Homeಕರ್ನಾಟಕಫಿಲಂ ಸಿಟಿ ವಿಚಾರದಲ್ಲಿ ಯಡಿಯೂರಪ್ಪರಿಂದ ದ್ವೇಷ-ನಾಶ ರಾಜಕಾರಣ: ಎಚ್.ಡಿ.ಕೆ ಆರೋಪ

ಫಿಲಂ ಸಿಟಿ ವಿಚಾರದಲ್ಲಿ ಯಡಿಯೂರಪ್ಪರಿಂದ ದ್ವೇಷ-ನಾಶ ರಾಜಕಾರಣ: ಎಚ್.ಡಿ.ಕೆ ಆರೋಪ

- Advertisement -
- Advertisement -

ಜೀವ ವೈವಿಧ್ಯ ತಾಣ ರೋರಿಚ್ ಎಸ್ಟೇಟಿನಲ್ಲಿ ಫಿಲಂ ಸಿಟಿ ನಿರ್ಮಿಸುವುದು ಮಾನ್ಯ ಯಡಿಯೂರಪ್ಪ ಅವರ ದ್ವೇಷ-ನಾಶ ರಾಜಕಾರಣದ ಪ್ರತೀಕ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಫಿಲಂ ಸಿಟಿಯನ್ನು ರಾಮನಗರದಲ್ಲಿ ಕಟ್ಟಬೇಕೆಂದು ನನ್ನ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು.ಈ ಮೂಲಕ ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಯೋಜನೆಯ ಉದ್ದೇಶಗಳ್ಲೊಂದು. ಆದರೆ, ಅದನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಬಿಎಸ್ವೈ ರಾಮನಗರದ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ಅತಿಕ್ರಮಣಕ್ಕೆ ತುತ್ತಾಗದೇ ಜೀವ ವೈವಿಧ್ಯ ಉಳಿಸಿಕೊಂಡಿರುವ ತಾಣ ರೋರಿಚ್ ಎಸ್ಟೇಟ್. ಇದು ಫಿಲಂ ಸಿಟಿಗೆ ಸೂಕ್ತವಲ್ಲ. ಹಾಗೇನಾದರೂ ಇಲ್ಲಿ ಫಿಲಂ ಸಿಟಿ ಕಟ್ಟಿದರೆ ಪರಿಸರ ನಾಶದ ಜತೆಗೇ ಮಾನವ-ವನ್ಯ ಮೃಗಗಳ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಫಿಲಂ ಸಿಟಿ ರಾಮನಗರ ಜಿಲ್ಲೆಯಲ್ಲಿಯೇ ಆಗಲಿ. ಆದರೆ ಅದಕ್ಕಾಗಿ ರೋರಿಚ್ ಎಸ್ಟೇಟ್ ಬಳಸಿಕೊಳ್ಳುವುದು ಬೇಡ. ರೋರಿಚ್ ಎಸ್ಟೇಟನ್ನು ಒಂದು ಉದ್ಯಾನವನವನ್ನಾಗಿ ರೂಪಿಸಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...