Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಯೋಧ್ಯೆಯ ಕಾಶಿ ವಿಶ್ವನಾಥ ದೇವಸ್ಥಾನ ಪುನರ್ನಿರ್ಮಾಣದ ನಂತರದ ಮೊದಲ ದೃಶ್ಯಗಳು ಎಂದು ವಿಡಿಯೊ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವಿಡಿಯೋ ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ಪರಿಶೀಲಿಸೋಣ…

ಈ ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊದ ಸ್ಕ್ರೀನ್ ಶಾಟ್‌ಗಳ ರಿವರ್ಸ್ ಇಮೇಜ್ ಹುಡುಕಾಟವುದಲ್ಲಿ ‘ಭಾರತ್‌ಮೋತಿವಾರಸ್’ ಎಂಬ Instagram ಬಳಕೆದಾರರು 11 ಮಾರ್ಚ್ 2021 ರಂದು ಇದೇ ರೀತಿಯ ದೃಶ್ಯಗಳಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಎಂಬುದು ಕಂಡುಬಂದಿದೆ. ಈ ವಿಡಿಯೋದಲ್ಲಿ ಕಾಣುತ್ತಿರುವುದು ಸೋಮನಾಥ ದೇವಾಲಯ ಎಂದು ಈ ಬಳಕೆದಾರರ ವಿವರಣೆ ಸ್ಪಷ್ಟವಾಗಿ ಹೇಳುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಈ ವಿಡಿಯೊದಲ್ಲಿ ಕಂಡುಬರುವ ಅದೇ ದೇವಾಲಯದ ಫೋಟೋವನ್ನು ಟೈಮ್ಸ್ ಆಫ್ ಇಂಡಿಯಾ 11 ನವೆಂಬರ್ 2021 ರಂದು ಪ್ರಕಟಿಸಿದ ಲೇಖನದಲ್ಲಿ ಹಂಚಿಕೊಂಡಿದೆ. ಈ ಫೋಟೋದಲ್ಲಿ ಗುಜರಾತ್ ರಾಜ್ಯದ ಶ್ರೀ ಸೋಮನಾಥ ಮಂದಿರವನ್ನು ನೋಡಬಹುದು ಎಂದು ಈ ಲೇಖನದಲ್ಲಿ ವರದಿಯಾಗಿದೆ. ಪೋಸ್ಟ್‌ನಲ್ಲಿ ಕಂಡುಬರುವ ಅದೇ ದೃಶ್ಯಗಳನ್ನು ಶ್ರೀ ಸೋಮನಾಥ ಮಂದಿರದಲ್ಲಿ ದೀಪಾವಳಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ದೇವಾಲಯದ ಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿಯೂ ನೋಡಬಹುದು.

ಶ್ರೀ ಕಾಶಿ ವಿಶ್ವನಾಥ ಕಾರಿಡಾರ್‌ನ ಪುನರ್ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಕಟವಾದ ಸುದ್ದಿ ಲೇಖನಗಳು ಮತ್ತು ವೀಡಿಯೊಗಳನ್ನು ನೀವು ಇಲ್ಲಿ ಕಾಣಬಹುದು. ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 13 ರಂದು ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ.

ಒಟ್ಟಾರೆ ಗುಜರಾತಿನ ಸೋಮನಾಥ ದೇವಾಲಯದ ದೃಶ್ಯಗಳನ್ನು ಶ್ರೀ ಕಾಶಿ ವಿಶ್ವನಾಥ ದೇವಾಲಯದ ಪುನರ್ ನಿರ್ಮಾಣ ಕಾರ್ಯದ ನಂತರ ತೆಗೆದ ದೃಶ್ಯಗಳು ಎಂದು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಪುನರ್ ನಿರ್ಮಾಣದ ನಂತರ ತೆಗೆದ ವಿಡಿಯೋ.

ನಿಜಾಂಶ: ಈ ವಿಡಿಯೋದಲ್ಲಿ ಕಾಣುತ್ತಿರುವುದು ಗುಜರಾತ್ ರಾಜ್ಯದ ಸೋಮನಾಥ ದೇವಾಲಯ. ವಾರಣಾಸಿಯ ಶ್ರೀ ಕಾಶಿ ವಿಶ್ವನಾಥ ದೇವಾಲಯವಲ್ಲ. ಈ ವಿಡಿಯೊವನ್ನು ಮಾರ್ಚ್ 2021 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...