Homeರಾಷ್ಟ್ರೀಯಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ...

ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

- Advertisement -
- Advertisement -

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‌ನ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ ಎಂದು ಶಾಸಕರ ತಂಡದ ಹೇಳಿಕೆ ತಿಳಿಸಿದೆ. ಬಂಧನದ ನಂತರ ಅವರನ್ನು ಅಸ್ಸಾಂಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದಾರೆ. ಪೊಲೀಸರು ಇನ್ನೂ ಎಫ್‌ಐಆರ್ ಪ್ರತಿಯನ್ನು ನಮಗೆ ನೀಡಿಲ್ಲ. ಅವರ ವಿರುದ್ಧ ಅಸ್ಸಾಂನಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳ ಬಗ್ಗೆ ನಮಗೆ ತಿಳಿಸಲಾಗಿದೆ. ಇಂದು ರಾತ್ರಿ ಅವರನ್ನು ಅಸ್ಸಾಂಗೆ ಕರೆದೊಯ್ಯವ ಸಾಧ್ಯತೆಯಿದೆ” ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಮೇವಾನಿ ಅವರನ್ನು ಬುಧವಾರ ರಾತ್ರಿ 11.30ರ ಸುಮಾರಿಗೆ ಪಾಲನ್‌ಪುರದ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿ ಅಹಮದಾಬಾದ್‌ಗೆ ಕರೆದೊಯ್ಯಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಅಸ್ಸಾಂನ ಬಿಜೆಪಿ ನಾಯಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಅವರನ್ನು ಬಂಧಿಸಲಾಗಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸ್ಸಾಂನ ಕೊಕ್ರಜಾರ್‌ನ ಬಿಜೆಪಿ ನಾಯಕ ಅರೂಪ್ ಕುಮಾರ್ ಡೇ ಎಂಬವರು ಮೇವಾನಿ ವಿರುದ್ಧ ದೂರು ದಾಖಲಿಸಿದ್ದರು. ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದ ಅಪರಾಧ ಮಾಡಿದ್ದಾರೆ ಎಂದು ಎಫ್‌ಐಆರ್‌‌ ಆರೋಪಿಸಿದೆ ಎಂದು ವರದಿ ಹೇಳಿದೆ.

“ಅಸ್ಸಾಂ ಪೊಲೀಸ್ ಅಧಿಕಾರಿಗಳು ಹಂಚಿಕೊಂಡ ದಾಖಲೆಯ ಪ್ರಕಾರ, ಕೆಲವು ದಿನಗಳ ಹಿಂದೆ ಮೇವಾನಿ ಅವರು ನಾಥುರಾಮ್ ಗೋಡ್ಸೆ ಬಗ್ಗೆ ಮಾಡಿದ ಟ್ವೀಟ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಟ್ವೀಟ್ ಅನ್ನು ಟ್ವಿಟರ್ ತಡೆಹಿಡಿದಿದೆ. ಮೇವಾನಿ ಅವರನ್ನು ಮೊದಲು ರಸ್ತೆಯ ಮೂಲಕ ಅಹಮದಾಬಾದ್‌ಗೆ ಕರೆತರಲಾಯಿತು. ನಂತರ ಇಂದು ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ಯಲಾಯಿತು” ಎಂದು ಮೇವಾನಿ ಅವರ ಆಪ್ತ ಸುರೇಶ್ ಜಾಟ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ 8 ವರ್ಷಗಳ ಅಧಿಕಾರಾವಧಿಯಲ್ಲಿ ವಿಫಲರಾಗಿದ್ದಾರೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಬಂಧನದ ವಿಚಾರ ತಿಳಿಯುತ್ತಿದ್ದಂತೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಇತರ ಕಾಂಗ್ರೆಸ್ ನಾಯಕರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಧಾವಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಗುಜರಾತ್‌ನ ವಡ್ಗಾಮ್‌ನ ಶಾಸಕರಾಗಿರುವ ಜಿಗ್ನೇಶ್‌ ಮೇವಾನಿ ದಲಿತ ಹಕ್ಕುಗಳ ಹೋರಾಟಗಾರ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಸಂಚಾಲಕರೂ ಆಗಿದ್ದಾರೆ. ಅವರು ಕಳೆದ ವರ್ಷ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...