Homeಮುಖಪುಟ2006 ಎಂಜಿನಿಯರ್ ಆತ್ಮಹತ್ಯೆ ಪ್ರಕರಣ : ಗ್ಯಾನೇಶ್ ಕುಮಾರ್ ವಿರುದ್ಧ ಮರುತನಿಖೆಗೆ ಕೇರಳಂ ಸರ್ಕಾರ ಆದೇಶ

2006 ಎಂಜಿನಿಯರ್ ಆತ್ಮಹತ್ಯೆ ಪ್ರಕರಣ : ಗ್ಯಾನೇಶ್ ಕುಮಾರ್ ವಿರುದ್ಧ ಮರುತನಿಖೆಗೆ ಕೇರಳಂ ಸರ್ಕಾರ ಆದೇಶ

- Advertisement -
- Advertisement -

ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪ ಎದುರಿಸುತ್ತಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ 2006ರ ಹಳೆಯ ಭ್ರಷ್ಟಾಚಾರ ಪ್ರಕರಣವೊಂದು ಮತ್ತೆ ಕಂಠಕವಾಗಿ ಪರಿಣಮಿಸಿದೆ. 2006ರಲ್ಲಿ ಕೇರಳ ಸರ್ಕಾರದ ಲೋಕೋಪಯೋಗಿ (PWD) ಕಾರ್ಯದರ್ಶಿಯಾಗಿದ್ದ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿದ್ದ ಗಂಭೀರ ಭ್ರಷ್ಟಾಚಾರ ಹಾಗೂ ಕಿರುಕುಳ ಆರೋಪಗಳ ಕುರಿತು ಪ್ರಾಥಮಿಕ ವಿಜಿಲೆನ್ಸ್ ತನಿಖೆಗೆ ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಆದೇಶಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕೇರಳ ರಾಜ್ಯ ಸಾರಿಗೆ ಯೋಜನೆ (KSTP) ಅಡಿಯಲ್ಲಿ ನಡೆದ ಎಂ.ಸಿ. ರಸ್ತೆ ಉನ್ನತೀಕರಣ ಕಾಮಗಾರಿಯ ಗುತ್ತಿಗೆ ಪಡೆದಿದ್ದ ‘ಪಾಟಿ-ಬೆಲ್’ ಒಕ್ಕೂಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲೇಷ್ಯಾದ ಸಿವಿಲ್ ಎಂಜಿನಿಯರ್ ಲೀ ಸೀ ಬಿನ್ 2006ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿಟ್ಟಿದ್ದ ಆತ್ಮಹತ್ಯಾ ಪತ್ರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿಗಳಿಂದ ನಡೆದ ತೀವ್ರ ಭ್ರಷ್ಟಾಚಾರ, ದುರಾಡಳಿತ ಮತ್ತು ಕಿರುಕುಳದ ಬಗ್ಗೆ ಉಲ್ಲೇಖಿಸಲಾಗಿದ್ದು, ಗ್ಯಾನೇಶ್ ಕುಮಾರ್ ಅವರ ಹೆಸರನ್ನೂ ನೇರವಾಗಿ ಉಲ್ಲೇಖಿಸಲಾಗಿತ್ತು. ಈ ಘಟನೆ ನಡೆದ ತಕ್ಷಣ ವಿಜಿಲೆನ್ಸ್ ತನಿಖೆ ಆರಂಭವಾಗಿದ್ದರೂ, ಕಾಲಕ್ರಮೇಣ ತನಿಖೆ ಸ್ಥಗಿತಗೊಂಡು ಜ್ಞಾನೇಶ್ ಕುಮಾರ್ ಕೇಂದ್ರ ಸೇವೆಯ ಡೆಪ್ಯುಟೇಶನ್ ಮೇಲೆ ರಕ್ಷಣಾ ಸಚಿವಾಲಯಕ್ಕೆ ತೆರಳಿದ್ದರು.

ಇದೀಗ ಕೇರಳದ ಗೃಹ ಇಲಾಖೆಯು ಗ್ಯಾನೇಶ್ ಕುಮಾರ್ ವಿರುದ್ಧದ ಹಳೆಯ ಪ್ರಾಥಮಿಕ ವಿಜಿಲೆನ್ಸ್ ತನಿಖೆಯ ಕಡತಗಳನ್ನು ಮರುಪರಿಶೀಲನೆಗೆ ತರಿಸಿಕೊಂಡಿದ್ದು, ಮರುತನಿಖೆಗೆ ಆದೇಶಿಸಿದೆ. ಕೆಪಿಸಿಸಿ ನಾಯಕ ವೇಣುಗೋಪಾಲ್ ನೀಡಿದ ದೂರಿನ ಆಧಾರದಲ್ಲಿ ಗೃಹ ಸಚಿವರು ಈ ಸೂಕ್ತ ಕ್ರಮಕ್ಕೆ ಮುಂದಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುವ ಮೊದಲು ಸಮಗ್ರ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ (VACB) ಸೂಚಿಸಲಾಗಿದೆ. ದೇಶಾದ್ಯಂತ ‘ಸಿರ್’ (SIR) ಮೂಲಕ ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಡಿಲೀಟ್ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಜ್ಞಾನೇಶ್ ಕುಮಾರ್ ವಿರುದ್ಧ ಸಮರ ಸಾರಿರುವ ಬೆನ್ನಲ್ಲೇ ಈ ಹಳೆಯ ಭ್ರಷ್ಟಾಚಾರ ಪ್ರಕರಣ ಮುನ್ನೆಲೆಗೆ ಬಂದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕಠೋರ ಮತ್ತು ಅಸಭ್ಯ ನಡವಳಿಕೆ ಒಪ್ಪಲಾಗದು : ಜಂತರ್ ಮಂತರ್‌ನಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಖಂಡನೆ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ದೆಹಲಿ ಪೊಲೀಸರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ನಡೆದುಕೊಂಡ ರೀತಿ ಮತ್ತು ಅವರ ಮೇಲಿನ ದೌರ್ಜನ್ಯವನ್ನು ಖಂಡಿಸಿ 'ಪ್ರೆಸ್ ಕ್ಲಬ್...

SIR ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ಹಳೆಯ ಪ್ರಕರಣ ಮರುತನಿಖೆಗೆ ಆದೇಶ 

ತಿರುವನಂತಪುರಂ: ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಅಧಿಕಾರಾವಧಿಗೆ ಸಂಬಂಧಿಸಿದ...

ಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ: ರಾಹುಲ್ ಗಾಂಧಿ, ಸಿಜೆಪಿ ಆರೋಪ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿ, ಬಿಜೆಪಿಗೆ ಅನುಕೂಲವಾಗುವಂತೆ ಕೋಟ್ಯಂತರ ಮತಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ...

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...