Homeಮುಖಪುಟಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿದ ಆಧಾರದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದರು.

“ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪಿತೂರಿ. ನನ್ನ ಪ್ರತಿಷ್ಟೆ ಹಾಳು ಮಾಡಲು ಸುಳ್ಳು ಪ್ರಕರಣ ಹೂಡಲಾಗಿದೆ. ಇದನ್ನು ವ್ಯವಸ್ಥಿತವಾಗಿ ಮಾಡುತ್ತಾ ಬಂದಿದ್ದಾರೆ. ಅವರು ಅದನ್ನು ರೋಹಿತ್ ವೇಮುಲಾಗೆ ಮತ್ತು ಚಂದ್ರಶೇಖರ್ ಆಜಾದ್‌ಗೆ ಮಾಡಿದರು. ಈಗ ಅವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಸೋಮವಾರ ಜಾಮೀನು ದೊರೆತಾದ ಜಿಗ್ನೇಶ್ ಮೇವಾನಿ ಪ್ರತಿಕ್ರಿಯಿಸಿದ್ದರು.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮೇವಾನಿ ವಿರುದ್ಧ ಎರಡನೇ ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿತ್ತು. ನ್ಯಾಯಾಲಯ ಐದು ದಿನಗಳ ನ್ಯಾಯಂಗ ಬಂಧಿನಕ್ಕೆ ಒಪ್ಪಿಸಿತ್ತು. ಇಂದು ಜಾಮೀನು ಮಂಜೂರು ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದರು.

ಇದನ್ನೂ ಓದಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಆರೋಪಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...