Homeಮುಖಪುಟಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

ಗುರ್‌ಗಾಂವ್‌: ಶುಕ್ರವಾರದ ನಮಾಜ್‌ಗೆ ಮತ್ತೆ ಅಡ್ಡಿಪಡಿಸಿದ ಬಲಪಂಥೀಯರು

- Advertisement -
- Advertisement -

ಭಾರೀ ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ ಗುರ್‌ಗಾಂವ್‌ನಲ್ಲಿ ಬಲಪಂಥೀಯ ಕಾರ್ಯಕರ್ತರು ಇಂದು(ಶುಕ್ರವಾರ) ಮತ್ತೆ ಮುಸ್ಲಿಮರು ಶುಕ್ರವಾರದ ನಮಾಜ್‌ ಮಾಡುವುದಕ್ಕೆ ಅಡ್ಡಿಪಡಿಸಿದ್ದಾರೆ. ಶುಕ್ರವಾರದ ನಮಾಜ್‌ಗೆ ಸರ್ಕಾರ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡದಂತೆ ತಡೆಯಲು ಬಂದ ಸುಮಾರು ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಐವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ಸೆಕ್ಟರ್ 37 ರ ನಮಾಜ್ ಸೈಟ್‌ನಲ್ಲಿ ನಡೆದ ಘಟನೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬಲಪಂಥೀಯ ಕಾರ್ಯಕರ್ತರು ಮುಸ್ಲಿಮರು ನಮಾಜ್‌ ಮಾಡುತ್ತಿದ್ದ ಸ್ಥಳದಿಂದ 30 ಮೀಟರ್‌ಗಿಂತ ಕಡಿಮೆ ಅಂತರದಿಂದ ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗುತ್ತಿರುವುದು ವಿಡಿಯೊದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ:ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಮಾಜ್ ಸ್ಥಳವು ಪೊಲೀಸ್ ಠಾಣೆಗೆ ಸಮೀಪವಿದ್ದರೂ, ಮೈದಾನದಲ್ಲಿ ಭದ್ರತಾ ವ್ಯವಸ್ಥೆಯು ಅಸಮರ್ಪಕವಾಗಿತ್ತು ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಹೇಳಿದೆ. ವಿಡಿಯೊದಲ್ಲಿ, ನಮಾಜ್‌ಗೆ ಅಡ್ಡಿಪಡಿಸದಂತೆ ಪೊಲೀಸರು ಬಲಪಂಥೀಯ ಕಾರ್ಯಕರ್ತರು ತಡೆಯಲು ಪ್ರಯತ್ನಿಸುತ್ತಿರುವುದು ಕಾಣುತ್ತದೆ.

ನಮಾಜ್ ಸೈಟ್‌ನ ಕಡೆಗೆ ನಡೆಯುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಯೊಬ್ಬ ತಡೆಯಲು ಬರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅವನನ್ನು ಕರೆದೊಯ್ದಿದ್ದಾರೆ.

ವರದಿಗಳ ಪ್ರಕಾರ, ಸುಮಾರು 15 ಮುಸ್ಲಿಮರು ಇಂದು ನಮಾಜ್‌ಗಾಗಿ ಮೈದಾನದಲ್ಲಿ ಜಮಾಯಿಸಿ, ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ನಡುವೆಯೆ ಬಲಪಂಥೀಯರು ‘ಜೈ ಶ್ರೀ ರಾಮ್’ ಮತ್ತು ‘ವಂದೇ ಮಾತರಂ’ ಘೋಷಣೆ ಕೂಗಿದ್ದಾರೆ. ಇದಕ್ಕೂ ಮುಂಚೆ ಬೇರೆ ಕಡೆ ತಮ್ಮ ಟ್ರಕ್‌ಗಳನ್ನು ನಿಲ್ಲಿಸಲು ಜಾಗವಿಲ್ಲ ಎಂದು ಹೇಳಿ ಸ್ಥಳೀಯರು ತಮ್ಮ ಟ್ರಕ್‌‌ಗಳನ್ನು ನಮಾಜ್‌ಗೆ ಗೊತ್ತು ಪಡಿಸಿದ್ದ ಮೈದಾನದಲ್ಲಿ ನಿಲ್ಲಿಸಿದ್ದರು.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ನಮಾಜ್‌ ಮಾಡಬಾರದು ಎಂದು ಪ್ರತಿಭಟನೆಗಳು ನಡೆದು ಮೊದಲ ಸುದ್ದಿಯಾದಾಗ ಹರಿಯಾಣ ಮುಖ್ಯಮಂತ್ರಿ ಖಟ್ಟರ್, “ಎಲ್ಲರಿಗೂ ಪ್ರಾರ್ಥನೆ ಮಾಡುವ ಹಕ್ಕಿದೆ. ಆದರೆ ಪ್ರಾರ್ಥನೆ ಮಾಡುವವರು ರಸ್ತೆ ಸಂಚಾರವನ್ನು ನಿರ್ಬಂಧಿಸಬಾರದು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೋಡಲ್ಲಿ ನಮಾಜ್ ಮಾಡಿದರೆ ,ಸಾರ್ವಜನಿಕರ ಬದುಕಿಗೆ ಅಡ್ಡಿ ಮಾಡಿದರೆ ಯಾವುದೇ ಮುಲಾಜಿಲ್ಲದೇ ಅಲ್ಲಿಂದ ನಮಾಜ್ ಮಾಡುವವರ ವಿರುದ್ಧ ಘೋಷಣೆ ಕೂಗದೇ ಇರಲಾರು

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...