ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮಂಗಳವಾರ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ. ಅವರು ಬೆಳಿಗ್ಗೆ ಜೈಲಿನಿಂದ ಹೊರಬಂದಿದ್ದಾರೆ.
ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಪ್ರಸ್ತುತ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲಿನಲ್ಲಿದ್ದಾರೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆಗೆ ಜೀವಾವಧಿ ಶಿಕ್ಷೆಯೂ ವಿಧಿಸಲಾಗಿದ್ದು, ಇದು ಅವರ ಪ್ರಸ್ತುತ ಶಿಕ್ಷೆಯ ಅವಧಿ ಮುಗಿದ ನಂತರ ಪ್ರಾರಂಭವಾಗಲಿದೆ.
ಹರಿಯಾಣದ ಪಂಚಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯವು 2021 ರ ಅಕ್ಟೋಬರ್‌ನಲ್ಲಿ ಎಲ್ಲ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿ ಕೊಲೆ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಸಹ-ಆರೋಪಿಗಳೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದಲ್ಲಿ ಸಿಂಗ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಯಿತು.
ರಂಜಿತ್ ಸಿಂಗ್ ಕೊಲೆ ಪ್ರಕರಣ
ಜುಲೈ 10, 2002 ರಂದು ಹರಿಯಾಣದ ಕುರುಕ್ಷೇತ್ರದ ಖಾನ್ಪುರ್ ಕೊಲಿಯನ್ ಗ್ರಾಮದಲ್ಲಿ ರಂಜಿತ್ ಸಿಂಗ್ ಮೇಲೆ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದರು. ಈ ಕೊಲೆಯನ್ನು ರಾಮ್ ರಹೀಮ್ ಸಿಂಗ್ ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರು ತಮ್ಮ ಮಹಿಳಾ ಅನುಯಾಯಿಗಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಅನಾಮಧೇಯ ಪತ್ರದ ಪ್ರಸಾರದ ಹಿಂದೆ ಇದ್ದಾರೆ ಎಂದು ಶಂಕಿಸಿದ್ದಾರೆ.
ಖುಲಾಸೆಗೊಂಡವರಲ್ಲಿ ಅವತಾರ್ ಸಿಂಗ್, ಕ್ರಿಶನ್ ಲಾಲ್, ಜಸ್ಬೀರ್ ಸಿಂಗ್ ಮತ್ತು ಸಬ್ದಿಲ್ ಸಿಂಗ್ ಸೇರಿದ್ದಾರೆ. ಆದರೆ, ಮತ್ತೊಬ್ಬ ಆರೋಪಿ ಇಂದರ್ ಸೈನ್ 2020 ರಲ್ಲಿ ವಿಚಾರಣೆಯ ಹಂತದಲ್ಲಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ; ಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ


