Homeಮುಖಪುಟಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವ್ಯಾಪಾರಿಗಳ ನೋವಿನ ಕಥೆ ಇದು...

- Advertisement -
- Advertisement -

ಬೀದಿಬದಿಯ ಮಾಂಸಾಹಾರ ಮಳಿಗೆಗಳ ತೆರವು ಕಾರ್ಯಾಚರಣೆಯಿಂದಾಗಿ ಗುಜರಾತ್‌ ರಾಜ್ಯದಲ್ಲಿ ಮಾಂಸಾಹಾರ ಮಾರಾಟವನ್ನೇ ನಂಬಿಕೊಂಡಿದ್ದ ಬಡಪಾಯಿ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಹಲವು ಸ್ಥಳೀಯ ಸಂಸ್ಥೆಗಳು ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿವೆ. ಅಲಹಾಬಾದ್‌ದಂತಹ ಪ್ರಮುಖ ನಗರಗಳಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಾಂಸಾಹಾರ ಮಳಿಗೆಗಳನ್ನೇ ನಂಬಿಕೊಂಡು ಬದುಕುತ್ತಿದ್ದ ಜನರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ರಾಮ್‌ ಉದ್ಗರ್‌ ಗೋಸಾಯ್‌ ಎಂಬ ವ್ಯಾಪಾರಿಯನ್ನೇ ನೋಡಿ. ಅಂಗಡಿಯನ್ನು ಎಲ್ಲಿ ಇಡಬೇಕೆಂದು ಗೊತ್ತಾಗದೆ ತನ್ನ ಸ್ಕೂಟರ್‌ನಲ್ಲಿ ಅಹಮದಾಬಾದ್‌ ನಗರದ ಬೀದಿಬೀದಿಗಳನ್ನು ಮಂಗಳವಾರ ಸುತ್ತಾಡಿ ಸುಸ್ತಾದರು. ತನ್ನ ಮೊಟ್ಟೆ ಮಳಿಗೆಯನ್ನು ಹೊಟ್ಟೆಪಾಡಿಗಾಗಿ ಎಲ್ಲಿ ಇಡಬೇಕೆಂದು ತಿಳಿಯದೆ ಕಂಗಾಲಾದರು.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಎಸ್ಟೇಟ್ ಮತ್ತು ಪಟ್ಟಣ ಅಭಿವೃದ್ಧಿ ವಿಭಾಗವು ಅಹಮದಾಬಾದ್‌ ನಗರದ ಪ್ರದೇಶಗಳಾದ ಜೋಧ್‌ಪುರ, ಮಣಿನಗರ, ವಸ್ತ್ರಾಪುರ, ಆಶ್ರಮ ರಸ್ತೆ ಮತ್ತು ಬೆಹ್ರಾಂಪುರದಲ್ಲಿ ಸುಮಾರು 50 ಮಳಿಗೆಗಳನ್ನು ಮಂಗಳವಾರ ಸಂಜೆ ವೇಳೆಗೆ ಎತ್ತಂಗಡಿ ಮಾಡಿತ್ತು.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

“ಸಾಮಾನ್ಯವಾಗಿ ಈ ವೇಳೆಗೆ ಇಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮೊಟ್ಟೆಯ ಮಳಿಗೆಗಳು ಇರುತ್ತಿದ್ದವು. ಇವತ್ತು ಯಾರೂ ಬಂದಿಲ್ಲ. ಎಲ್ಲರೂ ಹೆದರುತ್ತಿದ್ದಾರೆ. ಅಧಿಕಾರಿಗಳು ಇಂದು ಮಧ್ಯಾಹ್ನ ವಸ್ತ್ರಾಪುರದಲ್ಲಿ 11 ಗಾಡಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಮಗೆ ತಿಳಿಯಿತು” ಎಂದು ಬಿಹಾರದ ಮಧುಬನಿಯಿಂದ ವಲಸೆ ಬಂದ ವ್ಯಾಪಾರಿ ಅಳಲು ತೋಡಿಕೊಂಡರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸುಮಾರು 20 ವರ್ಷಗಳ ಹಿಂದೆ ಅಹಮದಾಬಾದ್‌ಗೆ ವಲಸೆ ಬಂದ ಈ ವ್ಯಾಪಾರಿ, ತಾಲ್‌ಜೇಜ್ ಪ್ರದೇಶದಲ್ಲಿ ತನ್ನ ಮೊಟ್ಟೆ ಮಳಿಗೆಯನ್ನು ಇಟ್ಟುಕೊಂಡು ತರಹೇವಾರಿ ತಿನಿಸುಗಳನ್ನು ಮಾರುತ್ತಿದ್ದರು. ಬೀದಿಬದಿ ಆಹಾರವನ್ನೇ ಅವಲಂಬಿಸಿದ್ದವರು ಬಂದು ಸವಿಯುತ್ತಿದ್ದರು. ಮುಖ್ಯವಾಗಿ ಈ ವ್ಯಾಪಾರಿ ಮೂವರು ಯುವಕರಿಗೆ ಕೆಲಸ ಕೊಟ್ಟಿದ್ದರು.

ಇಲ್ಲಿನ ಸ್ಥಳೀಯ ಸಂಸ್ಥೆ ಮಾಂಸಾಹಾರಿ ಬಂಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರದಿಂದ ಆರಂಭಿಸಿದೆ. ಈ ಧಮನಕಾರಿ ಪ್ರವೃತ್ತಿಗೆ “ಅತಿಕ್ರಮಣ ವಿರೋಧಿ ಕಾರ್ಯಾಚರಣೆ” ಎಂದು ಚೆಂದದ ಹೆಸರಿಟ್ಟಿದ್ದು, ಬಡವ್ಯಾಪಾರಿಗಳ ಬಂಡಿಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.

ವಾರಣಾಸಿಯಿಂದ ವಲಸೆ ಬಂದ ಮತ್ತೊಬ್ಬ ಯುವ ವ್ಯಾಪಾರಿ ನಗರದ ಮತ್ತೊಂದು ಭಾಗದಲ್ಲಿ ಆಸೆಗಣ್ಣಿನಿಂದ ಕಾಯುತ್ತ ಮೊಟ್ಟೆ ಅಂಗಡಿಯನ್ನು ತೆರೆಯಲು ಅನುಮತಿಯನ್ನು ನಿರೀಕ್ಷಿಸುತ್ತಿದ್ದರು. ಸುಮಾರು 15 ವರ್ಷಗಳಿಂದ ಅಹಮದಾಬಾದ್‌ನಲ್ಲಿರುವ ತನ್ನ ಚಿಕ್ಕಪ್ಪನ ಬೆನ್ನು ಹತ್ತಿ, ಕಾಲೇಜು ಬಿಟ್ಟು ಬಂದ ಈ ಯುವಕ ಎರಡು ತಿಂಗಳಿಂದ ಇಲ್ಲಿನ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದನು. “ಈಗ ಕೆಲಸ ಕಳೆದುಕೊಂಡರೆ ಮುಂದೇನು ಮಾಡಬೇಕೆಂದು ತಿಳಿಯುತ್ತಿಲ್ಲ” ಎಂದು ಕಂಗಾಲಾಗಿದ್ದಾನೆ.

ಬಿಜೆಪಿಯ ನಾಯಕರು ಮಾತ್ರ ವಿರೋಧಾಭಾಸಗಳ ಹೇಳಿಕೆ ನೀಡುತ್ತಾ, ವಾಸ್ತವದಲ್ಲಿ ಮಾಂಸಾಹಾರ ವಿರೋಧಿತನವನ್ನು ಕಾರ್ಯಗತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ‘ಜನರು ಇಷ್ಟ ಬಂದಿದ್ದು ತಿನ್ನುತ್ತಾರೆ. ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಗುಜರಾತ್‌ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್‌.ಪಾಟೀಲ್‌ ಹೇಳುತ್ತಾರೆ. ಆದರೆ ಬಡವರ ವಿರೋಧಿ ಕಾರ್ಯಾಚರಣೆ, ಬಡವರ ನಿರ್ಮೂಲನೆ ಕಾರ್ಯಾಚರಣೆ ಶುರುವಾಗಿದೆ.

“ಯಾರೂ ಮಾಂಸಾಹಾರ ಮಳಿಗೆ ತೆರವು ನಿರ್ಧಾರವನ್ನು ತೆಗೆದುಕೊಂಡಿಲ್ಲ. ವ್ಯಾಪಾರಿಗಳ ಮೇಲೆ ಯಾವುದೇ ಕಾನೂನಾತ್ಮಕ ನಿಷೇಧವಿಲ್ಲ. ದೇಶದಲ್ಲಿ ಎರಡು ರೀತಿಯ ಜನರಿದ್ದಾರೆ: ಸಸ್ಯಾಹಾರಿ ಆಹಾರವನ್ನು ತಿನ್ನುವವರು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವವರು. ತಮಗೆ ಬೇಕಾದುದನ್ನು ತಿನ್ನುವುದು ಜನರ ಹಕ್ಕು. ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ. ಅವರು (ಮಾಂಸಾಹಾರ ಮಳಿಗೆ ಮಾಲೀಕರು) ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಸೂಕ್ತ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ ಅವರನ್ನು ನಿಲ್ಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಬಿಜೆಪಿ ಎಂದಿಗೂ ಯೋಚಿಸುವುದಿಲ್ಲ. ಈ ಕೆಲಸಗಳನ್ನೇ ಅವಲಂಬಿಸಿರುವ ಬಡವರಿದ್ದಾರೆ. ಯಾರೇ ಆಗಿರಲಿ, ಏನು ಮಾರಾಟ ಮಾಡಿದರೂ ಸಹಕರಿಸುತ್ತೇವೆ” ಎಂದು ಪಾಟೀಲ್ ಉದ್ಗರಿಸಿದ್ದರು. ಆದರೆ ಈ ಹೇಳಿಕೆಗೂ ಕ್ರಿಯೆಯೂ ವ್ಯತ್ಯಾಸ ಕಂಡು ಬರುತ್ತಿದೆ. ಗುಜರಾತ್‌‌ನ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯೇ ಅಧಿಕಾರ ನಡೆಸುತ್ತಿರುವುದು ವಾಸ್ತವ.


ಇದನ್ನೂ ಓದಿರಿ: ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...