ನನ್ನ ವಿರುದ್ಧ ಬೇಕಾದರೆ ದ್ವೇಷ ಸಾಧಿಸಿ ಆದರೆ ಬಡವರ ಮೇಲಲ್ಲ: ಯಡ್ಡಿ ವಿರುದ್ಧ ಎಚ್.ಡಿ.ಕೆ ಗುಡುಗು

ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಎಚ್.ಡಿ ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ.

ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮವನ್ನು ಜಾರಿಗೆ ತರಲಾಗಿತ್ತು. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಎಂದು ಯಡಿಯೂರಪ್ಪ ಹರಿಹಾಯ್ದಿದ್ದಾರೆ.

‘ಬಡವರ ಬಂಧು’ ಯೋಜನೆ ವಿಫಲವಾಗಬಾರದು. ಇದರಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಅರ್ಥಿಕ ಚಟುವಟಿಕೆ‌. ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರು ಚೈತನ್ಯ ತುಂಬಬೇಕು. ಇಲ್ಲವೇ, ಹೋರಾಟ ಎದುರಿಸಬೇಕಾದಿತು ಎಂದು ಎಚ್ಚರಿಕೆ ನೀಡಿದ್ದಾರೆ.

ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್ ಯಡಿಯೂರಪ್ಪನವರು ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ ‘ಪಕ್ಷಪಾತಿ’ ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು ‘ನಾಚಿಕೆಗೇಡಿನ ರಾಜಕೀಯ’ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here