Homeಮುಖಪುಟಬಂಗಾಳವನ್ನು ಗುಜರಾತಿಗರು ಮುನ್ನಡೆಸಲು ಬಿಡುವುದಿಲ್ಲ: ಮಮತ ಬ್ಯಾನರ್ಜಿ

ಬಂಗಾಳವನ್ನು ಗುಜರಾತಿಗರು ಮುನ್ನಡೆಸಲು ಬಿಡುವುದಿಲ್ಲ: ಮಮತ ಬ್ಯಾನರ್ಜಿ

ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಬಿಜೆಪಿಯಂತ ವಿನಾಶಕಾರಿ ಪಕ್ಷ ದೇಶದಲ್ಲಿ ಎಂದೂ ನೋಡಿಲ್ಲ ಎಂದು ಟೀಕಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯವನ್ನು ಸ್ಥಳೀಯರು ಮುನ್ನಡೆಸಬೇಕೇ ಹೊರತು ಹೊರಗಿನವರಲ್ಲ ಅಥವಾ ಗುಜರಾಜ್ ಜನರಲ್ಲ ಎಂದು ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹುತಾತ್ಮರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಪಶ್ಚಿಮ ಬಂಗಾಳದ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಕಿತ್ತೊಕೊಳ್ಳುತ್ತಿದೆ. ಬಿಜೆಪಿ ರಾಜ್ಯಕ್ಕೆ ಅನ್ಯಾಯ ಬಗೆದಿದೆ. ಇದಕ್ಕೆ ಬಂಗಾಳದ ಜನ ಸೂಕ್ತ ಸಮಯದಲ್ಲಿ ತಿರುಗೇಟು ನೀಡಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಲಿದೆ. ಬಿಜೆಪಿ ಮಾಡಿರುವ ಅವಮಾನಕ್ಕೆ ನಾವು ಸೇಡು ತೀರಿಸಿಕೊಳ್ಳುತ್ತೇವೆ. ಹೊರಗಿನವರು ಬಂಗಾಳವನ್ನು ಮುನ್ನಡೆಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರ ಹೆಸರನ್ನು ಪ್ರಸ್ತಾಪಿಸದೆ ಟೀಕಿಸಿದರು.

ರಾಜಸ್ಥಾನದಲ್ಲಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಯತ್ನಿಸುತ್ತಿದೆ. ಕೇಂದ್ರದ ಸಂಸ್ಥೆಗಳನ್ನು ಮತ್ತು ಹಣ ಬಲವನ್ನು ಬಳಸಿಕೊಂಡು ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಲದಲ್ಲೂ ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಇದಕ್ಕೆ ಕೇಂದ್ರ ಸಂಸ್ಥೆಗಳನ್ನು ಮತ್ತು ಹಣ ಬಲವನ್ನು ಬಳಸುತ್ತಿದೆ. ಬಿಜೆಪಿಯಂತ ವಿನಾಶಕಾರಿ ಪಕ್ಷ ದೇಶದಲ್ಲಿ ಎಂದೂ ನೋಡಿಲ್ಲ ಎಂದು ಟೀಕಿಸಿದರು.

ದೇಶದ ಜನರು ಮತ್ತು ಕೊರೊನ ವಾರಿಯರ್‌ಗಳು ಕೊರೊನ ಸೋಂಕು ವಿರುದ್ಧದ ಹೋರಾಟದಲ್ಲಿ ನಿರತರಾಗಿದ್ದಾರೆ. ಆದರೆ ಬಿಜೆಪಿ ರಾಜಸ್ಥಾನ ಮತ್ತು ಪಶ್ಚಿಮಬಂಗಾಳ ಸರ್ಕಾರ ನಂತರ ಮಧ್ಯಪ್ರದೇಶ ಸರ್ಕಾರಗಳನ್ನು ಅಸ್ಥಿರಗೊಳಿಸುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ಗುಜರಾತ್ ಆಡಳಿತವನ್ನು ಎಲ್ಲಾ ರಾಜ್ಯಗಳಲ್ಲೂ ಮಾಡಬಾರದೇಕೆ? ಫೆಡರಲ್ ರಚನೆಯ ಅವಶ್ಯಕತೆ ಏನು? ಎಂದು ಪ್ರಶ್ನಿಸಿದ ಅವರು ಒಂದು ದೇಶ ಒಂದು ಪಕ್ಷ ವ್ಯವಸ್ಥೆ ರಚನೆ ಮಾಡಲು ಬಿಜೆಪಿ ಹೊರಟಿದೆ ಎಂದು ಟೀಕಿಸಿದರು.


ಓದಿ: ನಾವು 2021ರ ಜೂನ್ ವರೆಗೂ ಉಚಿತ ಪಡಿತರ ನೀಡುತ್ತೇವೆ: ಮೋದಿಗೆ ಟಾಂಗ್‌ ಕೊಟ್ಟ ಮಮತಾ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...