Homeಮುಖಪುಟಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪೊಲೀಸರ ‘ಕಾಂಗರೂ ನ್ಯಾಯ’ಕ್ಕೆ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ನವರಾತ್ರಿ ಗರ್ಬಾ ಕಾರ್ಯಕ್ರಮಕ್ಕೆ ಕಲ್ಲು ಎಸೆದ ಆರೋಪದ ಮೇಲೆ ಬಂಧಿತರಾದ ಕೆಲವು ಮುಸ್ಲಿಂ ಯುವಕರನ್ನು ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಪೋಲೀಸ್ ಸಿಬ್ಬಂದಿ ಜನರ ನಡುವೆ ಕಂಬಕ್ಕೆ ಕಟ್ಟಿ ಬೆತ್ತದಿಂದ ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಮಂಗಳವಾರ ಟ್ವಿಟರ್‌ನಲ್ಲಿ ವೈರಲ್ ಆಗಿವೆ. ಸಮವಸ್ತ್ರ ಧರಿಸದ ಪೋಲೀಸರು ಯುವಕರಿಗೆ ಹೊಡೆಯುತ್ತಿರುವುದಕ್ಕೆ ಜನಸಮೂಹವು ಹರ್ಷೋದ್ಗಾರ ಮಾಡುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಸ್ಥಳೀಯ ಸುದ್ದಿವಾಹಿನಿ ವಿಟಿವಿ ಗುಜರಾತಿ ನ್ಯೂಸ್‌ ವೀಡಿಯೊವನ್ನು ಹಂಚಿಕೊಂಡಿದೆ. ಥಳಿಸುತ್ತಿರುವ ಪೊಲೀಸರು ಯುವಕರಿಗೆ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಘಟನೆ ನಡೆದಾಗ ಪ್ರದೇಶದ ಉಸ್ತುವಾರಿ ಪೊಲೀಸ್ ಇನ್ಸ್‌ಪೆಕ್ಟರ್ ಕೂಡ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ಹಲವು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದು, ಇದು ಪೊಲೀಸರ ‘ಕಾಂಗರೂ ನ್ಯಾಯ’ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಈ ತ್ವರಿತ ಪೊಲೀಸ್‌ ನ್ಯಾಯವನ್ನು ಸಮರ್ಥಿಸಿಕೊಂಡಿದ್ದಾರೆ.

ಸುಮಾರು 150 ಜನರ ಗುಂಪು ಕಳೆದ ರಾತ್ರಿ ದೇವಸ್ಥಾನದ ಆವರಣದಲ್ಲಿ ನಡೆದ ಗಾರ್ಬಾ ಕಾರ್ಯಕ್ರಮಕ್ಕೆ ಕಲ್ಲು ಎಸೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದ್ದು, ಪ್ರಕರಣದಲ್ಲಿ 43 ಮಂದಿಯನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ: ಭಾರತೀಯ ಚುನಾವಣಾ ಆಯೋಗ

“ಮಟರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು 13 ಜನರನ್ನು ಬಂಧಿಸಿದ್ದಾರೆ” ಎಂದು ಉಪ ಪೊಲೀಸ್ ಅಧೀಕ್ಷಕ ವಿ.ಆರ್. ಬಾಜಪೈ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದಕ್ಕೂ ಮುನ್ನ, ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಾಧಿಯಾ ಅವರು, ಇಬ್ಬರು ಮುಸ್ಲಿರ ನೇತೃತ್ವದ ಜನರ ಗುಂಪು ನವರಾತ್ರಿ ಗರ್ಬಾ ಸ್ಥಳಕ್ಕೆ ಪ್ರವೇಶಿಸಿ ತೊಂದರೆ ಉಂಟುಮಾಡಲು ಪ್ರಾರಂಭಿಸಿತು ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. As science and information technology ihas
    advanced to a level where in everything is at finger tips,why these police in particular and administrative machinery in general is uggilng good hold system of yesteryears in identifying the culprits? It looks like these idiot police and administration doesn’t want to come out of nepotism and feudalistic mindset,the oppressed general public doesn’t tolerate this attitude for long, definitely they are going to teach them how to to behave with general public,it’s up to police system and administration to realise the facts for their own personal safety

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...