Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...