Homeಮುಖಪುಟಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

- Advertisement -
- Advertisement -

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಗುರುಗ್ರಾಮ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 109 ರ ಅಡಿಯಲ್ಲಿ ‘ಕೊಲೆ ಯತ್ನ’ ಪ್ರಕರಣವನ್ನು ಸೇರಿಸಿದ ನಂತರ ಚಾಲಕನನ್ನು ಬಂಧಿಸಲಾಗಿದೆ. ಈ ಕಾಯ್ದೆಯಡಿ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಜಿಮ್ ಮಾಲೀಕ ಹಾಗೂ ತಾನು ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಎಂದು ಹೇಳಿಕೊಳ್ಳುವ ಬೈನ್ಸ್ಲಾ, ಸೋಮವಾರ (ಸೆಪ್ಟೆಂಬರ್ 14) ತಾವು “ಸಿಯಾ” ಎಂದೇ ಗುರುತಿಸಲ್ಪಡುವ ಶಿವಾನಿ ಚೌಹಾಣ್ ಅವರ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದು ಆರೋಪವನ್ನು ನಿರಾಕರಿಸಿದ್ದಾನೆ.

ಬೈಕ್‌ ಸವಾರಿ ಮಾಡುತ್ತಿದ್ದವರು ಮಹಿಳೆ ಎಂಬುದು ತನಗೆ ತಿಳಿದಿರಲಿಲ್ಲ, ಬೈಕನ್ನು ನಿಧಾನವಾಗಿ ಚಲಾಯಿಸುವಂತೆ ಮಾತ್ರ ಮನವಿ ಮಾಡಿದ್ದೆ ಎಂದು ಆರೋಪಿ ಹೇಳಿದ್ದಾನೆ. “ನಾನು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದೆ. ನಾನು ಆ ಯುವತಿಗೆ ಯಾವುದೇ ಸನ್ನೆ ಮಾಡಲಿಲ್ಲ; ಬೈಕನ್ನು ಮೆಲ್ಲಗೆ ಚಲಾಯಿಸುವಂತೆ ಮಾತ್ರ ಹೇಳಿದೆ” ಎಂದಿದ್ದಾನೆ.

ಅಪಘಾತ ಸಂಭವಿಸಿರುವುದನ್ನು ಒಪ್ಪಿಕೊಂಡ ಆತ, ಜನಸಂದಣಿ ದಾಳಿ ಮಾಡಬಹುದು ಎಂಬ ಭಯದಿಂದ ಸ್ಥಳದಿಂದ ತೆರಳಿದ್ದಾಗಿ ಹೇಳಿದ್ದಾನೆ. ಸುಮಾರು 20 ರಿಂದ 22 ಬೈಕ್ ಸವಾರರು ಅತಿ ವೇಗದಲ್ಲಿ ಸಾಗುತ್ತಿದ್ದರು. ಸಿಯಾ ಗಂಟೆಗೆ 140 ರಿಂದ 160 ಕಿ.ಮೀ ವೇಗದಲ್ಲಿದ್ದರು ಎಂದು ಬೈನ್ಸ್ಲಾ ಹೇಳಿದ್ದಾನೆ.

ಸಿಯಾ ಮಿರರ್ ನೋಡದೆ ಯು-ಟರ್ನ್ ತೆಗೆದುಕೊಳ್ಳುತ್ತಿದ್ದರು, ಆ ಸಂದರ್ಭದಲ್ಲಿ ಕಾರಿನ ಮೇಲಿನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು. ಅದು ನನ್ನದೇ ತಪ್ಪು, ನಾನು ಅದನ್ನು ಒಪ್ಪಿಕೊಳ್ಳುತ್ತೇನೆ” ಎಂದಿದ್ದಾನೆ.

ಅಪಘಾತದ ನಂತರ, ಆರಂಭದಲ್ಲಿ ಕಾರನ್ನು ನಿಲ್ಲಿಸೋಣ ಎಂದು ತಮ್ಮ ಸಹೋದರನಿಗೆ ಹೇಳಿದ್ದರೂ, ಬೈಕ್ ಸವಾರರು ನಿಂದಿಸಲು ಪ್ರಾರಂಭಿಸಿದ ನಂತರ ಮನಸ್ಸು ಬದಲಾಯಿಸಿದ್ದಾಗಿ ಆರೋಪಿ ಹೇಳಿದ್ದಾನೆ. “ಕುಟುಂಬದವರು ಜೊತೆಯಲ್ಲಿದ್ದರಿಂದ, ಕಾರು ನಿಲ್ಲಿಸಿದರೆ ನಮ್ಮ ಮೇಲೆ ಹಲ್ಲೆ ನಡೆಸಬಹುದು ಎಂಬ ಭಯವಿತ್ತು. ನಂತರ ರೆಡ್ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿ ಮಾತನಾಡಲು ಪ್ರಯತ್ನಿಸಿ, ಅದು ನನ್ನ ತಪ್ಪಲ್ಲ ಎಂದು ವಿವರಿಸಿದೆ. ಆದರೂ ನನ್ನ ಸಹೋದರ ಅಲ್ಲಿ ನಿಲ್ಲಿಸಲು ಒಪ್ಪಲಿಲ್ಲ” ಎಂದು ತಿಳಿಸಿದ್ದಾನೆ.

“ನನ್ನ ವಿರುದ್ಧ ಈ ಹಿಂದೆ ಒಂದೇ ಒಂದು ಪ್ರಕರಣವೂ ಇಲ್ಲ. ಈಗ ನನಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಆತ ಅಳಲು ತೋಡಿಕೊಂಡಿದ್ದಾನೆ. ಈ ವಿವಾದದ ನಂತರ ಆತ ತನ್ನ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಸಿಯಾ, ಆರೋಪಿ ಬೈನ್ಸ್ಲಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಆರೋಪಿಗೆ ಅಪಘಾತದ ಬಗ್ಗೆ ನಿಜವಾಗಿಯೂ ಪಶ್ಚಾತ್ತಾಪವಿದ್ದರೆ, ಕಾರು ಡಿಕ್ಕಿಯಾದ ತಕ್ಷಣ ಆತ ಸ್ಥಳದಲ್ಲೇಕೆ ನಿಲ್ಲಿಸಲಿಲ್ಲ ಎಂದು ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

ತಾನು ಮಹಿಳಾ ಬೈಕರ್ ಆಗಿರುವುದಕ್ಕೇ ತನ್ನನ್ನು ಗುರಿಯಾಗಿಸಲಾಯಿತು, ನನ್ನನ್ನು ತಡೆಯಲು ಉದ್ದೇಶಪೂರ್ವಕ ಯತ್ನ ನಡೆಸಲಾಯಿತು ಎಂದು ಸಿಯಾ ಆರೋಪಿಸಿದ್ದಾರೆ. ಈ ಅಪಘಾತದಲ್ಲಿ ನನ್ನ ಪ್ರಾಣವೇ ಹೋಗಬಹುದಿತ್ತು, ಆದರೆ ಆರೋಪಿ ತಾನು ಸುರಕ್ಷಿತವಾಗಿದ್ದೇನೆಯೇ ಎಂದು ನೋಡುವ ಸಣ್ಣ ಪ್ರಯತ್ನವನ್ನೂ ಮಾಡಲಿಲ್ಲ ಎಂದಿದ್ದಾರೆ.

ತಮ್ಮ ಕಾರಿನಿಂದ ಬೈಕಿಗೆ ಡಿಕ್ಕಿ ಹೊಡೆದ ನಂತರ ಬೈನ್ಸ್ಲಾ ಒಂದು ಕ್ಷಣವೂ ನಿಲ್ಲಿಸಲಿಲ್ಲ ಎಂದು ಸಿಯಾ ಹೇಳಿದ್ದಾರೆ. “ಇಂತಹ ಜನರನ್ನು ಕಂಡು ನನಗೆ ನಾಚಿಕೆಯಾಗುತ್ತದೆ. ದೆಹಲಿ ಮತ್ತು ಗುರುಗ್ರಾಮದ ರಸ್ತೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಿರುವ ಎರಡು ವಿಡಿಯೋಗಳೇ ಸೂಕ್ತ ಸಾಕ್ಷಿಯಾಗಿವೆ ಎಂದು ಅವರು ಹೇಳಿದ್ದಾರೆ. ಅಪಘಾತವು ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದ್ದು, ಕಾರು ಬೈಕಿಗೆ ಡಿಕ್ಕಿ ಹೊಡೆಯುವುದು ಮತ್ತು ಚಾಲಕ ಪರಾರಿಯಾಗುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇಂತಹ ಜನರಿಗೆ ಚಾಲನೆ ಮಾಡುವುದು ಹೇಗೆ ಎಂಬ ಬಗ್ಗೆ ಪಾಠ ಕಲಿಸಬೇಕಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...