Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...