Homeಮುಖಪುಟಗುಜರಾತ್‌ ತೂಗು ಸೇತುವೆ ದುರಂತ: ಸಾವಿಗೀಡಾದವರ ಸಂಖ್ಯೆ 60ಕ್ಕೆ ಏರಿಕೆ

ಗುಜರಾತ್‌ ತೂಗು ಸೇತುವೆ ದುರಂತ: ಸಾವಿಗೀಡಾದವರ ಸಂಖ್ಯೆ 60ಕ್ಕೆ ಏರಿಕೆ

ಇತ್ತೀಚೆಗೆ ನವೀಕರಿಸಿದ ನಂತರ ಜನರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿನ ಸಂಖ್ಯೆ 35ರಿಂದ 60ಕ್ಕೆ ಏರಿಕೆಯಾಗಿದೆ.

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದಲ್ಲಿ ಮಚ್ಚು ನದಿಯ ಮೇಲೆ ನಿರ್ಮಿಸಲಾದ ಸುಮಾರು ಶತಮಾನಗಳಷ್ಟು ಹಳೆಯದಾದ ತೂಗು ಸೇತುವೆ ಇಂದು (ಅಕ್ಟೋಬರ್‌ 30) ಸಂಜೆ ಕುಸಿದಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ ಗುಜರಾತ್ ಸೇತುವೆ ದುರಂತದಲ್ಲಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ.

60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಘಟನೆಯ ಸ್ಥಳದಲ್ಲಿದ್ದ ಗುಜರಾತ್ ಪಂಚಾಯತ್ ಸಚಿವ ಬ್ರಿಜೇಶ್ ಮೆರ್ಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

60ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ ಹೆಚ್ಚು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಇದ್ದಾರೆ. ಉಳಿದವರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಇದು ತುಂಬಾ ದುಃಖಕರವಾಗಿದೆ ಎಂದು ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಪ್ರತಿಕ್ರಿಯಿಸಿದ್ದಾರೆ.

ಸೇತುವೆ ಕುಸಿದ ನಂತರ ಹಲವರು ಈಜಿಕೊಂಡು ಬದುಕುಳಿಯಲು ಯತ್ನಿಸುತ್ತಿರುವುದು ಕಂಡುಬಂದಿದೆ. ಸೇತುವೆಯ ಮುರಿದ ತುದಿಗೆ ಜನರ ಗುಂಪು ಅಂಟಿಕುಳಿತಿರುವ ದೃಶ್ಯಗಳು ಕಂಡುಬಂದಿವೆ. ಮರಿದ ಸೇತುವೆಯೂ ಕೂಡ ಭಾಗಶಃ ಮುಳುಗಿದೆ.

ಮಹಿಳೆಯರು ಮತ್ತು ಮಕ್ಕಳು ದೃಶ್ಯಗಳಲ್ಲಿ ಕಂಡುಬಂದಿದ್ದಾರೆ. ಐತಿಹಾಸಿಕವಾದ ಸೇತುವೆಯನ್ನು ಇತ್ತೀಚೆಗೆ ನವೀಕರಿಸಿದ ನಂತರ ಜನರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇಂದು ಸಂಜೆ 6.42ರ ವೇಳೆಗೆ ಸೇತುವೆ ಮುರಿದುಬಿದ್ದಿದೆ.

100ಕ್ಕೂ ಹೆಚ್ಚು ಜನರು ನೀರಿನಡಿ ಸಿಕ್ಕಿಬಿದ್ದಿದ್ದಾರೆ. ಸೇತುವೆ ಕುಸಿದಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು. ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಜನರು ಜಮಾಯಿಸಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಈ ದುರಂತದ ಹೊಣೆಯನ್ನು ಸರ್ಕಾರ ಹೊರುತ್ತದೆ. ಪ್ರಧಾನಿಯವರು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ. ಎಲ್ಲಾ ಉನ್ನತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಕಳೆದ ವಾರ ನವೀಕರಣ ನಡೆದಿತ್ತು. ನಮಗೂ ಆಘಾತವಾಗಿದೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ” ಎಂದು ಗುಜರಾತ್‌ನ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ (ಸ್ವತಂತ್ರ ಉಸ್ತುವಾರಿ) ರಾಜ್ಯ ಸಚಿವ ಬ್ರಿಜೇಶ್ ಮೆರ್ಜಾ ತಿಳಿಸಿದ್ದಾರೆ.

ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. “ನವೀಕರಣದ ನಂತರ ಸಾರ್ವಜನಿಕರಿಗೆ ಇತ್ತೀಚೆಗೆ ತೆರೆಯಲಾದ ಸೇತುವೆಯು ಕುಸಿದು ಉಂಟಾಗಿರುವ ಘಟನೆಯಿಂದ ತೀವ್ರ ದುಃಖವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಪ್ರಧಾನಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳನ್ನು ತುರ್ತು ಸಜ್ಜುಗೊಳಿಸುವಂತೆ ಕೋರಿದ್ದಾರೆ. ಪರಿಸ್ಥಿತಿಯನ್ನು ಸರಿಯಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕೆಂದು ತಿಳಿಸಿರುವ ಅವರು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಬೇಕು ಎಂದು ಸೂಚಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಮೋರ್ಬಿ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಎಎಪಿ ಮುಖ್ಯಸ್ಥರಾದ ಅರವಿಂದ ಕೇಜ್ರೀವಾಲ್ ಅವರು, ಸಂತ್ರಸ್ತರು ಬದುಕುಳಿಯಲಿ ಎಂದು ಪ್ರಾರ್ಥಿಸಿದ್ದಾರೆ.

ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ರಾಜ್ಯ ರಾಜಧಾನಿ ಅಹಮದಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...