Homeಮುಖಪುಟ'ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು': ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

- Advertisement -
- Advertisement -

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ.

2006ರಲ್ಲಿ ಗ್ಯಾನೇಶ್ ಕುಮಾರ್ ಕೇರಳದಲ್ಲಿ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಕಾರ್ಯದರ್ಶಿಯಾಗಿದ್ದ ಅವಧಿಗೆ ಸಂಬಂಧಿಸಿದಂತೆ ಈ ಆರೋಪ ಕೇಳಿಬಂದಿದೆ. ತನಿಖಾಧಿಕಾರಿಗಳು ಸೋಮವಾರ (ನ.9) ವಿ.ಒ ಸಾಜನ್ ಅವರಿಂದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸಾಜನ್ ಅವರು ಈ ಹಿಂದೆ ಕೇರಳ ರಾಜ್ಯ ಸಾರಿಗೆ ಯೋಜನೆ (ಕೆಎಸ್‌ಟಿಪಿ) ಅಡಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಗುತ್ತಿಗೆ ಸಂಸ್ಥೆಯಾದ ‘ಪಾಟಿ-ಬೆಲ್’ (ಪಿಎಟಿಐ-ಬಿಇಎಲ್) ಕನ್ಸೋರ್ಟಿಯಂಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದರು.

ಪಾಟಿ-ಬೆಲ್ ಸಂಸ್ಥೆಯ ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ ಮಲೇಷ್ಯಾ ಮೂಲದ ಲೀ ಸೀ ಬೀನ್ ಅವರು 2006ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯು ಆಗಿನ ಪಿಡಬ್ಲ್ಯೂಡಿ ಕಾರ್ಯದರ್ಶಿಯಾಗಿದ್ದ ಗ್ಯಾನೇಶ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿಬರಲು ಕಾರಣವಾಗಿತ್ತು. ಬಾಕಿ ಉಳಿದಿರುವ ಬಿಲ್‌ಗಳನ್ನು ಬಿಡುಗಡೆ ಮಾಡಲು ಗ್ಯಾನೇಶ್ ಅವರು ಲಂಚ ಕೇಳಿದ್ದರು ಮತ್ತು ಲೀ ಅವರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಅವರ ಹೆಸರು ಉಲ್ಲೇಖವಾಗಿದೆ ಎಂದು ಅಂದಿನ ಮಾಧ್ಯಮ ವರದಿಗಳು ಆರೋಪಿಸಿದ್ದವು. ಆದಾಗ್ಯೂ, ಯೋಜನೆಯಲ್ಲಿ ಯಾವುದೇ ಅಕ್ರಮಗಳು ಕಂಡುಬರದ ಕಾರಣ ನೀಡಿ ವಿಜಿಲೆನ್ಸ್ ಇಲಾಖೆಯು ಆಗ ಪ್ರಕರಣವನ್ನು ಕೈಬಿಟ್ಟಿತ್ತು. ಅಲ್ಲದೆ, ಲೀ ಅವರ ಆತ್ಮಹತ್ಯೆ ಪತ್ರದ ವಿವರಗಳನ್ನು ಅವರ ಕುಟುಂಬದವರು ಎಂದಿಗೂ ಸಾರ್ವಜನಿಕವಾಗಿ ಬಹಿರಂಗಪಡಿಸಿರಲಿಲ್ಲ.

ಕಳೆದ ಅಕ್ಟೋಬರ್‌ನಲ್ಲಿ, ಗ್ಯಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ತಮ್ಮ ಸ್ಥಾನಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ಹೊಸ ತನಿಖೆಗೆ ಆದೇಶಿಸಿದ್ದರು. ಕಾಂಗ್ರೆಸ್ ಮುಖಂಡ ಮಲಯಂ ಕೀಳು ಗೋಪಾಲಕೃಷ್ಣನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಆದೇಶ ನೀಡಿದ್ದರು.

ವಿಜಿಲೆನ್ಸ್ ಇಲಾಖೆಗೆ ತನಿಖೆ ಆರಂಭಿಸಲು ಸೂಚಿಸಿದ ಕೆಲವು ವಾರಗಳ ನಂತರ, ಚಡಯಮಂಗಲಂ ಮೂಲದ ಸಾಜನ್ ಗ್ಯಾನೇಶ್ ಅವರು ಲೀ ಅವರಿಂದ 2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪದೊಂದಿಗೆ ಮುಂದೆ ಬಂದಿದ್ದಾರೆ. ಅಲ್ಲದೆ, ಈ ಆರೋಪದ ಕುರಿತು ತನಿಖೆ ನಡೆಸುವಂತೆ ಕೋರಿ ಅವರು ವಿಜಿಲೆನ್ಸ್ ನಿರ್ದೇಶಕರಿಗೂ ದೂರು ನೀಡಿದ್ದಾರೆ.

“ನಮ್ಮ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಸಾಜನ್, ಬಾಕಿ ಇರುವ ಬಿಲ್‌ಗಳನ್ನು ಬಿಡುಗಡೆ ಮಾಡಲು ಗ್ಯಾನೇಶ್ ಅವರು 2 ಕೋಟಿ ರೂಪಾಯಿ ಲಂಚ ಕೇಳಿದ್ದಾಗಿ ಲೀ ತಮಗೆ ತಿಳಿಸಿದ್ದರು ಎಂದು ಹೇಳಿದ್ದಾರೆ. 2001ರಲ್ಲಿ ಪಾಟಿ-ಬೆಲ್ ಸಂಸ್ಥೆಯು ಮುಖ್ಯ ಕೇಂದ್ರ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡ ನಂತರ ಸಾಜನ್ ಅವರಿಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದರು” ಎಂದು thenewsminute.com ವರದಿ ಮಾಡಿದೆ.

“ಚಡಯಮಂಗಲಂನಲ್ಲಿದ್ದ ಪಾಟಿ-ಬೆಲ್ ಸಂಸ್ಥೆಯ ಕ್ಯಾಂಪ್ ಆಫೀಸ್ ನನ್ನ ಮನೆಗೆ ಹತ್ತಿರದಲ್ಲಿತ್ತು. ನಾನೂ ಮತ್ತು ನನ್ನ ಸ್ನೇಹಿತರು ಸಾಮಗ್ರಿ ಹಾಗೂ ಯಂತ್ರೋಪಕರಣಗಳನ್ನು ಪೂರೈಸುವ ಗುತ್ತಿಗೆ ಹೊಂದಿದ್ದೆವು. ನಮಗೆ ಹಣ ಸರಿಯಾದ ಸಮಯಕ್ಕೆ ಸಿಗುತ್ತಿತ್ತು, ಆದರೆ ಒಂದು ದಿನ ಅದು ದಿಢೀರನೆ ನಿಂತುಹೋಯಿತು. ನಮ್ಮಲ್ಲಿ ಕೆಲವರು ಪ್ರತಿಭಟಿಸಲು ಲೀ ಅವರ ಕ್ಯಾಬಿನ್‌ಗೆ ಹೋಗಿದ್ದೆವು. ಆಗಲೇ ನಮಗೆ ಪಿಡಬ್ಲ್ಯೂಡಿ ಕಾರ್ಯದರ್ಶಿ ಗ್ಯಾನೇಶ್ ಅವರು ಸುಮಾರು 14 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಬಿಲ್‌ಗಳನ್ನು ತಡೆಹಿಡಿದಿರುವುದು ತಿಳಿಯಿತು. ಗ್ಯಾನೇಶ್ ಅವರು 2 ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂದು ಲೀ ಮತ್ತು ಪಾಟಿ-ಬೆಲ್ ಸಂಸ್ಥೆಯ ಮತ್ತೊಬ್ಬ ಇಂಜಿನಿಯರ್ ಸುಕುಮಾರನ್ ನಮಗೆ ತಿಳಿಸಿದ್ದರು” ಎಂದು ಸಾಜನ್ ಹೇಳಿದ್ದಾಗಿ thenewsminute.com ವರದಿ ಉಲ್ಲೇಖಿಸಿದೆ.

“ನಂತರ, ಸುಕುಮಾರನ್ ಸರ್ ನನಗೆ ಆತ್ಮಹತ್ಯೆ ಮತ್ತು ಡೆತ್‌ನೋಟ್‌ಗಳ ಬಗ್ಗೆ ತಿಳಿಸಿದ್ದರು. ತಾವು ಆ ಪತ್ರಗಳನ್ನು ನೋಡಿರುವುದಾಗಿಯೂ ಮತ್ತು ಅದರಲ್ಲಿ ಗ್ಯಾನೇಶ್ ಅವರ ಹೆಸರಿತ್ತು ಎಂದೂ ಅವರು ನನಗೆ ಹೇಳಿದ್ದರು” ಎಂದು ಸಾಜನ್ ತಿಳಿಸಿದ್ದಾರೆ.

“ಗ್ಯಾನೇಶ್ ಅವರಿಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎಂಬ ವಿಷಯ ಇತ್ತೀಚೆಗಷ್ಟೇ ನನಗೆ ತಿಳಿಯಿತು. ಒಂದು ವೇಳೆ ವಿಜಿಲೆನ್ಸ್ ಇಲಾಖೆಯು ಅಂದೇ ಸುಕುಮಾರನ್ ಅವರಂತಹ ಪಾಟಿ-ಬೆಲ್ ಸಂಸ್ಥೆಯ ನೌಕರರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದರೆ, ಆಗಲೇ ಈ ಪ್ರಕರಣವನ್ನು ಭೇದಿಸಬಹುದಿತ್ತು” ಎಂಬುವುದಾಗಿ ಸಾಜನ್ ಹೇಳಿದ್ದಾರೆ ಎಂದು thenewsminute.com ವಿವರಿಸಿದೆ.

ಪಾಟಿ-ಬೆಲ್ ಸಂಸ್ಥೆಯು ಚಡಯಮಂಗಲಂನಲ್ಲಿ ಕಚೇರಿಯನ್ನು ಹೊಂದಿತ್ತು ಮತ್ತು ಮಲೇಷ್ಯಾ ಮೂಲದವರಾದ ಸುಕುಮಾರನ್ ಅವರು ಅಲ್ಲಿನ ಉದ್ಯೋಗಿಯಾಗಿದ್ದರು ಎಂಬುದನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಿ ಖಚಿತಪಡಿಸಿಕೊಂಡಿದ್ದೇವೆ ಎಂದು thenewsminute.com ಹೇಳಿದೆ.

ಲೀ ಅವರ ನಿಧನದ ಕೆಲ ಸಮಯದ ನಂತರ ಮಲೇಷ್ಯಾಕ್ಕೆ ಹಿಂತಿರುಗಿದ ಸುಕುಮಾರನ್ ಅವರನ್ನು ಪತ್ತೆಹಚ್ಚಲು ನಮಗೆ ಸಾಧ್ಯವಾಗಿಲ್ಲ. ಈ ಯೋಜನೆಯ ಭಾಗವಾಗಿದ್ದ, ಆದರೆ ಹೆಸರು ಬಹಿರಂಗಪಡಿಸಲು ಬಯಸದ ಮೂಲಗಳು ತಿಳಿಸಿರುವ ಪ್ರಕಾರ, ಅವರಿಗೆ ಈ ಲಂಚದ ಆರೋಪದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಮತ್ತು ಲೀ ಅವರು ನವೆಂಬರ್ 2006ರಲ್ಲಿ ಮಲೇಷ್ಯಾಕ್ಕೆ ಹೊರಡುವ ಮೊದಲು ಈ ಬಗ್ಗೆ ಅವರ ಬಳಿ ಎಂದೂ ಪ್ರಸ್ತಾಪಿಸಿರಲಿಲ್ಲ. ಅವರ ಪ್ರಕಾರ, ಬಿಲ್‌ಗಳನ್ನು ತಡೆಹಿಡಿದಿದ್ದು ಹಣಕಾಸು ಇಲಾಖೆಯೇ ಹೊರತು ಲೋಕೋಪಯೋಗಿ ಇಲಾಖೆ ಅಲ್ಲ. ಈ ಬಿಕ್ಕಟ್ಟನ್ನು ಬಗೆಹರಿಸಲು ಕಂಪನಿಯು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬಹುದು ಎಂಬ ಭರವಸೆಯೊಂದಿಗೆ ಲೀ ಮಲೇಷ್ಯಾಕ್ಕೆ ಹೋಗಿದ್ದರು thenewsminute.com ವರದಿ ಉಲ್ಲೇಖಿಸಿದೆ.



























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...

ವಾಯುಮಾಲಿನ್ಯದಿಂದ ಜನರ ಜೀವಕ್ಕೆ ಕುತ್ತು: ‘ಭಾರತೀಯರು ಅನಾಥರಾಗಿ ಗ್ಯಾಸ್ ಚೇಂಬರ್‌ನಲ್ಲಿ ಸಿಲುಕಿದ್ದಾರೆ’; ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಎನ್‌ಜಿಟಿಗೆ ಮನವಿ

ನವದೆಹಲಿ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಜನರು ಉಸಿರಾಡುವುದೇ ಜೀವಕ್ಕೆ ಅಪಾಯಕಾರಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಕಾರಿ ಗಾಳಿಯ ನಡುವೆ ಬದುಕುತ್ತಿರುವ ಜನರ ಆರೋಗ್ಯ ಮತ್ತು...

2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ

2024ರ ಚುನಾವಣೆಗಳ ಸಂದರ್ಭದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳ ಸಂಖ್ಯೆ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (ಇವಿಎಂ) ಎಣಿಕೆಯಾದ ಮತಗಳ ಸಂಖ್ಯೆಯ ನಡುವೆ ವ್ಯತ್ಯಾಸಗಳಿರುವುದನ್ನು ಚುನಾವಣಾ...

“ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ”: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ವಿವಾದಿತ ಹೇಳಿಕೆ!

ತಮ್ಮ ಅಸಂಸದೀಯ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಪದೇಪದೇ ಸುದ್ದಿಯಾಗುವ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ, ದೇಶದ ಅನ್ನದಾತರ ವಿರುದ್ಧ ನಾಲಿಗೆ ಹರಿಬಿಟ್ಟು ಮತ್ತೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ....

ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್‌ ರಕ್ಷಿಸಲು ಟ್ರಂಪ್‌ ವಿಫಲ

'ಎರಡು ಯುದ್ಧಗಳನ್ನು ಗೆದ್ದಿದ್ದಾರೆ' ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ....

ಶಿವಮೊಗ್ಗ: ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಡಿದ್ದ ಕುಟುಂಬ, ಇಬ್ಬರು ಸ್ಟೇಷನ್ ಮಾಸ್ಟರ್‌ಗಳಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ!

ರೈಲಿನ ಶೌಚಾಲಯಗಳಲ್ಲಿ ನೀರಿನ ಸೌಲಭ್ಯವಿಲ್ಲದೆ ಪ್ರಯಾಣಿಕರು ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಿದ ಘಟನೆಯನ್ನು 'ಸೇವೆಯಲ್ಲಾದ ನ್ಯೂನತೆ' ಎಂದು ಪರಿಗಣಿಸಿರುವ ಶಿವಮೊಗ್ಗ ಜಿಲ್ಲಾ ಗ್ರಾಹಕರ ಆಯೋಗವು ರೈಲ್ವೆ ಇಲಾಖೆಗೆ ದಂಡ ವಿಧಿಸಿದೆ. ಯಶವಂತಪುರ ಮತ್ತು ತುಮಕೂರು...

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳಿದರೆ ಗಲ್ಲಿಗೇರಿಸುವುದು ಖಚಿತ: ಪ್ರಾಸಿಕ್ಯೂಟರ್ ಎಚ್ಚರಿಕೆ; ಮೇಲ್ಮನವಿಗೂ ಅವಕಾಶ ಮುಕ್ತಾಯ

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ಮರಳಿದರೆ ಮರಣದಂಡನೆ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಸ್ವಯಂ ದೇಶಭ್ರಷ್ಟರಾಗಿ ನೆಲೆಸಿರುವ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ...

ವಯನಾಡ್‌: ಹಿಂದೂ ವೃದ್ದೆಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಸಹೋದರರು

ಧಾರ್ಮಿಕ ಗಡಿಗಳನ್ನು ಮೀರಿ, ಕೇರಳದ ಬೆಟ್ಟ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಸಹೋದರರು, ತಾವು ಸುಮಾರು ಐದು ದಶಕಗಳ ಕಾಲ ತಾಯಿಯಂತೆ ಪ್ರೀತಿಸಿ ಆರೈಕೆ ಮಾಡಿದ್ದ 85 ವರ್ಷದ ಹಿಂದೂ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಮುಪ್ಪೈನಾದ್...

ಆರು ವರ್ಷಗಳ ಜೈಲು ವಾಸದ ಬಳಿಕ ಇಬ್ಬರು ಮುಸ್ಲಿಂ ಯುವಕರು ಖುಲಾಸೆ: ಯುಎಪಿಎ ಪ್ರಕರಣದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ ಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿ ಆರು ವರ್ಷಗಳಿಂದ ಜೈಲಿನಲ್ಲಿ ನರಳುತ್ತಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಇಬ್ಬರು ಯುವಕರನ್ನು ವಿಶೇಷ ನ್ಯಾಯಾಲಯ 2026ರ ನವೆಂಬರ್ 5ರಂದು ದೋಷಮುಕ್ತಗೊಳಿಸಿದೆ ಎಂದು...