Homeಕರ್ನಾಟಕಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

ಗುಂಡ್ಲುಪೇಟೆ: ದಲಿತ ಮಹಿಳೆಯ ಕೆನ್ನೆಗೆ ಥಳಿಸಿದ ಸಚಿವ ಸೋಮಣ್ಣ

- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಹಲ್ಲೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಂಜೆ 6:30 ಕ್ಕೆ ಸಚಿವರು ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.

“ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ” ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

“ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ” ಎಂದು ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಮಹಿಳೆಯ ಕೆನ್ನೆಗೆ ಉದ್ದೇಶಪೂರ್ವಕವಾಗಿ ಹೊಡೆದಿರುವಂತೆ ಕಂಡು ಬರುತ್ತಿದೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸೋಮಣ್ಣನವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್‌ ಗೂಂಡೂರಾವ್‌ ಟ್ವೀಟ್ ಮಾಡಿದ್ದು, “ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದಿದ್ದಾರೆ.

“ಅಂದು ಅರವಿಂದ್ ಲಿಂಬಾವಳಿ, ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ, ಎಲ್ಲಿದೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಸರ್ಕಾರ? ಇದೇನಾ ಪ್ರಜಾಪ್ರಭುತ್ವ? ನಿಮ್ಮ ಮನೆಯ ಹೆಣ್ಣುಮಕ್ಕಳ ಮೇಲೂ ಹೀಗೆ ಹಲ್ಲೆ ಮಾಡ್ತೀರಾ? ಇವರ ಪ್ರಕಾರ ಹೆಣ್ಣು ಅಂದ್ರೆ ಏನು?” ಎಂದು ಯುವ ಕರ್ನಾಟಕ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...