Homeಚಳವಳಿಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಗುರು ರವಿದಾಸ್ ಜಯಂತಿ ಹಿನ್ನೆಲೆ ಪಂಜಾಬ್‌ನ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ಕ್ಕೆ ಮುಂದೂಡಲಾಗಿದೆ.

- Advertisement -
- Advertisement -

15 ರಿಂದ 16 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಗುರು ರವಿದಾಸ್ ಅವರ ಜಯಂತಿ ಇಂದು. ಸಂತ ರವಿದಾಸ್‌ ಬರೆದಿರುವ ದೋಹೆಗಳು/ವಚನಗಳನ್ನು ಸಿಖ್ ಧರ್ಮ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನಲ್ಲಿಯೂ ಸೇರಿಸಲಾಗಿದೆ.

ಸಂತ, ಕವಿ ಸಮಾಜವನ್ನು ಸುಧಾರಿಸಲು ಮತ್ತು ಜಾತಿ ಆಧಾರಿತ ಶ್ರೇಣಿ ವ್ಯವಸ್ಥೆಯ ಪಕ್ಷಪಾತಗಳನ್ನು ತೆಗೆದುಹಾಕಲು ಧಾರ್ಮಿಕವಾಗಿ ಕೆಲಸ ಮಾಡಿದವರು. ಇವರ ಜನ್ಮದಿನವನ್ನು ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದಲ್ಲಿ ಆಚರಿಸಲಾಗುತ್ತದೆ.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವವನ್ನು ಮಾಘ ಪೂರ್ಣಿಮಾದಂದು  (ಮಾಘ ಮಾಸದ ಹುಣ್ಣಿಮೆಯ ದಿನ) ಆಚರಿಸಲಾಗುತ್ತದೆ. ಈ ವರ್ಷ, ಇದು ಫೆಬ್ರವರಿ 16 ರಂದು ಈ ಮಾಘ ಪೂರ್ಣಿಮಾ ಬಂದಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಚಮ್ಮಾರ ಕುಲದಲ್ಲಿ ಜನಿಸಿದ್ದ ಇವರು, ಜಾತಿಯ ಆಧಾರದ ಮೇಲೆ ಸಮಾನತೆ ಮತ್ತು ಘನತೆಯ ನೀಡದಿರುವ ಬಗ್ಗೆ ಖಂಡಿಸಿದ್ದರು. ಲಿಂಗ ಸಮಾನತೆಯನ್ನು ಉತ್ತೇಜಿಸಿದರು. ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದ್ದರು. ಇವರು ಭಕ್ತಿ ಚಳವಳಿಯ ಮತ್ತೊಬ್ಬ ಪ್ರಮುಖ ಕವಯರ್ತಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.

ವಾರಣಾಸಿಯ ಅವರ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಶ್ರೀ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಅದ್ಧೂರಿ ಆಚರಣೆಯನ್ನು ಆಯೋಜಿಸಲಾಗಿದೆ. ಅವರ ಕೆಲವು ಅನುಯಾಯಿಗಳು ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಅವರ ಗೌರವಾರ್ಥವಾಗಿ ಆರತಿ ಮಾಡುತ್ತಾರೆ. ರವಿದಾಸ್ ಜನಮ್ ಆಸ್ಥಾನ ಮಂದಿರವು 1970 ರ ದಶಕದಲ್ಲಿ ಉದ್ಘಾಟನೆಗೊಂಡಿತು.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಮಾನವತಾವಾದದ ಕುರಿತು ಗುರು ರವಿದಾಸ್ “ಪ್ರತಿಯೊಬ್ಬ ಮಾನವರಲ್ಲಿಯೂ ದೇವರು ನೆಲೆಸಿದ್ದಾರೆ, ಜಾತಿಗಳು, ಪಂಥಗಳು ಮತ್ತು ಇತರ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಗಳ ಆಧಾರದ ಮೇಲೆ ವ್ಯಕ್ತಿಗಳನ್ನು ಪ್ರತ್ಯೇಕಿಸುವುದು ತುಂಬಾ ನಿಷ್ಪ್ರಯೋಜಕವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...