Homeದಲಿತ್ ಫೈಲ್ಸ್ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಹೊಸದಿಲ್ಲಿ: ಕಳೆದ ಸೋಮವಾರ (ಫೆ.7ರಂದು) ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಮೋಟಾ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣೀಯರು ಕಲ್ಲು ತೂರಾಟ ನಡೆಸಿದ್ದಾರೆ. ದಲಿತ ವ್ಯಕ್ತಿಯ ವಿವಾಹದ ಮೆರವಣಿಗೆಯಲ್ಲಿ ದಲಿತರು ಸಫಾಗಳನ್ನು (ಸಾಂಪ್ರದಾಯಿಕ ಪೇಟಗಳನ್ನು) ಧರಿಸಿದ್ದಕ್ಕಾಗಿ ಸವರ್ಣೀಯರು ಕಲ್ಲುಗಳಿಂದ ದಾಳಿ ಮಾಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸವರ್ಣೀಯ ರಜಪೂತ ಸಮುದಾಯದವರಾದ ಗ್ರಾಮದ ಸರಪಂಚ್ ಸೇರಿದಂತೆ 28 ಜನರ ಮೇಲೆ ಪ್ರಕರಣವನ್ನು ಬನಸ್ಕಾಂತ ಪೊಲೀಸರು ದಾಖಲಿಸಿದ್ದಾರೆ. ದಾಳಿಕೋರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 506 (ಅಪರಾಧ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಹಲವು ವಿಭಾಗಗಳ ಅಡಿಯಲ್ಲಿ ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಪ್ರಕರಣವನ್ನು ಎಸ್‌ಸಿ/ಎಸ್‌ಟಿ ಪೊಲೀಸ್ ವಿಭಾಗದ ಉಪ ಅಧೀಕ್ಷಕರಿಗೆ (ಡಿವೈಎಸ್‌ಪಿಗೆ) ಹಸ್ತಾಂತರಿಸಲಾಯಿತು ಎಂದು ಗಢ್ ಪೊಲೀಸ್ ಠಾಣೆಯ ಡಿವೈಎಸ್‌ಪಿ ಕುಶಾಲ್ ಓಜಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಘಟನೆಯ ವಿವರಗಳು

ಮದುಮಗ ಅತುಲ್ ಸೆಖಾಲಿಯಾ ಅವರ ತಂದೆ ವೀರಭಾಯ್ ಸೆಖಾಲಿಯಾ ಅವರು ಘಟನೆಯ ಕುರಿತು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ವರ ಕುದುರೆಯ ಮೇಲೆ ಸವಾರಿ ಮಾಡಬಾರದು. ಕುಟುಂಬ ತನ್ನ ಯೋಜನೆಯನ್ನು ಕೈಬಿಡಬೇಕು ಎಂದು ಗ್ರಾಮದ ಸರಪಂಚ್ ಭರತ್‌ಸಿಂಹ ರಜಪೂತ್ ಸೇರಿದಂತೆ ಗ್ರಾಮದ ಹಲವಾರು ಸದಸ್ಯರು ಆಗ್ರಹಿಸಿದ್ದರು. ಕುದುರೆಯಲ್ಲಿ ಮೆರವಣಿಗೆ ಮಾಡಿದರೆ ಪರಿಣಾಮಗಳು ವ್ಯತಿರಿಕ್ತವಾಗುತ್ತವೆ ಎಂದು ಬೆದರಿಕೆ ಹಾಕಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಕುಟುಂಬವು ತಮ್ಮ ನಿರ್ಧಾರವನ್ನು ಬದಲಿಸಲಿಲ್ಲ. ಸರಪಂಚರು ಭಾನುವಾರ ಗ್ರಾಮಸ್ಥರ ಸಾರ್ವಜನಿಕ ಸಭೆಯನ್ನು ಕರೆದರು. ಅಲ್ಲಿ ಅವರು ಮತ್ತೊಮ್ಮೆ ಕುಟುಂಬಕ್ಕೆ ಬೆದರಿಕೆ ಹಾಕಿದರು. ದಲಿತ ಸಮುದಾಯದ ಸದಸ್ಯನು ಕುದುರೆ ಸವಾರಿ ಮಾಡಬಾರದು. ಏಕೆಂದರೆ ಅದು ಶತಮಾನಗಳ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದರು.

ಮದುವೆಯ ದಿನದಂದು ಘರ್ಷಣೆಯಾಗುವುದನ್ನು ತಪ್ಪಿಸಲು, ಮದುಮಗನನ್ನು ಕುದುರೆಯಲ್ಲಿ ಕರೆತರುವ ನಿರ್ಧಾರವನ್ನು ಕುಟುಂಬವು ಕೈಬಿಟ್ಟಿತು. ಮದುವೆಗೂ ಮುನ್ನ ದಲಿತ ಕುಟುಂಬ ಪೊಲೀಸರ ರಕ್ಷಣೆಯನ್ನೂ ಕೋರಿತ್ತು.

ಸೋಮವಾರ ಪೊಲೀಸ್ ಸಿಬ್ಬಂದಿಯ ಉಪಸ್ಥಿತಿಯ ನಡುವೆ ಮೆರವಣಿಗೆ ಪ್ರಾರಂಭವಾದಾಗ, ಮೆರವಣಿಗೆಯ ಸಮಯದಲ್ಲಿ ದಲಿತ ಸಮುದಾಯದ ಸದಸ್ಯರು ಸಫಾಗಳನ್ನು ಧರಿಸಿದ್ದನ್ನು ಸವರ್ಣೀಯರು ಆಕ್ಷೇಪಿಸಿದರು. ಜಾತಿ ನಿಂದನೆ ಪದಗಳನ್ನು ಬಳಸುವ ಮೂಲಕ ಕುಟುಂಬವನ್ನು ನಿಂದಿಸಿದರು.

ಎಫ್ಐಆರ್ ಪ್ರಕಾರ, ಕೆಲವು “ಅಪರಿಚಿತ” ವ್ಯಕ್ತಿಗಳು ಕಲ್ಲುಗಳಿಂದ ಹೊಡೆಯಲು ಪ್ರಾರಂಭಿಸಿದರು. ವರನ ಸಂಬಂಧಿಕರಲ್ಲಿ ಒಬ್ಬರು ಗಾಯಗೊಂಡಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...