Homeಮುಖಪುಟಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

- Advertisement -
- Advertisement -

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಹುಲ್ ಗಾಂಧಿಯವರ ಈ ಸೂಕ್ಷ್ಮ ಹೇಳಿಕೆಗೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋ+-ಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...