Homeಮುಖಪುಟಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯು ದೇವಾಲಯದ ಅಡಿಪಾಯದ ಮೇಲೆ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು ಹಿಂದೂ ಅರ್ಜಿದಾರರ ಪರ ವಕೀಲ ಹೇಳಿದ್ದಾರೆ. ಇತ್ತೀಚೆಗೆ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ನಡೆಸಿದ ಸಮೀಕ್ಷೆಯ 839 ಪುಟಗಳ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಜೈನ್, ಎಎಸ್‌ಐ ವರದಿಯದ್ದು ಎನ್ನಲಾದ ಆಯ್ದ ಭಾಗಗಳನ್ನು ಓದಿದರು. “ಪುರಾತತ್ವ ಇಲಾಖೆಯು ತನ್ನ ಸಮೀಕ್ಷೆಯಲ್ಲಿ, ಪೂರ್ವ ಅಸ್ತಿತ್ವದಲ್ಲಿರುವ ರಚನೆ ಮತ್ತು ಕಾರಿಡಾರ್ ಪಕ್ಕದಲ್ಲಿನ ಬಾವಿಯನ್ನು ಕಂಡು ಹಿಡಿದಿದೆ. ಸೆಂಟ್ರಲ್ ಚೇಂಬರ್ ಮತ್ತು ಮುಖ್ಯ ದ್ವಾರವು ಮೊದಲೇ ಅಸ್ತಿತ್ವದಲ್ಲಿರುವ ರಚನೆಯನ್ನು ಹೊಂದಿದೆ. ಎಎಸ್‌ಐ ತನ್ನ ಸಮೀಕ್ಷೆಯಲ್ಲಿ ಕಂಬಗಳು ಮತ್ತು ಅವುಗಳ ಮೇಲಿನ ರಚನೆಗಳನ್ನು ಅಧ್ಯಯನ ಮಾಡಿದೆ. ಎಲ್ಲವೂ ದೇವಾಲಯದ ಭಾಗವಾಗಿದೆ ಎಂದು ಉಲ್ಲೇಖಿಸಿದೆ ಎಂದು ಹೇಳಿದರು.

“ಹಿಂದೂ ದೇವಾಲಯದ 34 ಶಾಸನಗಳು ಮಸೀದಿಯ ಆವರಣದಲ್ಲಿ ಕಂಡು ಬಂದಿವೆ. ಶಾಸನಗಳು ದೇವನಾಗರಿ, ತೆಲುಗು ಮತ್ತು ಕನ್ನಡದಲ್ಲಿವೆ. ಜನಾರ್ದನ, ರುದ್ರ ಮತ್ತು ಉಮೇಶ್ವರ ದೇವತೆಗಳ ಹೆಸರುಗಳು ಶಾಸನಗಳಲ್ಲಿ ಕಂಡು ಬಂದಿವೆ” ಎಂದಿದ್ದಾರೆ.

ಆದಿ ವಿಶ್ವೇಶ್ವರ (ಶಿವ) ಮಂದಿರವನ್ನು ಧ್ವಂಸಗೈದು ಮಸೀದಿ ನಿರ್ಮಿಸಲಾಗಿದೆ ಎಂದು ವಕೀಲ ವಿಷ್ಣು ಜೈನ್ ಹೇಳಿದ್ದಾರೆ. ಮಸೀದಿ ಪರ ಕಾನೂನು ಸಮರ ನಡೆಸುತ್ತಿರುವ ಅಂಜುಮಾನ್ ಇಂತಿಝಾಮಿಯಾ ಮಸೀದಿ ಸಮಿತಿಯ ಜೊತೆ ಕಾರ್ಯದರ್ಶಿ ಎಸ್‌.ಎಂ ಯಾಸೀನ್, ನಾವು ಎಎಸ್‌ಐ ವರದಿಯನ್ನು ಓದಿಲ್ಲ. ವರದಿ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು.

ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನೂ ಓದಿ: ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...