Homeಮುಖಪುಟಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ 'ಗುಜರಾತ್ ಸಮಾಚಾರ್' ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ...

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

- Advertisement -
- Advertisement -

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ

ಅವರ ಹಿರಿಯ ಸಹೋದರ ಶ್ರೇಯಂಶ್ ಶಾ ಅವರು ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ಶ್ರೇಯಂಶ್ ಶಾ ನಡೆಸುತ್ತಿರುವ ಗುಜರಾತಿ ಸುದ್ದಿ ವಾಹಿನಿ ಜಿಎಸ್‌ಟಿವಿಯ ಡಿಜಿಟಲ್ ಸೇವೆಗಳ ಮುಖ್ಯಸ್ಥ ತುಷಾರ್ ದೇವ್, ಶುಕ್ರವಾರ ಮುಂಜಾನೆ ಬಾಹುಬಲಿ ಶಾ ಅವರನ್ನು ಇಡಿ ಬಂಧಿಸಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ದೇವ್ ಅವರು, ಬಾಹುಬಲಿ ಶಾ ಅವರನ್ನು ಮೊದಲು ವಿಎಸ್ ಆಸ್ಪತ್ರೆಗೆ ಇಡಿ ಕರೆದೊಯ್ಯಿತು. ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ನಗರದ ಜೈಡಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.

ತನ್ನ ಕ್ರಮದ ಹಿಂದಿನ ಕಾರಣಗಳ ಬಗ್ಗೆ ಇಡಿ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ. ಶುಕ್ರವಾರ ಮುಂಜಾನೆ ಇಡಿ ಬಾಹುಬಲಿ ಶಾ ಅವರನ್ನು ಬಂಧಿಸಿದೆ ಮತ್ತು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಗುಜರಾತ್ ಸಮಾಚಾರ್ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್‌ನಲ್ಲಿರುವ GSTV ಆವರಣವನ್ನು ಸುಮಾರು 36 ಗಂಟೆಗಳ ಕಾಲ ಶೋಧಿಸಿದೆ. ಐಟಿ ಅಧಿಕಾರಿಗಳು ಹೋದ ಕೂಡಲೇ ಗುರುವಾರ ಸಂಜೆ ಇಡಿ ಆವರಣದ ಮೇಲೆ ದಾಳಿ ನಡೆಸಿತು ಎಂದು ದೇವ್ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಇದನ್ನು ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಪ್ರಯತ್ನವೆಂದು ಖಂಡಿಸಿದ್ದಾರೆ. ಗುಜರಾತ್ ಸಮಾಚಾರ್‌ನ ಟೀಕಾತ್ಮಕ ವರದಿಗಳಿಗೆ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕ್ರಮವೆಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಶಾಸಕ ಮತ್ತು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅವರು ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಗುಜರಾತ್ ಸಮಾಚಾರ್ ಪತ್ರಿಕೆ ಕೇಂದ್ರ ಸರ್ಕಾರವನ್ನು ಟೀಕಿಸುವ ವರದಿಗಳನ್ನು ಪ್ರಕಟಿಸುತ್ತಿರುವುದರಿಂದ ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ಗುಜರಾತ್ ಸಮಾಚಾರ್, ವಿಶೇಷವಾಗಿ ಇತ್ತೀಚೆಗೆ ಭಾರತ-ಪಾಕಿಸ್ತಾನ ಒಡಂಬಡಿಕೆ, ಪೆಹಲ್ಗಾಮ್ ಮತ್ತು ಪುಲ್ವಾಮಾ ದಾಳಿಯಂತಹ ಘಟನೆಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿ ಬರೆದಿತ್ತು.

ಅದರಲ್ಲೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ (ಏಪ್ರಿಲ್ 22, 2025) ಕುರಿತಾದ ವರದಿಗಳು ಸರ್ಕಾರದ ಭದ್ರತಾ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸುವ ನಿಲುವನ್ನು ಪತ್ರಿಕೆ ತೆಗೆದುಕೊಂಡಿತ್ತು. ಪತ್ರಿಕೆಯು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ವಿಫಲವಾದದ್ದಕ್ಕಾಗಿ ಹೊಣೆಹೊರುವಂತೆ ಕೇಳಿತ್ತು. ಅಲ್ಲದೆ, ಕೇಂದ್ರ ಸರ್ಕಾರದ ಭಯೋತ್ಪಾದನೆ-ವಿರೋಧಿ ಕಾರ್ಯತಂತ್ರಗಳು ಮತ್ತು ಗುಪ್ತಚರ ವೈಫಲ್ಯಗಳನ್ನು ಪ್ರಶ್ನಿಸಿತ್ತು. ಈ ಘಟನೆಯನ್ನು 2019ರ ಪುಲ್ವಾಮಾ ದಾಳಿಯೊಂದಿಗೆ ಹೋಲಿಕೆ ಮಾಡಿ, ಭದ್ರತಾ ವ್ಯವಸ್ಥೆಯಲ್ಲಿನ ನಿರಂತರ ಕೊರತೆಗಳನ್ನು ಎತ್ತಿ ತೋರಿಸಿತ್ತು.

2019ರಲ್ಲಿ, ಗುಜರಾತ್ ಸಮಾಚಾರ್‌ನ ಬ್ಯಾನರ್‌ ಹೆಡ್‌ಲೈನ್‌ “56 ನಿ ಛಾತಿನಿ ಕಾಯರ್ತಾ: ಆತಂಕಿಯೋ ಬೆಫಾಮ್, 44 ಜವಾನ್ ಶಹೀದ್” (56 ಇಂಚಿನ ಎದೆಯ ಕಾಯರತೆ: ಭಯೋತ್ಪಾದಕರಿಗೆ ಮುಕ್ತ ಕೈ, 44 ಯೋಧರು ಹುತಾತ್ಮರಾದರು) ಎಂಬ ಶೀರ್ಷಿಕೆಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಪಹಲ್ಗಾಮ್ ದಾಳಿಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....