Homeಮುಖಪುಟಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, “ಸಮಾಜ ವಿರೋಧಿ ಶಕ್ತಿಗಳು”, ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು “ಲವ್ ಜಿಹಾದ್” ಗಾಗಿ ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವವರು ಇದನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸಾಂಘವಿ ಈ ಬದಲಾವಣೆಗಳನ್ನು ಘೋಷಿಸಿದ್ದು, ಇದು ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಪಡೆಯಲು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದಿದ್ದಾರೆ. 

ಪ್ರಮುಖ ಬದಲಾವಣೆಗಳಲ್ಲಿ ಒಂದು, ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಪೋಷಕರಿಗೆ ತಿಳಿಸಬೇಕಾದ ಪ್ರಕ್ರಿಯೆ. “ಸಹಾಯಕ ನೋಂದಣಾಧಿಕಾರಿ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿಕೊಂಡ ನಂತರ, ಅರ್ಜಿ ಸಲ್ಲಿಸಿದ ದಿನಾಂಕದಿಂದ 30 ದಿನಗಳು ಪೂರ್ಣಗೊಂಡ ನಂತರ ಮದುವೆಯನ್ನು ನೋಂದಾಯಿಸಲಾಗುತ್ತದೆ” ಎಂದು ಹೊಸ ನಿಯಮಗಳು ಹೇಳುತ್ತವೆ ಎಂದು ವಿವರಿಸಿದ್ದಾರೆ.

“ಈ ವಿವರಗಳನ್ನು ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಲಿರುವ ವೆಬ್ ಪೋರ್ಟಲ್‌ನಲ್ಲಿ ರಿಜಿಸ್ಟ್ರಾರ್ ಅಪ್‌ಲೋಡ್ ಮಾಡುತ್ತಾರೆ” ಎಂದು ಸಂಘವಿ ವಿವರಗಳನ್ನು ನೀಡುತ್ತಾ ಹೇಳಿದ್ದಾರೆ. 

ಬದಲಾವಣೆಗಳನ್ನು ಪ್ರಸ್ತಾಪಿಸುತ್ತಾ, ಹೊಸ ಕಾರ್ಯವಿಧಾನದ ಬದಲಾವಣೆಗಳು ‘ಸನಾತನ ಸಂಪ್ರದಾಯಗಳು ಮತ್ತು ವಿವಾಹ ವ್ಯವಸ್ಥೆಯನ್ನು ಉಳಿಸುವ ಸರ್ಕಾರದ ಬದ್ಧತೆಯ’ ಪರಿಣಾಮವಾಗಿದೆ ಎಂದು ಸಂಘವಿ ಹೇಳಿದ್ದಾರೆ. 

“ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಮಾಜಿಕ ರಚನೆಯನ್ನು ಕಾಪಾಡಿಕೊಳ್ಳಲು, ಸರ್ಕಾರವು ‘ಗುಜರಾತ್ ವಿವಾಹ ನೋಂದಣಿ ಕಾಯ್ದೆ 2006’ ಅಡಿಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಗಳ ಭಾಗವಾಗಿ, ಪೋಷಕರನ್ನು ಈಗ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಸೇರಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಸಮಾಜ ವಿರೋಧಿ ಅಂಶಗಳು ರಾಜ್ಯದ ಹೆಣ್ಣುಮಕ್ಕಳನ್ನು ಬಲೆಗೆ ಬೀಳಿಸಲು ತಮ್ಮ ಗುರುತನ್ನು ಮರೆಮಾಡುವ ಮೂಲಕ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರು” ಎಂದು ಪಂಚಮಹಲ್ ಜಿಲ್ಲೆಯಲ್ಲಿ ನೀಡಲಾದ ನಕಲಿ ವಿವಾಹ ಪ್ರಮಾಣಪತ್ರಗಳ ಪ್ರಕರಣಗಳನ್ನು ಉಲ್ಲೇಖಿಸಿ ಸಂಘವಿ ಹೇಳಿದರು. 

ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲಿ ನೂರಾರು ನಿಕಾಹ್ ಪ್ರಮಾಣಪತ್ರಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಈ ಕಾರ್ಯವಿಧಾನದ ಬದಲಾವಣೆಗಳನ್ನು ಜಾರಿಗೆ ತರುವ ಮೊದಲು ಸರ್ಕಾರವು 30 ದಿನಗಳಲ್ಲಿ ನಾಗರಿಕರಿಂದ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಕೋರಿದೆ ಎಂದು ಅವರು ಹೇಳಿದರು.

ಸರ್ಕಾರ ಪ್ರೇಮ ವಿವಾಹವನ್ನು ವಿರೋಧಿಸುವುದಿಲ್ಲ ಆದರೆ ‘ವಂಚನೆ’ ಮತ್ತು ‘ಬಲವಂತ’ದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿಕೊಂಡರು. 

“ರಾಜ್ಯದ ಮಗಳನ್ನು ಬಲೆಗೆ ಬೀಳಿಸಲು ಸಲೀಂ ಸುರೇಶ್ ವೇಷ ಧರಿಸಿದರೆ, ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತದೆ, ಅವನು ಭವಿಷ್ಯದಲ್ಲಿ ಯಾವುದೇ ಮಗಳಿಗೆ ಹಾನಿ ಮಾಡಲು ಧೈರ್ಯ ಮಾಡುವುದಿಲ್ಲ” ಎಂದು ಸಂಘವಿ ಸದನದಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಈ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾನೂನು ಮತ್ತು ನ್ಯಾಯ ಸಚಿವ ಕೌಶಿಕ್ ವೆಕಾರಿಯ ವಿವಿಧ ಸಾಮಾಜಿಕ ಸಂಸ್ಥೆಗಳೊಂದಿಗೆ ಸುಮಾರು 30 ಸಭೆಗಳನ್ನು ನಡೆಸಿದ್ದಾರೆ ಎಂದು ಅವರು ಹೇಳಿದ್ದು, ವಾಸ್ತವವಾಗಿ, ಕಳೆದ ಹಲವಾರು ತಿಂಗಳುಗಳಿಂದ, ವಿವಿಧ ಸಾಮಾಜಿಕ ಗುಂಪುಗಳು ರಾಜ್ಯದಲ್ಲಿ ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಿವೆ ಮತ್ತು ಅದನ್ನು ನಿಲ್ಲಿಸಲು ಕಠಿಣ ಕ್ರಮಗಳಿಗೆ ಒತ್ತಾಯಿಸಿವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...