Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...