Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...