Homeಮುಖಪುಟ'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿದ ಮತದಾರರಿಗೆ ಮನದಾಳದ ಅಭಿನಂದನೆಗಳು: HDK

‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿದ ಮತದಾರರಿಗೆ ಮನದಾಳದ ಅಭಿನಂದನೆಗಳು: HDK

- Advertisement -
- Advertisement -

ಇಂದು ಪ್ರಕಟಗೊಂಡ ಉಪಚುನಾವಣೆಯ ಫಲಿತಾಂಶದ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ.

ಸ್ಪರ್ಧಿಸಿದ್ದ 14 ಕ್ಷೇತ್ರಗಳಲ್ಲಿ ಒಂದನ್ನೂ ಸಹ ಗೆಲ್ಲಲು ಜೆಡಿಎಸ್‌ಗೆ ಸಾಧ್ಯವಾಗಿಲ್ಲ. ಭರವಸೆ ಇಟ್ಟಿದ್ದ ಕೆ.ಆರ್‌ ಪೇಟೆ ಮತ್ತು ಯಶವಂತಪುರ ಕ್ಷೇತ್ರಗಳು ಸಹ ಕೈತಪ್ಪಿ ಹೋಗಿದ್ದು ಅಲ್ಲೆಲ್ಲಾ ಬಿಜೆಪಿ ಭರ್ಜರಿಯಾಗಿ ಜಯಭೇರಿ ಬಾರಿಸಿದೆ. ಈ ವಿಚಾರಕ್ಕೆ ನೊಂದುಕೊಂಡು ಅವರು ಟ್ವೀಟ್‌ ಮಾಡಿದ್ದಾರೆ.

“ಇದೊಂದು “ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು.” ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಇನ್ನೊಂದೆಡೆ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ನ ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ರವರು ತಮ್ಮ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಸು ಕಳ್ಳಸಾಗಣೆ ಆರೋಪ: 60 ವರ್ಷದ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ, ಬೈಕ್‌ಗೆ ಕಟ್ಟಿ ಎಳೆದೊಯ್ದು ಚಿತ್ರಹಿಂಸೆ

0
ಜಾರ್ಖಂಡ್‌ನ ಗರ್ಹ್ವಾ ಜಿಲ್ಲೆಯಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ಮೂವರು ವ್ಯಕ್ತಿಗಳು 60 ವರ್ಷದ ವೃದ್ದನನ್ನು ಮೋಟರ್‌ಸೈಕಲ್‌ಗೆ ಕಟ್ಟಿಹಾಕಿದ ನಂತರ, ವಿವಸ್ತ್ರಗೊಳಿಸಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಜಾರ್ಖಂಡ್‌ನ...