಸಿ, ಕಿರುಕುಳ ನೀಡಿದ್ದಾರೆ. ಈ ವೇಳೆ ಆತ ಕುಸಿದು ಬಿದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

“ಅನಿಲ್ ಕುಸಿದು ಬಿದ್ದ ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಿಸಿದೆವು. ಸಾಯುವ ಮುನ್ನ ಅವರು “ಹಿರಿಯ ವಿದ್ಯಾರ್ಥಿಗಳು ರ‍್ಯಾಗ್ ಮಾಡಿ ಮೂರು ಗಂಟೆಗಳ ಕಾಲ ನಿಲ್ಲಿಸಿದ ವಿಷಯ ಪೊಲೀಸರು ಮುಂದೆ ತಿಳಿಸಿದ್ದಾರೆ. ನಾವು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದೇವೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ವೈದ್ಯಕೀಯ ಕಾಲೇಜಿನ ಡೀನ್ ಹಾರ್ದಿಕ್ ಶಾ ಹೇಳಿದ್ದಾರೆ.

“ವಿದ್ಯಾರ್ಥಿಯ ತಂದೆ ದೂರು ದಾಖಲಿಸಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಯ ಕುರಿತು ವರದಿ ಸಲ್ಲಿಸಲು ವೈದ್ಯಕೀಯ ತಂಡವನ್ನು ಕೇಳಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕೆ.ಕೆ.ಪಾಂಡ್ಯ ತಿಳಿಸಿದ್ದಾರೆ. ರ‍್ಯಾಗಿಂಗ್‌ ಕುರಿತು ಕೇಳಿದಾಗ,
“ನಾವು ಈ ವಿಷಯದ ಬಗ್ಗೆಯೂ ಕಾಲೇಜಿನಿಂದ ವಿವರವಾದ ಮಾಹಿತಿಯನ್ನು ಕೇಳಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...