Homeಮುಖಪುಟಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

ಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯ ಕರಡು ಸಿದ್ಧಪಡಿಸಲು ಐದು ಸದಸ್ಯರ ಸಮಿತಿಯನ್ನುಗುಜರಾತ್ ಸರ್ಕಾರ ಮಂಗಳವಾರ ನೇಮಿಸಿದೆ ಎಂದು ANI ವರದಿ ಮಾಡಿದೆ. ಸಮಿತಿಯು 45 ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಗುಜರಾತ್

ಭಾರತೀಯತೆ ನಮ್ಮ ಧರ್ಮ, ಸಂವಿಧಾನವು ನಮ್ಮ ‘ಪವಿತ್ರ ಗ್ರಂಥ’ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನಾವು ಸಂವಿಧಾನದ 75 ವರ್ಷಗಳನ್ನು ಆಚರಿಸುತ್ತಿದ್ದೇವೆ. ಸಮಾನ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಕರೂಪ ಕಾನೂನನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ.” ಎಂದು ಅವರು ಹೇಳಿದ್ದಾರೆ. ಗುಜರಾತ್

ಸಮಿತಿಯು ಸಾಮಾನ್ಯ ವೈಯಕ್ತಿಕ ಸಂಹಿತೆಯನ್ನು ಜಾರಿಗೆ ತರುವ ಹಲವಾರು ಅಂಶಗಳನ್ನು ಪರಿಶೀಲಿಸುತ್ತದೆ ಮತ್ತು ಎಲ್ಲಾ ವಲಯಗಳ ವ್ಯಕ್ತಿಗಳಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ರಂಜನಾ ದೇಸಾಯಿ ಈ ಸಮಿತಿಯ ನೇತೃತ್ವ ವಹಿಸಲಿದ್ದು, ಹಲವಾರು ಧಾರ್ಮಿಕ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ರಾಜ್ಯದ ಗೃಹ ಸಚಿವ ಹರ್ಷ ಸಂಘವಿ ಪಿಟಿಐಗೆ ತಿಳಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ

ಜನವರಿ 27 ರಂದು ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿತ್ತು. ಉತ್ತರಾಖಂಡವು ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ. 1867 ರಲ್ಲಿ ಪೋರ್ಚುಗೀಸರು ನಾಗರಿಕ ಸಂಹಿತೆಯನ್ನು ಅಂಗೀಕರಿಸಿದ್ದರು. ಅಂದಿನಿಂದ ಗೋವಾದಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಜಾರಿಯಲ್ಲಿದೆ.

ಈ ಸಂಹಿತೆಯು ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಪ್ರಸ್ತುತ ಎಲ್ಲಾ ಕಾರ್ಯಗಳು ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ವೈಯಕ್ತಿಕ ವ್ಯವಹಾರಗಳು ಎಂದು ಪರಿಗಣಿಸಲಾಗಿದ್ದು, ಸಮುದಾಯಗಳ ನಿರ್ದಿಷ್ಟ ಧರ್ಮ ಗ್ರಂಥಗಳ ಕಾನೂನುಗಳನ್ನು ಆಧರಿಸಿ ನಡೆಯುತ್ತವೆ.

ಸಾಮಾನ್ಯ ವೈಯಕ್ತಿಕ ಕಾನೂನಿನ ಪರಿಚಯ ಮಾಡುವುದು ಬಹಳ ಹಿಂದಿನಿಂದಲೂ ಬಿಜೆಪಿಯ  ಕಾರ್ಯಸೂಚಿಯಲ್ಲಿದ್ದು, ಪಕ್ಷ ಆಳದಲ್ಲಿರುವ ಹಲವಾರು ರಾಜ್ಯಗಳು ಅದನ್ನು ಅನುಷ್ಠಾನಗೊಳಿಸುವತ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಉತ್ತರಾಖಂಡದಲ್ಲಿ ಈ ನಿಯಮಗಳ ಅನುಷ್ಠಾನವು ಇತರ ಬಿಜೆಪಿ ಆಡಳಿತದ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಲಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ ತನ್ನ ಅಭಿಯಾನದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಈ ಅಭಿಯಾನದ ವೇಳೆ ಬಿಜೆಪಿಯು, ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಆಚರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅನುವು ಮಾಡಿಕೊಡುವುದರಿಂದ ಮುಸ್ಲಿಂ ಮಹಿಳೆಯರ ವಿರುದ್ಧ ತಾರತಮ್ಯ ಆಗುತ್ತಿವೆ ಎಂದು ವಾದಿಸಿತ್ತು.

ಉತ್ತರಾಖಂಡದ ಬಿಜೆಪಿ ಸರ್ಕಾರ ಅನುಷ್ಠಾನ ಮಾಡಿರುವ ಕಾನೂನು, ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಾಗಿದ್ದು, ಅದು ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಇದನ್ನೂಓದಿ:  ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...