Homeಕರ್ನಾಟಕಗುಲ್ಬರ್ಗ ವಿವಿ ಯಲ್ಲಿ ಕನ್ಹಯ್ಯ ಉಪನ್ಯಾಸಕ್ಕೆ ಅನುಮತಿ ರದ್ದು : ಕಾರ್ಯಕ್ರಮ ಸ್ಥಳಾಂತರ

ಗುಲ್ಬರ್ಗ ವಿವಿ ಯಲ್ಲಿ ಕನ್ಹಯ್ಯ ಉಪನ್ಯಾಸಕ್ಕೆ ಅನುಮತಿ ರದ್ದು : ಕಾರ್ಯಕ್ರಮ ಸ್ಥಳಾಂತರ

- Advertisement -
- Advertisement -

ಗುಲ್ಬರ್ಗಾ ವಿವಿಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಉಪನ್ಯಾಸ ರದ್ದುಗೊಳಿಸಿದ ಕಾರಣ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.

ಕನ್ಹಯ್ಯ ಕುಮಾರ್ ಇಂದು ‘ಅಂಬೇಡ್ಕರ್ ಕಂಡ ಆಧುನಿಕ ಭಾರತದಲ್ಲಿ ಯುವಕರ ಪಾತ್ರ’ ವಿಷಯದ ಮೇಲೆ ಭಾಷಣ ಮಾಡಬೇಕಿತ್ತು. ಆದರೆ ಬಲಪಂಥೀಯ ಸಂಘಟನೆಗಳ ಒತ್ತಾಯದ ಕಾರಣದಿಂದ ಕನ್ಹಯ್ಯ ಕುಮಾರ್ ಭಾಷಣ ರದ್ದಾಗಿದ್ದರೂ ಪಟ್ಟು ಬಿಡದ ವಿ.ವಿ ಸಂಶೋಧನಾ ವಿದ್ಯಾರ್ಥಿಗಳ ಸಂಘ ಕಲಬುರ್ಗಿ ನಗರದ ಎಸ್‍ವಿಪಿ ವೃತ್ತದ ಬಳಿ ಇರುವ ವಿಶ್ವೆಶ್ವರಯ್ಯ ಎಂಜೀನಿಯರ್ಸ್ ಇನ್‍ಸ್ಟಿಟ್ಯೂಟ್‍ಗೆ ಸ್ಥಳಾಂತರಿಸಲಾಗಿದೆ.

ಇಲ್ಲಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯಲ್ಲಿ ಇಂದು ಆಯೋಜಿಸಿದ್ದ ಉಪನ್ಯಾಸವನ್ನು ವಿವಿ.ಕುಲಪತಿ ಪ್ರೊ ಪರಿಮಳಾ ಅಂಬೇಕರ್ ರದ್ದುಗೊಳಿಸಿದ್ದಾರೆ.

ರಾಜ್ಯಪಾಲರ ಮೂಲಕ ಗುಲ್ಬರ್ಗ ವಿವಿ ಕುಲಪತಿ ಅವರಿಗೆ ಮೌಖಿಕ ಆದೇಶ ಬಂದ ಕಾರಣ ಕನ್ಹಯ್ಯ ಭಾಷಣಕ್ಕೆ ನೀಡಿದ್ದ ಅನುಮತಿಯನ್ನು ರದ್ದಾಗಿದ್ದು, ಉನ್ನತ ಶಿಕ್ಷಣ ಇಲಾಖೆಯ ಮೌಖಿಕ ಸೂಚನೆ ಅನುಸಾರ ಈ ಕಾರ್ಯಕ್ರಮ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದ ಸುತ್ತಮುತ್ತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...