Homeಮುಖಪುಟಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

- Advertisement -
- Advertisement -

ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಇತ್ತೀಚೆಗೆ ಹಿಂತೆಗೆದುಕೊಳ್ಳಲಾಗಿತ್ತು. ಗಲಭೆ ಪ್ರಕರಣದ ಸಾಕ್ಷಿಗಳು, ದೂರುದಾರರು ಇದೀಗ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಗಲಭೆ ನಡೆದು 22 ವರ್ಷಗಳೇ ಕಳೆದಿವೆ. ಆದರೂ ನಾನು ಹಿಂದೂ ಪ್ರಾಬಲ್ಯದ ಪ್ರದೇಶಗಳಿಗೆ ಹೋಗಲು ಹೆದರುತ್ತೇನೆ. ನಾನು ಅಲ್ಲಿ ವಾಸಿಸುವ ಬಗ್ಗೆ ಯೋಚಿಸಲು ಕೂಡ ಸಾಧ್ಯವಿಲ್ಲ ಎಂದು 2002ರ ಗುಜರಾತ್ ಗಲಭೆಯಲ್ಲಿ ಬದುಕುಳಿದ ಸೈಯದ್ ನೂರ್ ಬಾನೊ ಹೇಳಿದ್ದಾರೆ.

ಬಾನೋ ಅವರು ನರೋಡಾ ಪಾಟಿಯಾದ ಮಾಜಿ ನಿವಾಸಿಯಾಗಿದ್ದಾರೆ. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ನಂತರ ನಡೆದ ಹಿಂಸಾಚಾರದಲ್ಲಿ ಬದುಕುಳಿದವರು ಮತ್ತು ನರೋಡಾ ಪಾಟಿಯಾ ಹತ್ಯಾಕಾಂಡದ ಸಾಕ್ಷಿಯೂ ಆಗಿದ್ದಾರೆ. ಆ ಪ್ರದೇಶದಲ್ಲಿ ಮುಸ್ಲಿಮರ ಅತ್ಯಾಚಾರ-ಕೊಲೆ ಪ್ರಕರಣ ಎಸಗಿದ್ದ ಕನಿಷ್ಠ 4 ಗಲಭೆಕೋರರ ಗುರುತನ್ನು ಕೂಡ ಅವರು ಪತ್ತೆಹಚ್ಚಿದ್ದರು. ಬಾನೊ ಅವರಲ್ಲದೆ ಗುಜರಾತ್‌ ಹತ್ಯಾಕಾಂಡದ ಇತರ ಕೆಲ ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಡಿಸೆಂಬರ್‌ನಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದರು.

ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು 2002ರ ಗಲಭೆಯ ದೂರುದಾರರು, ಸಾಕ್ಷಿಗಳು, ವಕೀಲರು, ಜಡ್ಜ್‌ ಸೇರಿ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿತ್ತು. ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ನರೋಡಾ ಪಾಟಿಯಾ ಪ್ರಕರಣದಲ್ಲಿ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್‌ ಹತ್ಯಾಕಾಂಡದ ಸಾಕ್ಷಿ ಹಾಗೂ ಅಹಮದಾಬಾದ್‌ನ ಸಿಟಿಝನ್ ನಗರದಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅಬ್ದುಲ್ ಹಮೀದ್ ಶೇಖ್, ಈ ಪ್ರದೇಶದಲ್ಲಿ ಸರಿಯಾದ ರಸ್ತೆಗಳಿಲ್ಲ, ಅಗಾಧವಾದ ದುರ್ವಾಸನೆಯಿಂದ ಕೂಡಿದೆ ಮತ್ತು ಕಸದ ರಾಶಿಗಳ ಮಧ್ಯೆ ಜನರು ಬದುಕುತ್ತಿದ್ದಾರೆ. 2002ರ ಗಲಭೆಯಲ್ಲಿ ನಿರಾಶ್ರಿತರಾದ 50ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಕಳೆದ 22 ವರ್ಷಗಳಿಂದ ಸಿಟಿಝನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಸಾಕ್ಷಿಗಳ ಭದ್ರತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯೋಜಿತವಾಗಿದೆ. ನಮ್ಮ ಮಾತು ಕೇಳುವವರು ಯಾರು? ನಮ್ಮ ಭದ್ರತೆಯನ್ನು ಮರುಸ್ಥಾಪಿಸಲು ನಾವು ಅವರನ್ನು ಒತ್ತಾಯಿಸಿದರೆ, ಅವರು ಸ್ಪಂದಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶೇಖ್ ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು. ಘಟನೆಗೆ ಕಾರಣ ಇಂದಿಗೂ ಅಸ್ಪಷ್ಟವಾಗಿದೆ. ನರೇಂದ್ರ ಮೋದಿ ನೇತೃತ್ವದ ಗುಜರಾತ್ ರಾಜ್ಯ ಸರ್ಕಾರವು, ಸತ್ತವರಲ್ಲಿ ಹೆಚ್ಚಿನವರು ಕರಸೇವಕರು ಎಂದು ಹೇಳಿದ್ದರು. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸುದ್ದಿ ಹರಡಿದ ನಂತರ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರವಾದ ಹಿಂಸಾಚಾರ ಗುಜರಾತ್‌ನಲ್ಲಿ ನಡೆದಿತ್ತು. ಇದರಲ್ಲಿ ಸುಮಾರು 2,000 ಜನರು ಕೊಲ್ಲಲ್ಪಟ್ಟಿದ್ದರು. ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ರಾಜ್ಯಾದ್ಯಂತ ಸಾವಿರಾರು ಮನೆಗಳು ಮತ್ತು ಮಸೀದಿಗಳನ್ನು ಕಡೆವಲಾಗಿತ್ತು.

ಅಂದಿನ ಘಟನೆಯನ್ನು ನೆನಪಿಸಿಕೊಂಡ ಬಾನೊ, ಇಂದು ಅದೇ ವಾತಾವರಣ ನಿರ್ಮಾಣವಾಗುತ್ತಿದೆ, ಅದೇ ಕೇಸರಿ ಧ್ವಜಗಳು ಹಾರಾಡುತ್ತಿದೆ, ಇದಕ್ಕೆ ನಾವು ಹೆದರುತ್ತೇವೆ ಎಂದು ಹೇಳಿದರು. ಶೇಖ್‌, ಬಾನೊ ಅವರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ ತಮ್ಮ ಭದ್ರತೆ ಹಿಂಪಡೆಯುವಿಕೆ ಬಗ್ಗೆ ಭಯವನ್ನು ವ್ಯಕ್ತಪಡಿಸಿದ್ದಾರೆ. ಗಲಭೆಯ ಮತ್ತೋರ್ವ ಸಾಕ್ಷಿಯಾದ ಮರೂಫ್ ಪಠಾಣ್ ತಮಗೆ ಕೊಟ್ಟ ರಕ್ಷಣೆಯನ್ನು ಹಿಂತೆಗೆದುಕೊಂಡಿರುವುದರಿಂದ ತನ್ನ ಕುಟುಂಬ ಅಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಪಠಣ್‌ ಗಲಭೆ ಪ್ರಕರಣದಲ್ಲಿ ಗುಡ್ಡುಚಾರ, ಭವಾನಿ ಸಿನ್ಹ್, ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ಅವರ ಕೈವಾಡದ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. 2002ರಲ್ಲಿ ಅವರು ಮಕ್ಕಳನ್ನು ಕೊಲೆ ಮಾಡಿದ್ದನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದನ್ನು ನಾನು ನೋಡಿದ್ದೇನೆ. ನಮಗೆ ಯಾವುದೇ ಮಂದಿರದಿಂದ ಯಾವುದೇ ಸಮಸ್ಯೆಗಳಿಲ್ಲ. ನಮ್ಮವರನ್ನು ಕೊಲೆ ಮಾಡಲಾಗಿದೆ. ನಮಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ನಾವು ಭಯಭೀತರಾಗಿದ್ದೇವೆ. ಎರಡು ದಶಕಗಳಿಂದ ಭಯದಿಂದಲೇ ಬದುಕುತ್ತಿವೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...