Homeಚಳವಳಿಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಪ್ರಧಾನಿ ಮೋದಿ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ದಿಟ್ಟ ಮಹಿಳೆ

- Advertisement -
- Advertisement -

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ

“ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಯಲ್ಲಿದ್ದರು. ಅಲ್ಲಿ ಅವರು ತಮ್ಮ ದೈನಂದಿನ ದಿನಚರಿಯನ್ನು ಪೂರ್ಣಗೊಳಿಸಿ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದಾಗ ಅಸ್ವಸ್ಥರಾದರು. ಈ ವೇಳೆ ವೈದ್ಯರು ಆಗಮಿಸಿ ಅವರಿಗೆ ಚಿಕಿತ್ಸೆಯ ಪ್ರಯತ್ನ ಮಾಡಿದ್ದು, ನಂತರ ಬೆಳಿಗ್ಗೆ 11:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು” ಎಂದು ಅವರ ಮಗ ತನ್ವೀರ್ ಜಾಫ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯನ್ನು ಸುಮಾರು 2000 ಜನರನ್ನು, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಹತ್ಯೆ ಮಾಡಿದ ಗಲಭೆಯ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ಝಕಿಯಾ ಅವರು ಕಾನೂನು ಹೋರಾಟ ಮಾಡಿದ್ದರು.

ಝಕಿಯಾ ಅವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಸಂತಾಪ ಸೂಚಿಸಿದ್ದಾರೆ, “ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮುದಾಯದ ಸಹಾನುಭೂತಿಯ ನಾಯಕಿ ‘ಝಕಿಯಾ ಆಪಾ’ 30 ನಿಮಿಷಗಳ ಹಿಂದೆ ನಿಧನರಾದರು! ಅವರ ದೂರದೃಷ್ಟಿಯನ್ನು ದೇಶ, ಕುಟುಂಬ, ಸ್ನೇಹಿತರು ಮತ್ತು ಜಗತ್ತು ಮಿಸ್ ಮಾಡಿಕೊಳ್ಳುತ್ತದೆ!” ಎಂದು ಹೇಳಿದ್ದಾರೆ.

“ತನ್ವೀರ್ ಭಾಯ್, ನಿಶ್ರಿನ್, ದುರೈಯಪ್ಪ, ಮೊಮ್ಮಕ್ಕಳೇ ನಾವು ನಿಮ್ಮೊಂದಿಗಿದ್ದೇವೆ!” ಎಂದು ತೀಸ್ತಾ ಅವರು ಹೇಳಿದ್ದಾರೆ. ತೀಸ್ತಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಝಕಿಯಾ ಅವರ ಅರ್ಜಿಯಲ್ಲಿ ಸಹ-ದೂರುದಾರರಾಗಿದ್ದರು.

ಗುಜರಾತ್ ಪ್ರಕರಣದ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಗಲಭೆಯ ಬಗ್ಗೆ ಅಪೂರ್ಣ ಮತ್ತು ಪಕ್ಷಪಾತದ ತನಿಖೆಯನ್ನು ಮಾಡಿದೆ ಎಂದು ಝಕಿಯಾ ಮತ್ತು ತೀಸ್ತಾ ಅರ್ಜಿಯಲ್ಲಿ ಆರೋಪಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜೂನ್ 4, 2022 ರಂದು ತಿರಸ್ಕರಿಸಿತ್ತು.

“ನನ್ನಲ್ಲಿ ಉಸಿರು ಇರುವವರೆಗೂ ನಾನು ಹೋರಾಡುತ್ತಲೇ ಇರುತ್ತೇನೆ” ಎಂದು ಝಾಕಿಯಾ ಎರಡು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಗುಜರಾತ್ ಗಲಭೆ

ಇದನ್ನೂಓದಿ:  ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...