ತನ್ನ ಸ್ನೇಹಿತನನ್ನು ಭೇಟಿಯಾಗಲು ತೆರಳಿದ್ದ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಗುಜರಾತಿನ ವಡೋದರಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅತ್ಯಾಚಾರ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಗುಜರಾತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅತ್ಯಾಚಾರದ ಬಗ್ಗೆ ಬಾಲಕಿಯ ತಂದೆ ದೂರು ದಾಖಲಿಸಿದ್ದು, ಬಾಲಕಿಯು ರಾತ್ರಿ 11:30ರ ಸುಮಾರಿಗೆ ಸನ್‌ಸಿಟಿ ಸೊಸೈಟಿ ಬಳಿ ಸ್ನೇಹಿತನನ್ನು ಭೇಟಿಯಾಗಿದ್ದಳು. ಇಬ್ಬರೂ ಒಟ್ಟಿಗೆ ಕುಳಿತಿದ್ದಾಗ, ಮಧ್ಯರಾತ್ರಿಯ ಸುಮಾರಿಗೆ ಇಬ್ಬರು ಒಂದು ಬೈಕಿನಲ್ಲಿ ಮತ್ತು ಇನ್ನೊಂದು ಬೈಕ್‌ನಲ್ಲಿ ಮೂವರು ಸೇರಿ ಐದು ಜನರ ಗುಂಪು ಎರಡು ಮೋಟಾರು ಸೈಕಲ್‌ಗಳಲ್ಲಿ ಬಂದಿತ್ತು ಎಂದು ದೂರಿದ್ದಾರೆ. ಈ ಗುಂಪಿನಲ್ಲಿ ಇಬ್ಬರು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ
ಗುಂಪು ಮೊದಲಿಗೆ ಸಂತ್ರಸ್ತರ ನಡುವೆ ವಾಗ್ವಾದ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನಂತರ, ಐವರಲ್ಲಿ ಇಬ್ಬರು ಹೊರಟುಹೋಗಿದ್ದಾರೆ. ಆದರೆ ಉಳಿದ ಮೂವರಲ್ಲಿ ಇಬ್ಬರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮತ್ತೊಬ್ಬ ದುಷ್ಕರ್ಮಿ ಬಾಲಕಿಯ ಸ್ನೇಹಿತನನ್ನು ತಡೆದಿದ್ದನು. ಅತ್ಯಾಚಾರದ ನಂತರ ಸಂತ್ರಸ್ತೆ ಮತ್ತು ಅವರ ಸ್ನೇಹಿತ ತಕ್ಷಣವೇ ಪೊಲೀಸರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನಂತರ ಅಧಿಕಾರಿಗಳು ಆ ಪ್ರದೇಶದಲ್ಲಿ ಸುತ್ತುವರಿದು ತನಿಖೆ ಆರಂಭಿಸಿದ್ದಾರೆ. ಅಪರಾಧ ಸ್ಥಳದಲ್ಲಿ, ಪೊಲೀಸರು ಒಡೆದ ಗಾಜು ಮತ್ತು ಇನ್ನಿತರ ವಸ್ತುಗಳನ್ನು ಕಂಡುಕೊಂಡಿದ್ದು ಅದನ್ನು ಸಾಕ್ಷ್ಯವಾಗಿ ವಶಪಡಿಸಿಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಿಂದಿ ಮತ್ತು ಗುಜರಾತಿ ಭಾಷೆಗಳಲ್ಲಿ ಮಾತನಾಡುತ್ತಿದ್ದ ಆರೋಪಿಗಳ ಮುಖವನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಹೊರಟು ಹೋದ ಇಬ್ಬರು ಅಪ್ರಾಪ್ತರು ಎಂದು ವರದಿಯಾಗಿದೆ.
ಜಿಲ್ಲಾ ಪೊಲೀಸ್ ಮುಖ್ಯಸ್ಥ ರೋಹನ್ ಆನಂದ್ ಮಾತನಾಡಿ, ಸಂತ್ರಸ್ತೆ ಧರಿಸಿದ್ದ ಒಂದು ಅಥವಾ ಎರಡು ಆಭರಣಗಳು, ಆರೋಪಿಗಳ ಕೆಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಪೊಲೀಸ್ ತಂಡಗಳು ದುಷ್ಕರ್ಮಿಗಳ ಪತ್ತೆಗೆ ಅವಿರತವಾಗಿ ಶ್ರಮಿಸುತ್ತಿವೆ. ಒಂದೂವರೆಯಿಂದ ಎರಡು ಗಂಟೆಗಳ ಕಾಲ ಕೌನ್ಸೆಲಿಂಗ್ ನಂತರ ಸಂತ್ರಸ್ತೆಯ ದೂರನ್ನು ಅಧಿಕೃತವಾಗಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸಂತ್ರಸ್ತೆ ಮತ್ತು ಅವರ ಸ್ನೇಹಿತನ ಪ್ರಕಾರ, ಮೂವರು ಆರೋಪಿಗಳು ಸುಮಾರು 30-35 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.ಗುಜರಾತ್
ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು


