Homeಮುಖಪುಟಗುಜರಾತ್‌ | ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಗುಜರಾತ್‌ | ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ತನ್ನ ಸ್ನೇಹಿತನನ್ನು ಭೇಟಿಯಾಗಲು ತೆರಳಿದ್ದ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಗುಜರಾತಿನ ವಡೋದರಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅತ್ಯಾಚಾರ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರು ಶೋಧ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅತ್ಯಾಚಾರದ ಬಗ್ಗೆ ಬಾಲಕಿಯ ತಂದೆ ದೂರು ದಾಖಲಿಸಿದ್ದು, ಬಾಲಕಿಯು ರಾತ್ರಿ 11:30ರ ಸುಮಾರಿಗೆ ಸನ್‌ಸಿಟಿ ಸೊಸೈಟಿ ಬಳಿ ಸ್ನೇಹಿತನನ್ನು ಭೇಟಿಯಾಗಿದ್ದಳು. ಇಬ್ಬರೂ ಒಟ್ಟಿಗೆ ಕುಳಿತಿದ್ದಾಗ, ಮಧ್ಯರಾತ್ರಿಯ ಸುಮಾರಿಗೆ ಇಬ್ಬರು ಒಂದು ಬೈಕಿನಲ್ಲಿ ಮತ್ತು ಇನ್ನೊಂದು ಬೈಕ್‌ನಲ್ಲಿ ಮೂವರು ಸೇರಿ ಐದು ಜನರ ಗುಂಪು ಎರಡು ಮೋಟಾರು ಸೈಕಲ್‌ಗಳಲ್ಲಿ ಬಂದಿತ್ತು ಎಂದು ದೂರಿದ್ದಾರೆ. ಈ ಗುಂಪಿನಲ್ಲಿ ಇಬ್ಬರು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂಓದಿ: ಚುನಾವಣೋತ್ತರ ಸಮೀಕ್ಷೆ | ಹರಿಯಾಣ-ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಸಾಧ್ಯತೆ

ಗುಂಪು ಮೊದಲಿಗೆ ಸಂತ್ರಸ್ತರ ನಡುವೆ ವಾಗ್ವಾದ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನಂತರ, ಐವರಲ್ಲಿ ಇಬ್ಬರು ಹೊರಟುಹೋಗಿದ್ದಾರೆ. ಆದರೆ ಉಳಿದ ಮೂವರಲ್ಲಿ ಇಬ್ಬರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮತ್ತೊಬ್ಬ ದುಷ್ಕರ್ಮಿ ಬಾಲಕಿಯ ಸ್ನೇಹಿತನನ್ನು ತಡೆದಿದ್ದನು. ಅತ್ಯಾಚಾರದ ನಂತರ ಸಂತ್ರಸ್ತೆ ಮತ್ತು ಅವರ ಸ್ನೇಹಿತ ತಕ್ಷಣವೇ ಪೊಲೀಸರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ನಂತರ ಅಧಿಕಾರಿಗಳು ಆ ಪ್ರದೇಶದಲ್ಲಿ ಸುತ್ತುವರಿದು ತನಿಖೆ ಆರಂಭಿಸಿದ್ದಾರೆ. ಅಪರಾಧ ಸ್ಥಳದಲ್ಲಿ, ಪೊಲೀಸರು ಒಡೆದ ಗಾಜು ಮತ್ತು ಇನ್ನಿತರ ವಸ್ತುಗಳನ್ನು ಕಂಡುಕೊಂಡಿದ್ದು ಅದನ್ನು ಸಾಕ್ಷ್ಯವಾಗಿ ವಶಪಡಿಸಿಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಿಂದಿ ಮತ್ತು ಗುಜರಾತಿ ಭಾಷೆಗಳಲ್ಲಿ ಮಾತನಾಡುತ್ತಿದ್ದ ಆರೋಪಿಗಳ ಮುಖವನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಹೊರಟು ಹೋದ ಇಬ್ಬರು ಅಪ್ರಾಪ್ತರು ಎಂದು ವರದಿಯಾಗಿದೆ.

ಜಿಲ್ಲಾ ಪೊಲೀಸ್ ಮುಖ್ಯಸ್ಥ ರೋಹನ್ ಆನಂದ್ ಮಾತನಾಡಿ, ಸಂತ್ರಸ್ತೆ ಧರಿಸಿದ್ದ ಒಂದು ಅಥವಾ ಎರಡು ಆಭರಣಗಳು, ಆರೋಪಿಗಳ ಕೆಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಪೊಲೀಸ್ ತಂಡಗಳು ದುಷ್ಕರ್ಮಿಗಳ ಪತ್ತೆಗೆ ಅವಿರತವಾಗಿ ಶ್ರಮಿಸುತ್ತಿವೆ. ಒಂದೂವರೆಯಿಂದ ಎರಡು ಗಂಟೆಗಳ ಕಾಲ ಕೌನ್ಸೆಲಿಂಗ್ ನಂತರ ಸಂತ್ರಸ್ತೆಯ ದೂರನ್ನು ಅಧಿಕೃತವಾಗಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತೆ ಮತ್ತು ಅವರ ಸ್ನೇಹಿತನ ಪ್ರಕಾರ, ಮೂವರು ಆರೋಪಿಗಳು ಸುಮಾರು 30-35 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.ಗುಜರಾತ್‌

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...