Homeದಲಿತ್ ಫೈಲ್ಸ್ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

ಗುಜರಾತ್‌: ದಲಿತ ಮಹಿಳೆ ತಯಾರಿಸಿದ ಮಧ್ಯಾಹ್ನದ ಬಿಸಿಯೂಟ ನಿರಾಕರಿಸಿದ ಒಬಿಸಿ ಮಕ್ಕಳು!

- Advertisement -
- Advertisement -

ಗುಜರಾತ್‌ನ ಮೊರ್ಬಿ ಜಿಲ್ಲೆಯ ಶ್ರೀಸೋಖ್ದಾ ಪ್ರಾಥಮಿಕ ಶಾಲೆಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳಿಗೆ ಸೇರಿದ 153 ವಿದ್ಯಾರ್ಥಿಗಳ ಪೈಕಿ 147 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟವನ್ನು ನಿರಾಕರಿಸಿದ್ದು, ದಲಿತ ಮಹಿಳೆ ಅಡುಗೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

ಮಧ್ಯಾಹ್ನದ ಬಿಸಿಯೂಟ ಮಾಡುವ ಕೆಲಸವನ್ನು ಕಳೆದ ಜೂನ್‌ನಲ್ಲಿ ದಲಿತ ಮಹಿಳೆ ಧಾರಾ ಮಕ್ವಾನಾ ಅವರಿಗೆ ಶಾಲಾ ಅಧಿಕಾರಿಗಳು ಗುತ್ತಿಗೆ ನೀಡಿದರು. ಆ ನಂತರದಲ್ಲಿ ವಿದ್ಯಾರ್ಥಿಗಳ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಮಾಡದಂತೆ ತಡೆದಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿಗಳು ಊಟಕ್ಕೆ ಬರುತ್ತಿರಲಿಲ್ಲ. ನಂತರ ಪೋಷಕರನ್ನು ಪ್ರಶ್ನಿಸಲಾಯಿತು. ದಲಿತ ಮಹಿಳೆ ಬೇಯಿಸಿದ ಆಹಾರವನ್ನು ನಮ್ಮ ಮಕ್ಕಳು ತಿನ್ನಲು ಬಿಡುವುದಿಲ್ಲ ಎಂದು ಹೇಳಿದರು” ಎಂದು ಎಂದು ದಲಿತ ಮಹಿಳೆಯ ಪತಿ ಗೋಪಿ ಪ್ರತಿಕ್ರಿಯೆ ನೀಡಿದ್ದಾರೆ. ಮಾರ್ಕ್ವಾನಾ ತಯಾರಿಸಿದ ದೊಡ್ಡ ಪ್ರಮಾಣದ ಆಹಾರ ವ್ಯರ್ಥವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ, ಗೋಪಿ ಪೊಲೀಸರಿಗೆ ದೂರು ನೀಡಿದ್ದು, ಅದನ್ನು ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾಯಿಸಲಾಗಿದೆ. “ಆದರೆ, ಇದು ಶಾಲಾ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ನಡುವಿನ ವಿಷಯವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಶಾಲೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಪೋಷಕರ ನಡುವೆ ಈ ವಿಷಯದ ಬಗ್ಗೆ ಎರಡು ಭಾರಿ ಸಭೆಗಳನ್ನು ನಡೆಸಲಾಗಿದೆ. ಆದರೆ ತಮ್ಮ ನಿಲುವನ್ನು ಬದಲಾಯಿಸಲು ಪೋಷಕರು ನಿರಾಕರಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿದ್ದಾರೆ.

“ಜಾತಿವಾದಿ ಧೋರಣೆ ಬೇಡ. ಎಲ್ಲರೂ ಸಮಾನರು. ಯಾರೂ ಅಸ್ಪೃಶ್ಯರಲ್ಲ ಎಂದು ನಾವು ಮಕ್ಕಳಿಗೆ ಕಲಿಸಬಹುದು. ದುಃಖಕರವೆಂದರೆ, ನಾವು ಅವರ ಪೋಷಕರನ್ನು ಮನವೊಲಿಸಲು ಸಾಧ್ಯವಿಲ್ಲ” ಎಂದು ಪ್ರಾಂಶುಪಾಲರು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ತಯಾರಿಸಿ ಊಟವನ್ನು ನಿರಾಕರಿಸಿದ ಪ್ರಕರಣಗಳು ಈ ಹಿಂದೆಯೂ ನಡೆದಿವೆ. ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಉತ್ತರಖಾಂಡ್‌ನ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿದೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿದ್ದ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದರು.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎಂದು ಸುನಿತಾ ದುಃಖ ತೋಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರದಲ್ಲಿ ಮಕ್ಕಳಿಗಿಂತಲೂ ಪೋಷಕರುಗಳಿಗೆ ಜಾತಿ ವ್ಯವಸ್ಥೆಯ ಅನಿಷ್ಟತೆಯ ಬಗ್ಗೆ ಮನವರಿಕೆ ಮಾಡಿಕೊಡಬೇಕು, ಎಳೆ ವಯಸ್ಸಿನ ಮಕ್ಕಳಲ್ಲಿ ಈಗ ಬಗ್ಗೆ ಜಾಗ್ರತಿ ಮೂಡಿಸಬೇಕು, ಆದರೆ ಇಡೀ ವ್ಯವಸ್ಥೆಯೇ ಜಾತಿ ಆಧಾರಿತ ಆಗಿರುವಾಗ ಅರಿವು ಮೂಡಿಸುವವರು ಯಾರು.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...