Homeಮುಖಪುಟಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ: ಪರಿಷತ್ ಫಲಿತಾಂಶ ಕುರಿತು ಎಚ್‌ಡಿಕೆ ಪ್ರತಿಕ್ರಿಯೆ

ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ: ಪರಿಷತ್ ಫಲಿತಾಂಶ ಕುರಿತು ಎಚ್‌ಡಿಕೆ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ 12, ಕಾಂಗ್ರೆಸ್ 11, ಜೆಡಿಎಸ್ 01 ಮತ್ತು ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು/ ಮುನ್ನಡೆ ಸಾಧಿಸಿವೆ.

ಮಿಷನ್ 123 ಎಂಬ ಗುರಿಯಿಟ್ಟುಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಜೆಡಿಎಸ್‌ ಪಕ್ಷ ಕೇವಲ 1 ಸ್ಥಾನದಲ್ಲಿ ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿ ಪಕ್ಷದ ಮುಖಂಡ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು “ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ಆದರೂ ಮುಂದಿನ ವಿಧಾನಸಭಾ ಚುನಾವಣೆಯ ವೇಳೆಗೆ ಪಕ್ಷ ಪುಟಿದೆದ್ದು ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ” ಎಂದಿದ್ದಾರೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದಿದ್ದಾರೆ.

ಜೆಡಿಎಸ್ ಪಕ್ಷದಿಂದ ಹಾಸನದಿಂದ ಸೂರಜ್ ರೇವಣ್ಣನವರು ಗೆಲುವು ಸಾಧಿಸಿದ್ದಾರೆ. ಮೈಸೂರು ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಜೆಡಿಎಸ್ ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಸಿತಾದರೂ ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ; ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...