Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಮತ್ತು ಎಎಸ್‌ಐ ಸಮೀಕ್ಷೆ ಆದೇಶ ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ಇಂದು(ಡಿ.19) ತಿರಸ್ಕರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು,1991ರ ಹಿಂದೂಗಳ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ವಾರಣಾಸಿ ನ್ಯಾಯಾಲಯಕ್ಕೆ ಸೂಚಿಸಿದೆ.

ತಿರಸ್ಕೃತಗೊಂಡ ಮುಸ್ಲಿಮರ ಐದು ಅರ್ಜಿಗಳಲ್ಲಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿವೆ. ಉಳಿದ ಎರಡು ಅರ್ಜಿಗಳು ಎಎಸ್ಐನ ಸರ್ವೆ ಆದೇಶದ ವಿರುದ್ಧವಾಗಿವೆ.

ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಮಸೀದಿಯ ಆವರಣವು ಮುಸ್ಲಿಂ ಅಥವಾ ಹಿಂದೂ ಕುರುಗಳನ್ನು ಹೊಂದಿರಬಹುದು. ಆದರೆ, ಸಮಸ್ಯೆಯ ಆರಂಭ ಹಂತದಲ್ಲೇ ಅದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅದರ ಅವಶೇಗಳ ಮೇಲೆ ಕಟ್ಟಲಾಗಿದೆ. ಅದನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಆದರೆ, ಇದಕ್ಕೆ ಉತ್ತರ ಪ್ರದೇಶ ಸುನ್ನೀ ವಕ್ಪ್‌ ಮಂಡಳಿ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಿಸಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ವಿರೋಧ ವ್ಯಕ್ತಪಡಿಸಿದ್ದು, ಇದು 1991ರ ಆರಾಧನಾ ಸ್ಥಳಗಳ ಕಾಯಿದೆ (ವಿಶೇಷ ನಿಬಂಧನೆಗಳು) ವಿರುದ್ದವಾಗಿದೆ ಎಂದು ವಾದಿಸಿದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ ಸ್ವಾತಂತ್ರ್ಯ ನಂತರ ಯಾವುದೇ ಧಾರ್ಮಿಕ ಸ್ಥಳಗಳ ರಚನೆಯನ್ನು ಅದರ ಸ್ವರೂಪದಿಂದ ಪರಿವರ್ತಿಸುವುದನ್ನು ನಿಷೇಧಿಸುತ್ತದೆ.

ಕಳೆದ ತಿಂಗಳು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠದಿಂದ ತನ್ನ ಪೀಠಕ್ಕೆ ವರ್ಗಾಯಿಸಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ( ನಿವೃತ್ತ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸಿಜೆಐ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹಿಂದಿನ ನ್ಯಾಯಾಧೀಶರು (ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ) 2021 ರಲ್ಲಿ ತೀರ್ಪನ್ನು ಕಾಯ್ದಿರಿಸಿದರೂ ಮತ್ತು ಎಪ್ಪತ್ತೈದು ವಿಚಾರಣೆಗಳನ್ನು ನಡೆಸಿದರೂ ತೀರ್ಪು ನೀಡಲಿಲ್ಲ. ಆದ್ದರಿಂದ, ಪ್ರಕರಣಗಳನ್ನು ವರ್ಗಾಯಿಸಲು ಸಿಜೆ ಅವರ ಆದೇಶವು ಸಮರ್ಥನೀಯವಾಗಿದೆ ಎಂದು ಹೇಳಿತ್ತು.

ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಭಾರತೀಯ ಪುರಾತತ್ವ ಇಲಾಖೆಯು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸೋಮವಾರ(ಡಿ.18) ಸಲ್ಲಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುವುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲೆ ವಸ್ತು ಸ್ಥಿತಿ ತಿಳಿಯಲು ಆಯೋಗ ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆ ನಡೆಸಿ ಅದರ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ನಿರ್ದೇಶನ ನೀಡಿತ್ತು. ಆದರೆ, ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಪರರ ಅರ್ಜಿ ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...