Homeಮುಖಪುಟಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ದಲಿತ ಮಹಿಳೆಯ ದೂರಿನ ಮೇರೆಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಗುಜರಾತ್‌ನಲ್ಲಿ ಬಿಜೆಪಿ ಶಾಸಕ ಗಜೇಂದ್ರಸಿಂಹ ಪರ್ಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಮಾಜಿ ರಾಜ್ಯ ಸಚಿವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಜುಲೈ 2020 ರಲ್ಲಿ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ.

ಪರ್ಮಾರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯೂ ಆರೋಪ ಎದುರಿಸುತ್ತಿದ್ದಾರೆ.

ಸಬರಕಾಂತ ಜಿಲ್ಲೆಯ ಪ್ರಾಂತೀಜ್ ಅಸೆಂಬ್ಲಿ ಸ್ಥಾನವನ್ನು ಪ್ರತಿನಿಧಿಸುವ ಶಾಸಕರ ವಿರುದ್ಧ ಸಂತ್ರಸ್ತೆ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲು ವಿಫಲರಾದ ಪೊಲೀಸರ ನಡೆಯನ್ನು ಗುಜರಾತ್ ಹೈಕೋರ್ಟ್ ಪ್ರಶ್ನಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ದೂರಿನ ಪ್ರಕಾರ, ಜುಲೈ 30, 2020 ರಂದು ಪರ್ಮಾರ್ ಅವರು ಮಹಿಳೆಯನ್ನು ಗಾಂಧಿನಗರದ ಎಂಎಲ್ಎ ಕ್ವಾರ್ಟರ್ಸ್‌ಗೆ ಕರೆದರು. ಅಲ್ಲಿ ಅವರು ಮದುವೆಯ ನೆಪದಲ್ಲಿ ಅವರೊಂದಿಗೆ ದೈಹಿಕ ಸಂಬಂಧದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ. ನಂತರ ಶಾಸಕರು ತನ್ನ ಫೋನ್ ಕರೆಗಳನ್ನು ನಿರ್ಲಕ್ಷಿಸಲು ಪ್ರಾರಂಭಿಸಿ, ತನಗೆ ಬೆದರಿಕೆ ಹಾಕಿದರು. ಈ ಬಗ್ಗೆ ಹೊರಗಡೆ ಮಾತನಾಡಿದರೆ ಅವರು ನನ್ನನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

2021 ರಲ್ಲಿ, ಮಹಿಳೆ ಹೈಕೋರ್ಟ್‌ನಲ್ಲಿ ವಿಶೇಷ ಕ್ರಿಮಿನಲ್ ಅರ್ಜಿಯನ್ನು ಸಲ್ಲಿಸಿದರು, ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಹೆಚ್ಚುವರಿಯಾಗಿ, ಅಪ್ರಾಪ್ತ ವಯಸ್ಕರ ವಿರುದ್ಧದ ಕಿರುಕುಳಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ಪರ್ಮಾರ್ ಮತ್ತೊಂದು ಪ್ರಕರಣವನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 2023 ರಲ್ಲಿ, ಗುಜರಾತ್ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಇದನ್ನೂ ಓದಿ; ಮಧ್ಯಪ್ರದೇಶ: ಕಿರುಕುಳದ ದೂರು ನೀಡಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...