Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...