ಗುಜರಾತ್‌ನಲ್ಲಿ ಭಾನುವಾರ ನಡೆದಿದ್ದ ಆರು ಮಹಾನಗರ ಪಾಲಿಕೆ ಚುನಾವಣೆಗಳ ಮತ ಎಣಿಕೆ ಪ್ರಾರಂಭವಾಗಿದ್ದು ಬಿಜೆಪಿ ಮುನ್ನಡೆಯಲ್ಲಿದೆ. ಒಟ್ಟು 6 ಮಹಾನಗರ ಪಾಲಿಕೆಗಳ 576 ಸ್ಥಾನಗಳಿಗೆ ಮತದಾನ ನಡೆದಿತ್ತು.
ಗುಜರಾತ್‌ನ ಆರು ಮಹಾನಗರ ಪಾಲಿಕೆಗಳಾದ ಅಹಮದಾಬಾದ್, ಸೂರತ್, ವಡೋದರಾ, ರಾಜ್‌ಕೋಟ್, ಭಾವನಗರ ಮತ್ತು ಜಮ್‌ನಗರಗಳಲ್ಲಿ ಈ ಚುನಾವಣೆ ನಡೆದಿತ್ತು. ಈ 6 ಮಹಾನಗರ ಪಾಲಿಕೆಯಲ್ಲೂ ರಾಜ್ಯದ ಆಡಳಿತರೂಢ ಪಕ್ಷವಾದ ಬಿಜೆಪಿ ಅಧಿಕಾರದಲ್ಲಿದೆ.
ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣಾ ಫಲಿತಾಂಶ ತಿರಸ್ಕರಿಸುತ್ತೇವೆ ಎಂದ ಬಿಜೆಪಿ
ಮತ ಎಣಿಕೆ ಪ್ರಾರಂಭದಿಂದಲೂ ಬಿಜೆಪಿ ಮುನ್ನಡೆಯಲ್ಲಿದೆ. ಇದುವರೆಗಿನ ಮಾಹಿತಿಯಂತೆ 243 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 18 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾಗಿ, ಮೊದಲ ಬಾರಿಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಇಲ್ಲಿ ಕಣಕ್ಕಿಳಿದಿದೆ. ಇದು ಎಲ್ಲಾ ಆರು ಮಹಾನಗರಗಳಲ್ಲಿ ಪಕ್ಷವು ಸ್ಪರ್ಧಿಸಿತ್ತು.
ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆದ ಮತದಾನದ ವೇಳೆ ಸರಾಸರಿ 46.08% ದಷ್ಟು ಮತದಾನವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಹೇಳಿದೆ. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಚುನಾವಣೆಯು ಮುಂಬರುವ ಚುನಾವಣೆಯ ದಿಕ್ಸೂಚಿ ಎನ್ನಲಾಗುತ್ತಿದೆ.
ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?
